ಶ್ರೀನಿವಾಸರಾಜು ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಆರು ಹಾಡುಗಳು ಚಿತ್ರದಲ್ಲಿವೆ.
ಗೋಲ್ಡನ್ ಸ್ಟಾರ್ ಗಣೇಶ್ ಮಾತನಾಡಿ, ಬಿಡುಗಡೆಯಾಗಿರುವ ಹಾಡು ಚೆನ್ನಾಗಿದೆ. ಸಿನಿಮಾ ಕೂಡ ಉತ್ತಮವಾಗಿ ಮೂಡಿಬಂದಿದೆ ಎಂದರು.
ಶ್ರೀನಿವಾಸ್ ರಾಜು ಮಾತನಾಡಿ, ಇದು ಗಣೇಶ್ ಅವರಿಗಾಗಿಯೇ ಮಾಡಿರುವ ಕಥೆ. ಫ್ಯಾಮಿಲಿ ಎಂಟರ್ಟೈನರ್. ಎಲ್ಲಾ ಜನರೇಶನ್ ಅವರಿಗೂ ಹಿಡಿಸುವ ಕಥೆಯೂ ಹೌದು. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು ಸುಮಧುರವಾಗಿದೆ. ಕನ್ನಡ ಚಿತ್ರರಂಗದ ಹಿರಿಯ ಹಾಗೂ ಕಿರಿಯ ಕಲಾವಿದರು ಸೇರಿದಂತೆ 64 ಜನ ಕಲಾವಿದರು ಅಭಿನಯಿಸಿದ್ದಾರೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಚಿತ್ರದ ಚೊಚ್ಚಲ ಹಾಡಿಗೆ ಎಲ್ಲಾ ಕಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು.
ನಿರ್ಮಾಪಕ ಪ್ರಶಾಂತ್ ಜಿ ರುದ್ರಪ್ಪ ಮಾತನಾಡಿ, ಇದೊಂದು ಪರಿಶುದ್ಧ ಕೌಟುಂಬಿಕ ಕಥಾ ಹಂದರ ಹೊಂದಿರುವ ಚಿತ್ರ. ಹಾಡುಗಳು ಚೆನ್ನಾಗಿದೆ. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು.
ಗಣೇಶ್ಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧು ಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜಾ, ಗಿರಿ ಶಿವಣ್ಣ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
ಕಳೆದ ಮಾರ್ಚ್ನಲ್ಲಿ ಚಿತ್ರತಂಡ ಸಿನಿಮಾದ ಶೂಟಿಂಗ್ ಪೂರ್ಣಗೊಳಿಸಿತ್ತು. ಬೆಂಗಳೂರು, ವಿಯೆಟ್ನಾಂ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ನಡಿ ಪ್ರಶಾಂತ್ ಜಿ. ರುದ್ರಪ್ಪ ನಿರ್ಮಿಸಿದ್ದಾರೆ.
—
Be the first to comment