‘ಪೆನ್​ಡ್ರೈವ್’ ಚಿತ್ರದಲ್ಲಿ ತನಿಷಾ

‘ಬಿಗ್ ಬಾಸ್’ ಖ್ಯಾತಿಯ ತನಿಷಾ ಕುಪ್ಪಂಡ  ಅವರು ‘ಪೆನ್​ಡ್ರೈವ್’ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ.

ಜುಲೈ 4ರಂದು ಈ ಚಿತ್ರದ ಶೀರ್ಷಿಕೆ ಅನಾವರಣ ಆಗಲಿದೆ. ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್ ಅವರು ಈ ಚಿತ್ರದ ಟೈಟಲ್​ನ ಅನಾವರಣ ಮಾಡಲಿದ್ದಾರೆ.  ‘ಪೆನ್​ಡ್ರೈವ್’ ಚಿತ್ರವನ್ನು ಲಯನ್ ಆರ್​. ವೆಂಕಟೇಶ್ ಮತ್ತು ಲಯನ್ ಎಸ್ ವೆಂಕಟೇಶ್​ ನಿರ್ಮಿಸುತ್ತಿದ್ದಾರೆ.

‘ಇದೊಂದು  ಸಸ್ಪೆನ್ಸ್​ ಥ್ರಿಲ್ಲರ್ ಸಿನಿಮಾ. ಈ ಕಾರಣದಿಂದ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ. ಈ ಚಿತ್ರವನ್ನು ಮಾಡಬೇಕು ಎನ್ನುವ ಆಲೋಚನೆ ಮೊದಲೇ ಇತ್ತು. ಆದರೆ ಟೈಟಲ್ ರಿಜಿಸ್ಟರ್ ಮಾಡಿರಲಿಲ್ಲ. ಈಗ ಪೆನ್​ಡ್ರೈವ್ ವಿಚಾರ ಚರ್ಚೆಯಲ್ಲಿರುವುದರಿಂದ ಸ್ವಲ್ಪ ಬೇಗ ಸಿನಿಮಾ ಮಾಡಬೇಕು ಎನಿಸಿತು ಅಷ್ಟೇ’ ಎಂದಿದ್ದಾರೆ ನಿರ್ದೇಶಕ ಸೆಬಾಸ್ಟಿನ್ ಡೇವಿಡ್.

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಖಾಸಗಿ ವಿಡಿಯೋಗಳನ್ನು ಪೆನ್​ಡ್ರೈವ್​ನಲ್ಲಿ ಹಾಕಿ ವೈರಲ್ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಪ್ರಜ್ವಲ್ ಕೇಂದ್ರ ಕಾರಾಗೃಹದಲ್ಲಿ ಇದ್ದಾರೆ. ಈ ಮಧ್ಯೆ ಪೆನ್​ಡ್ರೈವ್ ಶೀರ್ಷಿಕೆ ಅಡಿಯಲ್ಲಿ ಸಿನಿಮಾ  ಬರುತ್ತಿದೆ. ಆದರೆ ಈ ಚಿತ್ರಕ್ಕೂ,  ಪ್ರಕರಣಕ್ಕೂ ಯಾವುದೇ ಲಿಂಕ್ ಇಲ್ಲ ಎಂದಿದ್ದಾರೆ ನಿರ್ದೇಶಕ ಸೆಬಾಸ್ಟಿನ್ ಡೇವಿಡ್.

ರಾಧಿಕಾ, ಸಂಜನಾ ನಾಯ್ಡು, ಅರ್ಚನ, ರೇಣುಕಾ, ಭಾಗ್ಯ, ಗೀತಪ್ರಿಯಾ, ಗೀತಾ ಮೊದಲಾದವರು ಈ ಸಿನಿಮಾದಲ್ಲಿ ಬಣ್ಣ ಹಚ್ಚುತ್ತಿದ್ದಾರೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!