‘ವೀರವ್ವ’ ಪಾತ್ರದಲ್ಲಿ ಭಾವನಾ ಮೆನನ್

ಬಹುಭಾಷಾ‌ ತಾರೆ ಭಾವನಾ ಮೆನನ್ ‘ಉತ್ತರಕಾಂಡ’ ಚಿತ್ರದಲ್ಲಿ ‘ವೀರವ್ವ’ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಭಾವನಾ‌ ಅವರ‌ ಹುಟ್ಟುಹಬ್ಬದ ಅಂಗವಾಗಿ‌ ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡಿದೆ.

ರೋಹಿತ್ ಪದಕಿ ನಿರ್ದೇಶನದ ‘ಉತ್ತರಕಾಂಡ’ ಒಂದು ಆಕ್ಷನ್ ಡ್ರಾಮಾ ಚಿತ್ರವಾಗಿದ್ದು, ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಡಾ ಶಿವರಾಜ್ ಕುಮಾರ್, ನಟರಾಕ್ಷಸ ಡಾಲಿ‌ ಧನಂಜಯ, ಐಶ್ವರ್ಯ ರಾಜೇಶ್, ದಿಗಂತ್ ಮಂಚಾಲೆ, ರಂಗಾಯಣ ರಘು, ಚೈತ್ರ ಆಚಾರ್,ವಿಜಯ್ ಬಾಬು ಮುಂತಾದವರು ನಟಿಸಿದ್ದಾರೆ.

‘ಉತ್ತರಕಾಂಡ’  ಚಿತ್ರಕ್ಕೆ ಅಮಿತ್ ತ್ರಿವೇದಿ ಸಂಗೀತ ಸಂಯೋಜನೆ ಮಾಡಲಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿದ್ದಾರೆ.ವಿಶ್ವಾಸ್ ಕಶ್ಯಪ್ ಪ್ರೊಡಕ್ಷನ್ ವಿನ್ಯಾಸ ಮಾಡಿದ್ದು, ಅನಿಲ್ ಅನಿರುದ್ಧ್ ಮುಖ್ಯ ಸಂಕಲನಕಾರರಾಗಿದ್ದಾರೆ. ಕಾರ್ತಿಕ್ ಗೌಡ ಮತ್ತು ಯೋಗಿ‌ ಜಿ ರಾಜ್ ಕೆ.ಆರ್.ಜಿ. ಸ್ಟೂಡಿಯೋಸ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಿಸಿದ್ದಾರೆ.

ಸ್ಯಾಂಡಲ್‌ವುಡ್‌ನ ಬಹು ನಿರೀಕ್ಷಿತ ಚಿತ್ರಗಳ ಪೈಕಿ ʼಉತ್ತರಕಾಂಡʼ  ಒಂದು. ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ ಕುಮಾರ್‌, ಡಾಲಿ‌ ಧನಂಜಯ್‌ ಮತ್ತೊಮ್ಮೆ ತೆರೆ ಮೇಲೆ ಒಂದಾಗುತ್ತಿರುವ ಕಾರಣಕ್ಕೆ  ಸಿನಿಮಾ ಈಗಾಗಲೇ ಕುತೂಹಲ ಕೆರಳಿಸಿದೆ.

ʼʼಉತ್ತರಕಾಂಡʼದ ಮುಹೂರ್ತ 2022ರಲ್ಲಿ‌ ಆಗಿತ್ತು. ಏ. 15ರಂದು  ಸಿನಿಮಾದ ಶೂಟಿಂಗ್‌ ಆರಂಭಿಸಲಾಗಿದೆ. ಚಿತ್ರಕಥೆ  ಬಯಲುಸೀಮೆಯ ಸಂಸ್ಕೃತಿಯನ್ನು ಎಳೆ ಎಳೆಯಾಗಿ ಬಿಚ್ಚಿಡುವುದರಿಂದ ಹಾಗೂ ಉತ್ತರ ಕರ್ನಾಟಕದ ಆಡುಭಾಷೆಯನ್ನು ಹೊಂದಿರುವುದರಿಂದ ಚಿತ್ರಕ್ಕೆ ನಿಖರವಾದ ಸಂಶೋಧನೆ ಮತ್ತು ಪ್ಲ್ಯಾನಿಂಗ್‌ನ ಅಗತ್ಯದ   ಕಾರಣದಿಂದ ಚಿತ್ರೀಕರಣ ವಿಳಂಬಗೊಂಡಿತು.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!