‘ಮಾಫಿಯಾ’ ಆಗಸ್ಟ್ ನಲ್ಲಿ ತೆರೆಗೆ

ಲೋಹಿತ್ ಹೆಚ್ ನಿರ್ದೇಶನದ “ಮಾಫಿಯಾ” ಚಿತ್ರ ಆಗಸ್ಟ್ ನಲ್ಲಿ ತೆರೆಗೆ ಬರಲಿದೆ.

ನಾಯಕ ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರು ನಟಿಸಿರುವ, ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ “ಮಾಫಿಯಾ” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಮೂಲಕ ನಾಯಕ ಪ್ರಜ್ವಲ್ ದೇವರಾಜ್ ಅವರಿಗೆ “ಮಾಫಿಯಾ” ಚಿತ್ರತಂಡ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ಕೋರಿದೆ.

ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರು ಕಾಣಿಸಿಕೊಂಡಿದ್ದಾರೆ.

 ಅದ್ದೂರಿಯಾಗಿ ನಿರ್ಮಾಣವಾಗಿರುವ ಮಾಫಿಯಾ ಸಿನಿಮಾಗೆ ಅನೂಪ್ ಸೀಳಿನ್ ಹಾಗೂ ಗಗನ್ ಬಡೇರಿಯಾ ಸಂಗೀತ ನೀಡಿದ್ದಾರೆ. ಎಸ್ ಪಾಂಡಿಕುಮಾರ್ ಛಾಯಾಗ್ರಹಣವಿದೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!