ಬಾಲಿವುಡ್​ಗೆ ಹಾರ್ತಿದ್ದಾರಾ ಮೇಘಾ ಶೆಟ್ಟಿ?

ಬಾಲಿವುಡ್ ನಟ ಆರ್ ಮಾಧವನ್ ಜೊತೆ ಕನ್ನಡದ ನಟಿ ಮೇಘಾ ಶೆಟ್ಟಿ ಕಾಣಿಸಿಕೊಂಡಿದ್ದು, ಇಬ್ಬರು ಒಟ್ಟಿಗೆ ಇರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಫೋಟೋಗಳಿಗೆ ಅಭಿಮಾನಿಗಳು ಲೈಕ್ ಗಳ ಸುರಿಮಳೆಗೈದಿದ್ದಾರೆ. ಜೊತೆಗೆ ಕನ್ನಡದ ಬ್ಯೂಟಿ ಮೇಘಾ ಶೆಟ್ಟಿ ಬಾಲಿವುಡ್ ಗೆ ಹಾರ್ತಿದ್ದಾರಾ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ.

ಮೇಘಾ ಶೆಟ್ಟಿ,  ಮಾಧವನ್ ಜೊತೆ ಇರುವ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.  ಅಸಾಧಾರಣ ನಟನೊಂದಿಗೆ ಮಾತನಾಡಲು ಸಮಯ ಕಳೆಯಲು ಅವಕಾಶ ಸಿಕ್ಕಿತು. ನಿಜವಾಗಿಯೂ ಉತ್ತಮ ಕಲಿಕೆಯ ಅನುಭವವಾಗಿದೆ ಎಂದು ಮೇಘಾ ಶೆಟ್ಟಿ ಬರೆದಿದ್ದಾರೆ.

‘ಜೊತೆ ಜೊತೆಯಲ್ಲಿ’ ಧಾರಾವಾಹಿಯಿಂದ ಮೇಘಾ ಶೆಟ್ಟಿ, ಅನು ಸಿರಿಮನೆ ಅಂತಾನೇ  ಫೇಮಸ್ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿಆಕ್ಟಿವ್ ಆಗಿರುವ ಮೇಘಾ ಶೆಟ್ಟಿ ಆಗಾಗ ಫೋಟೋಗಳನ್ನು ಶೇರ್ ಮಾಡುವ ಮೂಲಕ ಅಭಿಮಾನಿಗಳಿಗೆ ಹೊಸ  ಅಪ್ಡೇಟ್ ನೀಡುತ್ತಿರುತ್ತಾರೆ.

ಜೊತೆ ಜೊತೆಯಲಿ ಧಾರಾವಾಹಿ ಯಶಸ್ವಿಯಾದ ಬಳಿಕ ಸಾಕಷ್ಟು ಸಿನಿಮಾ ಆಫರ್​ಗಳು ಮೇಘಾ ಶೆಟ್ಟಿಗೆ ಸಿಕ್ಕಿದೆ. ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ತ್ರಿಬಲ್ ರೈಡಿಂಗ್’ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದರು. ನಂತರ ಡಾರ್ಲಿಂಗ್ ಕೃಷ್ಣ ಜೊತೆ ದಿಲ್ ಪಸಂದ್ ಚಿತ್ರದಲ್ಲಿ ನಟಿಸಿದರು.

‘ಕೈವ’ ಸಿನಿಮಾ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಮೇಘಾ ಶೆಟ್ಟಿ,  ವಿನಯ್ ರಾಜ್‌ಕುಮಾರ್ ಅಭಿನಯದ ಗ್ರಾಮಾಯಣ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್​ನ ‘ಆಪರೇಷನ್ ಲಂಡನ್ ಕೆಫೆ’ ಸಿನಿಮಾ ರಿಲೀಸ್​ಗೆ ರೆಡಿ ಇದೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!