ಪ್ರಮೋದ್ ನಾರಾಯಣ್ ನಿರ್ಮಾಣದ ಚಿತ್ರದ ನಾಯಕ ‌ರಿಷಿ

“ಸಂಜು ವೆಡ್ಸ್ ಗೀತಾ”, ” ಹಾಗೆ ಸುಮ್ಮನೆ” ಚಿತ್ರಗಳ ನಿರ್ಮಾಪಕರಾದ ಪ್ರಮೋದ್ ನಾರಾಯಣ್ ಅವರ ನಿರ್ಮಾಣದ  ಚಿತ್ರದ ನಾಯಕರಾಗಿ ರಿಷಿ ಅಭಿನಯಿಸುತ್ತಿದ್ದಾರೆ.

ರಾಕಡ್ ಫಿಲಂಸ್ ಮುಂಬೈ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಜೊಯ್ ದೀಪ್ ಬಿಸ್ವಾಸ್ ಹಾಗೂ ಸೋನಾಲಿ ಬಿಸ್ವಾಸ್ ನಿರ್ಮಾಣಕ್ಕೆ ಸಾಥ್ ನೀಡುತ್ತಿದ್ದಾರೆ. ವಸಂತ್ ಹಂಗೆ ಮತ್ತು ಕೆ.ಸಿ.ಶಿವಾನಂದ್ ಚಿತ್ರದ ಸಹ ನಿರ್ಮಾಪಕರು.

ಮುಂಗಾರು ಕಳೆದ ಮೇಲೆ ಆಗಸ್ಟ್ ನಲ್ಲಿ ಚಿತ್ರೀಕರಣ ಆರಂಭಿಸುವುದಾಗಿ ನಿರ್ಮಾಪಕ ಪ್ರಮೋದ್ ನಾರಾಯಣ್ ತಿಳಿಸಿದ್ದಾರೆ. ಸದ್ಯದಲ್ಲೇ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. Disney hotstar ನಿರ್ಮಾಣದ “ಸೈತಾನ್” ವೆಬ್ ಸಿರೀಸ್ ಮೂಲಕ ರಿಷಿ ತೆಲುಗಿನಲ್ಲೂ ಹೆಸರು ಮಾಡಿದ್ದಾರೆ. ತಮಿಳುನಾಡಿನಲ್ಲೂ ರಿಷಿ ಜನಪ್ರಿಯ. ಎಲ್ಲಾ ಭಾಷೆಗಳ ಅಭಿಮಾನಿಗಳಿಗೂ ಪ್ರಿಯವಾಗುವಂತಹ ಕಥೆ ನಮ್ಮ ಚಿತ್ರದಲ್ಲಿರುತ್ತದೆ ಎನ್ನುತ್ತಾರೆ ಪ್ರಮೋದ್ ನಾರಾಯಣ್.

ಜನಪ್ರಿಯ ನಿರ್ದೇಶಕ ರಾಮ್ ಗೋಪಾಲ್ ವರ್ಮ ಅವರ ಬಳಿ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿರುವ, ಮೂಲತಃ ಕನ್ನಡಿಗರೆ ಆಗಿರುವ ಕಿಶೋರ್ ಭಾರ್ಗವ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ತೆಲುಗು ಚಿತ್ರವೊಂದನ್ನು ನಿರ್ದೇಶಿಸಿರುವ ಕಿಶೋರ್ ಭಾರ್ಗವ್ ಅವರಿಗೆ ಕನ್ನಡದಲ್ಲಿ ಇದು ಮೊದಲ ಚಿತ್ರ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!