“ಬ್ಯಾಕ್ ಬೆಂಚರ್ಸ್” ಜುಲೈ 19ರಂದು ತೆರೆಗೆ

ರಾಜಶೇಖರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರ “ಬ್ಯಾಕ್ ಬೆಂಚರ್ಸ್” ಜುಲೈ 19ರಂದು ರಾಜ್ಯಾದ್ಯಂತ ತೆರೆಗಾಣಲಿದೆ.

ಪಿಪಿ ಪ್ರೊಡಕ್ಷನ್ಸ್ ಅಡಿಯಲ್ಲಿ  ರಾಜಶೇಖರ್  ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.  ರಾಜಶೇಖರ್ ಅವರು ಸಂಪೂರ್ಣವಾಗಿ ಹೊಸಬರ ತಂಡದೊಂದಿಗೆ ಈ ಚಿತ್ರವನ್ನು ತಯಾರಿಸಿದ್ದಾರೆ. ರಂಜನ್, ಜತಿನ್ ಆರ್ಯನ್, ಆಕಾಶ್ ಎಂ.ಪಿ, ಶಶಾಂಕ್ ಸಿಂಹ, ಸುಚೇಂದ್ರ ಪ್ರಸಾದ್, ಅರವಿಂದ್ ಕುಪ್ಳೀಕರ್, ಮಾನ್ಯ ಗೌಡ, ಕುಂಕುಮ್ ಹೆಚ್, ಅನುಷಾ ಸುರೇಶ್, ವಿಯೋಮಿ ವನಿತಾ, ಮನೋಜ್ ಶೆಟ್ಟಿ, ನಮಿತಾ ಗೌಡ, ವಿಕಾಸ್, ರನ್ನ, ವಿಜಯ್ ಪ್ರಸಾದ್, ಚತುರ್ಥಿ ರಾಜ್, ಗೌರವ್ ಮುಂತಾದವರ ತಾರಾಗಣವಿದೆ.

ನಕುಲ್ ಅಭಯಂಕರ್ ಸಂಗೀತ ನಿರ್ದೇಶನ, ಮನೋಹರ್ ಜೋಶಿ ಛಾಯಾಗ್ರಹಣ, ರಂಜನ್ ಮತ್ತು ಅಮರ್ ಗೌಡ ಸಂಕಲನ ಚಿತ್ರಕ್ಕಿದೆ. ಇದೀಗ ಸೆನ್ಸಾರ್ ಅಂಗಳ ತಲುಪಿರುವ “ಬ್ಯಾಕ್ ಬೆಂಚರ್ಸ್” ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ.

‘ಬ್ಯಾಕ್ ಬೆಂಚರ್ಸ್’ ಈಗಾಗಲೇ ಟೀಸರ್ ಮೂಲಕ ಪ್ರೇಕ್ಷಕರನ್ನು ಸೆಳೆದುಕೊಂಡಿದೆ. ಕಾಲೇಜು ಕೇಂದ್ರಿತ ಕಥೆ ಮತ್ತು ಹೊಸತನದ ನಿರೂಪಣೆಯ ಸುಳಿವಿನೊಂದಿಗೆ ಎಲ್ಲಾ ವರ್ಗದ ಪ್ರೇಕ್ಷಕರನ್ನೂ ಚಿತ್ರ ಆಕರ್ಷಿಸಿದೆ.

——

Be the first to comment

Leave a Reply

Your email address will not be published. Required fields are marked *

Translate »
error: Content is protected !!