ಹೃತಿಕ್ ರೋಷನ್ ಸಿನಿಮಾದಲ್ಲಿ ಆಕ್ಷನ್ ಪ್ರಿನ್ಸ್!

ಬಾಲಿವುಡ್ ನಟ ಹೃತಿಕ್ ರೋಷನ್ ಜೊತೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟಿಸುವ ಕುರಿತು ಸುದ್ದಿ ಹರಿದಾಡುತ್ತಿದೆ. 

‘ವಾರ್ 2’ ಸಿನಿಮಾದಲ್ಲಿ ಹೃತಿಕ್ ರೋಷನ್ ಅವರ ಸಹೋದರನಾಗಿ ಪವರ್‌ಫುಲ್ ಪಾತ್ರದಲ್ಲಿ ನಟಿಸೋಕೆ ಧ್ರುವ ಸರ್ಜಾಗೆ ಕರೆ ಬಂದಿದೆ ಎನ್ನಲಾಗುತ್ತಿದೆ. ಹೃತಿಕ್, ಜ್ಯೂ.ಎನ್‌ಟಿಆರ್ ಜೊತೆ ಧ್ರುವ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ತಾರೆ ಎಂದು ಹೇಳಲಾಗ್ತಿದೆ. ಆದರೆ ಈ ಬಗ್ಗೆ ಧ್ರುವ ಸರ್ಜಾ ಟೀಂ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಇಲ್ಲ.

ಸಾಕಷ್ಟು ವರ್ಷಗಳ ಬಳಿಕ ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾ ರಿಲೀಸ್ ಆಗುತ್ತಿದೆ.  ಮಾರ್ಟಿನ್, ಕೆಡಿ ಚಿತ್ರಗಳ ಟ್ರೇಲರ್, ಟೀಸರ್ ರಿಲೀಸ್‌ಗಾಗಿ ಫ್ಯಾನ್ಸ್ ಕಾಯುತ್ತಿರುವಾಗಲೇ ಹೃತಿಕ್ ರೋಷನ್ ಜೊತೆ ಧ್ರುವ ಸರ್ಜಾ ನಟಿಸುವ ಕುರಿತು ಮಾಹಿತಿ ಸಿಕ್ಕಿದೆ. ‘ವಾರ್ 2’ ಸಿನಿಮಾದ ಅರ್ಧ ಚಿತ್ರೀಕರಣ ಆಗಿದೆ.

‘ವಾರ್ 2’ ಚಿತ್ರವನ್ನ ಯಶ್ ರಾಜ್ ಫಿಲ್ಮ್ಸ್ ನಿರ್ಮಿಸುತ್ತಿದೆ. ಅಯಾನ್ ಮುಖರ್ಜಿ ಈ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ದೊಡ್ಡ ಹಂತದ ಶೂಟಿಂಗ್ ಪ್ಲಾನ್ ಮಾಡಲಾಗುತ್ತಿದೆ.

ಹೃತಿಕ್ ರೋಷನ್ ಮತ್ತು ಜೂ. ಎನ್.ಟಿ.ಆರ್. ಚಿತ್ರೀಕರಣದಲ್ಲಿ ಭಾಗಿ ಆಗುತ್ತಿದ್ದಾರೆ. ಜೂನಿಯರ್ ಎನ್.ಟಿ.ಆರ್‌ಗೆ ಜೋಡಿ ಆಗುವ ನಾಯಕಿಯ ಹುಡುಕಾಟವೂ ಮುಂದುವರೆದಿದೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!