ಸೈಮಾ ರೇಸ್ ನಲ್ಲಿ ಕಾಟೇರ, ಸಪ್ತ ಸಾಗರದಾಚೆ ಎಲ್ಲೋ

2024ರ ಸೌತ್ ಇಂಡಿಯನ್ ಇಂಟರ್‌ನ್ಯಾಷನಲ್ ಅವಾರ್ಡ್’ (ಸೈಮಾ) ನಾಮೀಷನ್ ಪಟ್ಟಿ ಬಿಡುಗಡೆಯಾಗಿದ್ದು, ಕಾಟೇರ ಹಾಗೂ ಸಪ್ತಸಾಗರದಾಚೆ ಎಲ್ಲೋ ಸೈಡ್-ಎ ಸಿನಿಮಾಗಳು ಸೈಮಾ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿವೆ.

ಈ ಪ್ರಶಸ್ತಿಯನ್ನು  ಸೌತ್ ಸಿನಿಮಾರಂಗದಲ್ಲಿ ತಯಾರಾಗುವ ಸಿನಿಮಾಗಳಿಗೆ ಮಾತ್ರ ಕೊಡಲಾಗುತ್ತದೆ.  ಸೈಮಾ  ಅಧ್ಯಕ್ಷ ಬೃಂದಾ ಪ್ರಸಾದ್ ಅಡುಸುಮಿಲ್ಲಿ ಅವರು 2023ರ ಸೈಮಾ ನಾಮನಿರ್ದೇಶನ ಸಿನಿಮಾ ಪಟ್ಟಿ ಘೋಷಿಸಿದ್ದಾರೆ.

ಬೃಂದಾ ಪ್ರಸಾದ್ “ಕಳೆದ ಎರಡು ವರ್ಷಗಳಲ್ಲಿ ದಕ್ಷಿಣ ಭಾರತದ ಸಿನಿಮಾದ ಪ್ರಾದೇಶಿಕ ಸಿನಿಮಾಗಳು ಭಾಷೆಯನ್ನು ಮೀರಿ ರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ಹೀಗಾಗಿ ಸೈಮಾ 2024 ಪ್ರಬಲ ಸ್ಪರ್ಧಿಗಳ ಪಟ್ಟಿಯನ್ನು ಹೊಂದಿರುತ್ತದೆ” ಎಂದಿದ್ದಾರೆ.

ಸೈಮಾ ರೇಸ್ ನಲ್ಲಿರುವ ಸಿನಿಮಾಗಳು: ಕನ್ನಡ-ಕಾಟೇರ, ತೆಲುಗು-ದಸರಾ, ತಮಿಳು-ಜೈಲರ್, ಮಲಯಾಳಂ-2018.

ತರುಣ್ ಸುಧೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕಾಟೇರ ಚಿತ್ರ 8 ವಿಭಾಗಗಗಳಲ್ಲಿ ನಾಮಿನೇಟ್ ಆಗಿದೆ.  ರಕ್ಷಿತ್ ಶೆಟ್ಟಿ ನಟನೆಯ, ಹೇಮಂತ್ ರಾವ್ ನಿರ್ದೇಶನದ ಸಪ್ತಸಾಗರದಾಚೆ ಎಲ್ಲೋ ಸೈಡ್-ಎ ಚಿತ್ರ 7 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ.

ತೆಲುಗಿನಲ್ಲಿ, ನಾನಿ ಮತ್ತು ಕೀರ್ತಿ ಸುರೇಶ್ ಅಭಿನಯದ ಶ್ರೀಕಾಂತ್ ಒಡೆಲಾ ನಿರ್ದೇಶನದ ‘ದಸರಾ’ ಚಿತ್ರ 11 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದ್ದು, ನಾನಿ ಮತ್ತು ಮೃಣಾಲ್ ಠಾಕೂರ್ ಅಭಿನಯದ ‘ಹಾಯ್ ನಾನ್ನ’ 10 ವಿಭಾಗಗಳಲ್ಲಿ ನಾಮಿನೇಷನ್ ಗೊಂಡಿದೆ.

ತಮಿಳಿನಲ್ಲಿ, ರಜನಿಕಾಂತ್ ಅಭಿನಯದ ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ‘ಜೈಲರ್’ 11 ವಿಭಾಗದಲ್ಲಿ ನಾಮನಿರ್ದೇಶನಗಳೊಂದಿಗೆ ಮುಂಚೂಣಿಯಲ್ಲಿದ್ದರೆ, ಉದಯನಿಧಿ ಸ್ಟಾಲಿನ್ ಮತ್ತು ಕೀರ್ತಿ ಸುರೇಶ್ ಅಭಿನಯದ ‘ಮಾಮಣ್ಣನ್’ ಸಿನಿಮಾ 9 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ.

ಮಲಯಾಳಂನಲ್ಲಿ, ಟೋವಿನೋ ಥಾಮಸ್ ಮತ್ತು ಆಸಿಫ್ ಅಲಿ ಅಭಿನಯದ ಜೂಡ್ ಆಂಥನಿ ಜೋಸೆಫ್ ನಿರ್ದೇಶನದ ‘2018’ ಸಿನಿಮಾ 8 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ, ಮಮ್ಮುಟ್ಟಿ ಮತ್ತು ಜ್ಯೋತಿಕಾ ಅಭಿನಯದ ‘ಕಾತಲ್ – ದಿ ಕೋರ್’ 7 ವಿಭಾಗಗಳಲ್ಲಿ ನಾಮಿನೇಷನ್ ಆಗಿದೆ.

ಆನ್‌ಲೈನ್ ವೋಟಿಂಗ್ ಮೂಲಕ ವಿಜೇತರನ್ನು ಆಯ್ಕೆ ಮಾಡಲಾಗುತ್ತದೆ. ಅಭಿಮಾನಿಗಳು ತಮ್ಮ ನೆಚ್ಚಿನ ತಾರೆಯರು ಮತ್ತು ಚಲನಚಿತ್ರಗಳಿಗೆ www.siima.in ಮತ್ತು SIIMA ನ ಫೇಸ್‌ಬುಕ್ ಪುಟದಲ್ಲಿ ವೋಟ್ ಮಾಡಬಹುದು. ದುಬೈನಲ್ಲಿ ಸೆಪ್ಟಂಬರ್ 14 ಮತ್ತು 15ರಂದು 2024ರ ಸೈಮಾ ನಡೆಯಲಿದೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!