“ಮಾಫಿಯಾ” ಚಿತ್ರ ಜುಲೈ 26ರಂದು ಬಿಡುಗಡೆ

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ  ನಟಿಸಿರುವ  “ಮಾಫಿಯಾ” ಚಿತ್ರವನ್ನು ಜುಲೈ 26ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ದತೆ ನಡೆಸಿದೆ.

ಆಕ್ಷನ್ ಜಾನರ್ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್ ನಲ್ಲಿ ನಡೆದಿದೆ. ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ 5  ಸಾಹಸದ ಸನ್ನಿವೇಶಗಳಿದೆ.

ಅದಿತಿ ಪ್ರಭುದೇವ ನಾಯಕಿಯಾಗಿ  ಹಾಗೂ ಲೋಹಿತ್ ಹೆಚ್ ನಿರ್ದೇಶಿಸಿರುವ  “ಮಾಫಿಯಾ” ಚಿತ್ರದಲ್ಲಿ ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.

ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಎಸ್ ಪಾಂಡಿಕುಮಾರ್ ಛಾಯಾಗ್ರಹಣವಿದೆ. ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ಚಿತ್ರ ನಿರ್ಮಿಸಿದ್ದಾರೆ.

ಈ ಚಿತ್ರದ ಬಿಡುಗಡೆಗೆ ಪ್ರಜ್ವಲ್ ದೇವರಾಜ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದರು. ಈಗ ಬಿಡುಗಡೆ ದಿನಾಂಕ ಸಮೀಪಿಸುತ್ತಿರುವುದರಿಂದ ಅಭಿಮಾನಿಗಳಿಗೆ ಸಂತಸವಾಗಿದೆ.

——

Be the first to comment

Leave a Reply

Your email address will not be published. Required fields are marked *

Translate »
error: Content is protected !!