‘ಕುಬುಸ’ ವಿಡಿಯೋ ಸಾಂಗ್ ರಿಲೀಸ್

ಜುಲೈ 26ರಂದು ತೆರೆಗೆ ಬರುತ್ತಿರುವ ‘ಕುಬುಸ’ ಚಿತ್ರದ ವಿಡಿಯೋ ಸಾಂಗ್ ರಿಲೀಸ್ ಆಗಿದೆ.

ನಟ ದುನಿಯಾ ವಿಜಯ್ ಹಾಡನ್ನು ಬಿಡುಗಡೆ ಮಾಡಿದ್ದಾರೆ. ‘ ಅರರೆ ಅರರೆ ತಂಗಾಳಿಯ ‘ ಹಾಡನ್ನು ವಾಸುಕಿ ವೈಭವ್ ಹಾಡಿದ್ದು, ಚಿತ್ರಕ್ಕೆ ಪ್ರದೀಪ್ ಚಂದ್ರ ಅವರು ಸಂಗೀತ ಹಾಗೂ ಸಾಹಿತ್ಯ ಬರೆದಿದ್ದಾರೆ.

ಚಿತ್ರದಲ್ಲಿ ನಟರಾಜ ಎಸ್ ಭಟ್, ಮಹಾಲಕ್ಷ್ಮಿ, ಮಂಜಮ್ಮ ಜೋಗತಿ, ಅನಿಕಾ ರಮ್ಯ, ಮಂಜು ಗೌಡ ಇತರರು ನಟಿಸಿದ್ದಾರೆ. ವಿ ಶೋಭಾ ಅವರು ವಿ ಶೋಭಾ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಚಿತ್ರವನ್ನು ನಿರ್ಮಿಸಿದ್ದಾರೆ. ಅರ್ಜುನ್ ಕಿಟ್ಟು ಸಂಕಲನ, ಚೇತನ್ ಶರ್ಮಾ ಛಾಯಾಗ್ರಹಣ, ರಘುರಾಮ್ ಚರಣ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.

ಕುಂ.ವೀರಭದ್ರಪ್ಪ ‘ಕುಬುಸ’ ಕಥೆ ಆಧಾರಿಸಿ ರಘು ರಾಮಚರಣ್ ಹೂವಿನ ಹಡಗಲಿ ‘ಕುಬುಸ’ ಸಿನಿಮಾ ನಿರ್ದೇಶಿಸಿದ್ದಾರೆ. ‘ಕುಬುಸ’ ಆರ್. ಚಂದ್ರು ಶಿಷ್ಯ ರಘು ರಾಮಚರಣ್ ಹೂವಿನ ಹಡಗಲಿ ನಿರ್ದೇಶನದ ಮೊದಲ ಸಿನಿಮಾ. ಟಿ.ಎಸ್. ನಾಗಾಭರಣ, ಪ್ರೇಮ್, ಸತ್ಯ ಪ್ರಕಾಶ್ ಸಿನಿಮಾಗಳಲ್ಲೂ ಸಹಾಯಕ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಇವರು ‘ಕುಬುಸ’ ಸಿನಿಮಾ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ.

ಕಲ್ಲು ಒಡೆದು ಹಳ್ಳಿಯಲ್ಲಿ ಜೀವನ ಸಾಗಿಸುವ ತಾಯಿ ತನ್ನ ಮಗನನ್ನು ದೂರದ ಊರಿನಲ್ಲಿ ಓದಿಸುತ್ತಿರುತ್ತಾಳೆ. ಯಾವತ್ತೂ ಬೇರೆ ಊರಿಗೆ ಪಯಣ ಬೆಳೆಸದ, ಬಸ್ಸು ಕೂಡ ಹತ್ತಿರದ ಆಕೆಯನ್ನು ಮಗ ಕೆಲಸ ಸಿಕ್ಕ ಮೇಲೆ ನಗರಕ್ಕೆ ಕರೆದುಕೊಂಡು ಬರುತ್ತಾನೆ. ಮೊದಲಿನಿಂದಲೂ ಕುಬುಸ ಧರಿಸಿ ಅಭ್ಯಾಸವಿರದ ಆಕೆ ಈ ಕಾರಣದಿಂದ ನಗರಕ್ಕೆ ಬಂದಾಗ ಹೇಗೆಲ್ಲ ಜನರಿಂದ ಮುಜುಗರಕ್ಕೆ ಒಳಗಾಗುತ್ತಾಳೆ? ಮುಂದೆ ಏನಾಗುತ್ತೆ ಅನ್ನೋದು ಸಿನಿಮಾದ ಕಥೆ.

ಕಲಾತ್ಮಕ ಸಿನಿಮಾಗಳಿಗಿಂತ ಭಿನ್ನವಾದ ಹೊಸತನ ಒಳಗೊಂಡ ಸಿನಿಮಾ ‘ಕುಬುಸ’. ಚಿತ್ರದಲ್ಲಿ ಮೂಲ ಕಥೆಯ ಬಳ್ಳಾರಿ ಭಾಷೆಯ ಸೊಗಡನ್ನು ಕಾಣಬಹುದಾಗಿದೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು ಜೋಗಿ ಪ್ರೇಮ್, ವಾಸುಕಿ ವೈಭವ್, ಶೃತಿ.ವಿ.ಎಸ್, ಶಿಲ್ಪ ಮುಡ್ಬಿ, ಪ್ರದೀಪ್ ಚಂದ್ರ  ಹಾಡುಗಳಿಗೆ ದನಿಯಾಗಿದ್ದಾರೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!