ಅರಮನೆ ನಗರದಲ್ಲಿ ‘ಫಾದರ್ ‘ ಚಿತ್ರದ ಅದ್ಧೂರಿ ಚಿತ್ರೀಕರಣ ; ಡಾರ್ಲಿಂಗ್ ಕೃಷ್ಣ, ಪ್ರಕಾಶ್ ರಾಜ್, ಅಮೃತ ಅಯ್ಯಂಗಾರ್ ಏನಂದ್ರು ಗೊತ್ತಾ?

ಕನ್ನಡದ ಪ್ರತಿಷ್ಠಿತ ಆರ್ ಸಿ ಸ್ಟುಡಿಯೋಸ್ ನಿರ್ಮಾಣದ ಫಾದರ್ ಚಿತ್ರೀಕರಣ ಅದ್ಧೂರಿಯಾಗಿ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಸಾಗುತ್ತಿದೆ.

ಫಾದರ್ ಸಿನಿಮಾದ ಶೂಟಿಂಗ್ ಸೆಟ್ ಗೆ ಸಿನಿಮಾ ಪತ್ರಕರ್ತರು ಭೇಟಿ ನೀಡಿದ ವೇಳೆ ಚಿತ್ರತಂಡ ಮಾತಿಗಿಳಿಯಿತು. ಪ್ರಕಾಶ್‍ ರೈ ಮತ್ತು ‘ಡಾರ್ಲಿಂಗ್‍’ ಕೃಷ್ಣ ತಂದೆ-ಮಗನಾಗಿ ಅಭಿನಯಿಸುತ್ತಿರುವ ‘ಫಾದರ್’ ಚಿತ್ರದ ಚಿತ್ರೀಕರಣ ಮೈಸೂರಿನ ಸುಮಾರು ನೂರು ವರ್ಷಗಳ ಹಳೆಯ ಮನೆಯಲ್ಲಿ ಕಲರ್ ಫುಲ್ ಆಗಿ ನಡೆಯುತ್ತಿದೆ. ಈ ವೇಳೆ ಸಿನಿಮಾ ತಂಡ ಹೇಳಿಕೊಂಡಿದ್ದು ಹೀಗೆ.

ನಟ ಡಾರ್ಲಿಂಗ್ ಕೃಷ್ಣ ಮಾತನಾಡಿ, ನಾನು ನಿಜಕ್ಕೂ ಲಕ್ಕಿ ಮ್ಯಾನ್. ಯಾಕೆಂದರೆ ಒಳ್ಳೆಯ ಕಥೆಗಳೇ ನನ್ನ ಪಾಲಾಗುತ್ತಿವೆ. ನಾನು ಈ ಕಥೆ ಕೇಳಿದಾಗ, ಮೊದಲು ಇಷ್ಟಪಟ್ಟಿದ್ದು ಪತ್ನಿ ಮಿಲನಾ. ಕಥೆ ಚೆನ್ನಾಗಿದೆ. ನೀವು ಮಾಡಲೇಬೇಕೆಂದು ಹೇಳಿದರು. ಇನ್ನು, ಭಾರತೀಯ ಚಿತ್ರರಂಗ ಕಂಡ ಅದ್ಭುತ ನಟ ಪ್ರಕಾಶ್ ರೈ ಅವರ ಜೊತೆ ನಟಿಸುವ ಆಸೆಯಿತ್ತು. ಅವರ ಜೊತೆ ಅಭಿನಯಿಸುವಾಗ ಭಯ ಆಗುತ್ತಿತ್ತು. ಎಷ್ಟೋ ಬಾರಿ ಅವರು ಅಭಿನಯಿಸುವುದನ್ನು ನೋಡುತ್ತಾ, ಪ್ರತಿಕ್ರಿಯೆ ಕೊಡುವುದನ್ನೇ ಮರೆಯುತ್ತಿದ್ದೆ. ‘ಫಾದರ್’ ಜನರ ಮನಸಿನಲ್ಲಿ ಉಳಿಯುವಂತಹ ಚಿತ್ರವಾಗುತ್ತದೆ’ ಎಂದರು ಡಾರ್ಲಿಂಗ್ ಕೃಷ್ಣ.

ಸಿನಿಮಾದ ಆಕರ್ಷಣೆ ಪ್ರಕಾಶ್ ರೈ ಮಾತನಾಡಿ, ‘ಚಂದ್ರು ಜೊತೆಗೆ ನಾನು ಮೊದಲು ‘ಕಬ್ಜ’ ಚಿತ್ರ ಮಾಡಬೇಕಿತ್ತು. ಆದರೆ, ಕಾರಣಾಂತರಗಳಿಂದ ಅದು ಸಾಧ್ಯವಾಗಲಿಲ್ಲ. ಈಗ “ಫಾದರ್” ಚಿತ್ರದಲ್ಲಿ ಅಭಿನಯಿಸುತ್ತಿದ್ದೇನೆ. ಇದೊಂದು ಮನಸ್ಸಿಗೆ ಹತ್ತಿರವಾಗುವ ಕಥೆ. ತಂದೆ-ಮಗನ ಪ್ರೀತಿಯ ಜೊತೆಗೆ, ಇವತ್ತಿನ ತಂದೆ ಮಕ್ಕಳ ಸಂಬಂಧದ ಬಗ್ಗೆ ಹೇಳಲಾಗಿದೆ. ಕಥೆ ಕೇಳಿದಾಗ ನನಗೆ ಇದು ಇಂದಿಗೆ ಮುಖ್ಯವಾಗಿ ಬೇಕಾಗಿರುವ ಸಿನಿಮಾ ಎಂದೆನಿಸಿತು. ಇದೊಂದು ಕಾಡುವಂತಹ ಚಿತ್ರ. ಆರ್ ಚಂದ್ರು ಆರ್ ಸಿ ಸ್ಟುಡಿಯೋಸ್ ಮೂಲಕ ಐದು ಚಿತ್ರಗಳನ್ನು ನಿರ್ಮಿಸುತ್ತಿರುವುದು ಖುಷಿಯ ವಿಚಾರ. ನಾನು ಕೂಡ ನಿರ್ಮಾಪಕನಾಗಿ ಹಲವು ಚಿತ್ರಗಳನ್ನು ನಿರ್ಮಿಸಿದ್ದೇನೆ. ಈ ಚಿತ್ರದಲ್ಲಿ ಅಭಿನಯಿಸುತ್ತಿರುವುದು ಹಾಗೂ ನಾನು ಬಹಳ ಇಷ್ಟೊಡುವ ಮೈಸೂರಿನಲ್ಲಿ ಚಿತ್ರೀಕರಣವಾಗುತ್ತಿರುವುದು ಖುಷಿಯಾಗಿದೆ. ಇಂತಹ ನಿರ್ಮಾಣ ಸಂಸ್ಥೆಗಳು ಕನ್ನಡಕ್ಕೆ ಬೇಕು. ಕನ್ನಡ ಸಿನಿಮಾ ರಂಗಕ್ಕೆ ಚಂದ್ರು ಅವರ ಕೊಡುಗೆ ಇದೆ. ಇಂತಹವರು ಇಂಡಸ್ಟ್ರಿಗೆ ಬೇಕು ಎಂಬುದನ್ನು ಒತ್ತಿ ಹೇಳಿದರು ಪ್ರಕಾಶ್ ರೈ.

ಸದಾ ಸಿನಿಮಾ ಧ್ಯಾನಿಯಾಗಿರುವ ಆರ್. ಚಂದ್ರ, ತಮ್ಮ ಫಾದರ್ ಬಗ್ಗೆ ಹೇಳಿದ್ದು ಹೀಗೆ. ‘ ನನ್ನ ಆರ್ ಸಿ ಸ್ಟುಡಿಯೋಸ್ ಸಂಸ್ಥೆ ಮೂಲಕ ಐದು ಬಿಗ್ ಬಜೆಟ್ ಸಿನಿಮಾ ನಿರ್ಮಾಣ ಮಾಡುತ್ತಿದ್ದೇನೆ. ಇದು ಸುಲಭವಲ್ಲ. ಸಿನಿಮಾ ಪ್ರೀತಿಯೇ ಇದಕ್ಕೆ ಕಾರಣ. ಫಾದರ್ ಒಂದು ಅದ್ಭುತ ಕಥೆ. ಪ್ರತಿತೊಬ್ಬ ತಂದೆ ಮಗನ ಬಾಂಧವ್ಯಬಿಲ್ಲಿ ಹೇಳಲಾಗುತ್ತಿದೆ. ಇಂಥದ್ದೊಂದು ಕಂಟೆಂಟ್ ಸಿನಿಮಾ ಮಾಡೋಕೆ ಹೆಮ್ಮೆ ಎನಿಸುತ್ತಿದೆ. ಆರ್.ಸಿ ಸ್ಟುಡಿಯೋಸ್ ಬ್ಯಾನರ್ ನಿರ್ಮಾಣದ ಮೊದಲ ಸಿನಿಮಾ ಅನ್ನೋದು ಹೆಗ್ಗಳಿಕೆ. ಈ ಚಿತ್ರಕ್ಕೆ ಗ್ರಾಂಡ್ ಫಾದರ್ ಅಂದರೆ ಅದು ಪ್ರಕಾಶ್ ರಾಜ್ ಎನ್ನಬಹುದು. ಕೃಷ್ಣ ಅವರ ಜೊತೆಗೆ ಈ ಮೊದಲೇ ಸಿನಿಮಾ ಮಾಡಬೇಕಿತ್ತು. ಆದರೆ, ಅದು ಈಗ ಸಾಧ್ಯವಾಗುತ್ತಿದೆ. ಇದು ‘ತಾಜಮಹಲ್’ ತರಹ ಎಮೋಷನ್ ಇರುವಂತ ಚಿತ್ರ. ಇದರಲ್ಲಿ ತಂದೆ-ಮಗನ ಬಾಂಧವ್ಯ ತೋರಿಸಲಾಗುತ್ತಿದೆ. ‘ಫಾದರ್’ ಚ ಎಲ್ಲರಿಗೂ ಇಷ್ಟವಾಗುತ್ತದೆ ಎಂಬ ನಂಬಿಕೆ ಇದೆ. ತಂದೆಯ ಪಾತ್ರದ ಬಗ್ಗೆ ಕೇಳುತ್ತಿದ್ದಂತೆಯೇ, ಈ ಪಾತ್ರವನ್ನು ಪ್ರಕಾಶ್‍ ರೈ ಮಾಡಿದರೆ ಚೆನ್ನಾಗಿರುತ್ತದೆ ಎಂದೆನಿಸಿತು. ಅವರು ಈ ಚಿತ್ರದಲ್ಲಿ ಅಭಿನಯಿಸಲು ಪ್ರೀತಿಯಿಂದ ಒಪ್ಪಿಕೊಂಡಿದ್ದಾರೆ‌. ಚಿತ್ರವನ್ನು ಒಂದೇ ಹಂತದಲ್ಲಿ ಮೈಸೂರು, ವಾರಣಾಸಿ, ಮಂಗಳೂರಿನಲ್ಲಿ ಚಿತ್ರೀಕರಿಸುವ ಯೋಜನೆ‌ಇದೆ ಎಂದರು ಆರ್.ಚಂದ್ರು.

ಅಮೃತಾ ಅಯ್ಯಂಗಾರ್ ಅವರಿಗೆ ಒಂದೊಳ್ಳೆಯ ಕಥೆ ಮತ್ತು ಪಾತ್ರ ಇರುವ ಸಿನಿಮಾದಲ್ಲಿ ನಟಿಸುತ್ತಿರುವುದಕ್ಕೆ ಖುಷಿ ಇದೆಯಂತೆ. ಅದರಲ್ಲೂ ನಮ್ಮೂರಲ್ಲಿ ಚಿತ್ರೀಕರಣ ನಡೆಯುತ್ತಿರುವುದು ಬಹಳ ಖುಷಿಯಾಗಿದೆ. ಪ್ರಕಾಶ್ ರೈ ಅವರ ಜೊತೆಗೆ ನಟಿಸುವ ಆಸೆ ಈಡೇರಿದೆ ಎಂದರು ಅಮೃತಾ.

ದಯಾಳ್ ಪದ್ಮನಾಭ್ ಫಾದರ್ ಸಿನಿಮಾಗೆ ಕಾರ್ಯಕಾರಿ ನಿರ್ಮಾಪಕರು. ಅವರು ಫಾದರ್ ಕುರಿತು ಹೇಳಿದ್ಸಿಷ್ಟು, ‘ಚಂದ್ರು ನನ್ನ ‘ಸಖ ಸಖಿ’ ಚಿತ್ರಕ್ಕೆ ಸಹಾಯಕ ನಿರ್ದೇಶಕರಾಗಿದ್ದರು. ಈಗ ಅವರ ಜೊತೆಗೆ ಕೆಲಸ ಮಾಡುತ್ತಿರುವುದು ಸಂತೋಷದ ವಿಚಾರ. ನಾನು ಕಾರ್ಯಕಾರಿ ನಿರ್ಮಾಪಕ ಎನ್ನುವುದಕ್ಕಿಂತ ಅವರ ಜೊತೆಗಿದ್ದೀನಿ ಎಂದರು.

‘ಫಾದರ್’ ಚಿತ್ರಕ್ಕೆ ರಾಜ್‍ ಮೋಹನ್‍ ಕಥೆ, ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಸುಜ್ಞಾನ್ ಛಾಯಾಗ್ರಹಣ, ‘ಹನುಮಾನ್’ ಖ್ಯಾತಿಯ ಗೌರ ಹರಿ ಸಂಗೀತ ನಿರ್ದೇಶನ, ರಘುನಾಥ್ ಸಂಕಲನ, ವಿನೋದ್ ಸಾಹಸ ನಿರ್ದೇಶನ ಹಾಗೂ ಮದನ್ ಹರಿಣಿ, ಸಂತೋಷ್ ಅವರ ನೃತ್ಯ ನಿರ್ದೇಶನ ವಿರುವ ಈ ಚಿತ್ರಕ್ಕೆ ಮಂಜು ಮಾಂಡವ್ಯ ಸಂಭಾಷಣೆ ಬರೆದಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!