ʻ45ʼ ಚಿತ್ರದ ಕ್ಯಾರೆಕ್ಟರ್ ಟೀಸರ್ ರಿಲೀಸ್

ಶಿವಣ್ಣ ನಟನೆಯ ಹೊಸ ಸಿನಿಮಾ ’45’ ಪೋಸ್ಟರ್ ಟೀಸರ್ ನ್ನು ನಟ, ನಿರ್ದೇಶಕ ರಿಷಬ್ ಶೆಟ್ಟಿ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಇದು ಅರ್ಜುನ್ ಜನ್ಯ ನಿರ್ದೇಶಿಸುತ್ತಿರುವ ಮೊದಲ ಸಿನಿಮಾ ಆಗಿದ್ದು, ಸಿನಿಮಾದಲ್ಲಿ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಕೂಡ ಬಣ್ಣ ಹಚ್ಚಲಿದ್ದಾರೆ. ಶಿವಣ್ಣ ಈ ಸಿನಿಮಾದಲ್ಲಿ ಖಡಕ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ.

ನಟ, ನಿರ್ದೇಶಕ ರಿಷಬ್ ಶೆಟ್ಟಿ ಶಿವಣ್ಣ ನಟನೆಯ ’45’ ಸಿನಿಮಾದ ಪೋಸ್ಟರ್ ಟೀಸರ್ ಅನ್ನು ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ‘ಓಜಿ (ಒರಿಜಿನಲ್ ಗ್ಯಾಂಗ್​ಸ್ಟರ್) ಮತ್ತೆ ಪರಿಚಯಿಸುತ್ತಿದ್ದೇವೆ’ ಎಂಬ ಅಡಿಬರಹದೊಂದಿಗೆ ಟೀಸರ್ ವಿಡಿಯೊ ಶಿವರಾಜ್ ಕುಮಾರ್ ಹಂಚಿಕೊಂಡಿದ್ದಾರೆ.

ಕನ್ನಡ ಚಿತ್ರರಂಗದ ಮೂವರು ಹೆಸರಾಂತ ನಾಯಕನಟರ ಸಮಾಗಮದಲ್ಲಿ ಮೂಡಿ ಬರುತ್ತಿರುವ ಈ ಚಿತ್ರ ಆರಂಭದಿಂದ  ಸಾಕಷ್ಟು ಸದ್ದು ಮಾಡುತ್ತಿದೆ‌. ಬಹುಕೋಟಿ ವೆಚ್ಚದ  ಅದ್ದೂರಿಯಾಗಿ ನಿರ್ಮಾಣ  ಬಹು ನಿರೀಕ್ಷಿತ ಈ ಚಿತ್ರಕ್ಕೆ ಸದ್ಯದಲ್ಲೇ ಕ್ಲೈಮ್ಯಾಕ್ಸ್ ಭಾಗದ ಸಾಹಸ ಸನ್ನಿವೇಶ ಮೂವತ್ತು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿದೆ. ಇಷ್ಟು ದಿನಗಳ ಕಾಲ  ಅದ್ದೂರಿಯಾಗಿ ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ ನಡೆಯುತ್ತಿರುವುದು ಕನ್ನಡದಲ್ಲಿ ಇದೇ ಮೊದಲನೆಯದು ಎನ್ನಲಾಗುತ್ತಿದೆ.

ಅರ್ಜುನ್ ಜನ್ಯ ಅವರು ಜನಪ್ರಿಯ ಸಂಗೀತ ನಿರ್ದೇಶಕರೇ ಆಗಿರುವುದರಿಂದ ಚಿತ್ರದ ಹಾಡುಗಳ ಬಗ್ಗೆ ಸಾಕಷ್ಟು ನಿರೀಕ್ಷೆಯಿದೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!