‘ಫಾರೆಸ್ಟ್‌’ ಚಿತ್ರೀಕರಣ ಪೂರ್ಣ

ಚಿಕ್ಕಣ್ಣ ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘ಫಾರೆಸ್ಟ್‌’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ.

ಎನ್.ಎಂ.ಕೆ ಸಿನಿಮಾಸ್ ಲಾಂಛನದಲ್ಲಿ ಎನ್.ಎಂ. ಕಾಂತರಾಜ್   ಸಿನಿಮಾ ನಿರ್ಮಾಣ ಮಾಡಿದ್ದು, ಚಂದ್ರಮೋಹನ್ ಆಕ್ಷನ್‌ ಕಟ್‌ ಹೇಳಿದ್ದಾರೆ. ಮಡಿಕೇರಿ, ಎಂ.ಎಂ.ಹಿಲ್ಸ್, ಸಂಪಾಜೆ ಕಾಡು ಪ್ರದೇಶ ಹಾಗೂ ಬೆಂಗಳೂರಿನಲ್ಲಿ ಚಿತ್ರದ ಚಿತ್ರೀಕರಣ ನಡೆದಿದೆ.

ಇತ್ತೀಚೆಗಷ್ಟೇ  ಪುನೀತ್ ಆರ್ಯ ಅವರು ಬರೆದು ಧರ್ಮವಿಶ್ ಸಂಗೀತ ನೀಡಿರುವ ‘ಓಡೋ ಓಡೋ’ ಎಂಬ ಹಾಡು ಬಿಡುಗಡೆಯಾಯಿತು. ಕೈಲಾಶ್ ಖೇರ್ ಧ್ವನಿಯಲ್ಲಿ ಈ ಹಾಡು ಮೂಡಿ ಬಂದಿದೆ.

ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು, ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ಅವಿನಾಶ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಾಣಾಜೆ, ಸೂರಜ್ ಪಾಪ್ಸ್, ಸುನೀಲ್ ಕುಮಾರ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ನಿರ್ದೇಶಕ ಚಂದ್ರಮೋಹನ್ ಅವರು ಸತ್ಯಶೌರ್ಯ ಸಾಗರ್ ಅವರ ಜೊತೆಗೂಡಿ  ಚಿತ್ರದ ಕಥೆ, ಚಿತ್ರಕಥೆ ರಚಿಸಿದ್ದಾರೆ. ಸಂಭಾಷಣೆಯನ್ನು ಸತ್ಯಶೌರ್ಯ ಸಾಗರ್ ಬರೆದಿದ್ದಾರೆ. ರವಿಕುಮಾರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಅಮರ್ ಕಲಾ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಚಿತ್ರಕ್ಕಿದೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!