‘ಪೌಡರ್’ ರಿಲೀಸ್ ಡೇಟ್ ಪೋಸ್ಟ್ ಪೋನ್

ಕೆಆರ್ ಜಿ ನಿರ್ಮಾಣದ ಬಹುನಿರೀಕ್ಷಿತ ಸಿನಿಮಾ ʻಪೌಡರ್ʼ ಸಿನಿಮಾ ಬಿಡುಗಡೆ ಮುಂದೂಡಲಾಗಿದೆ.  ಕನ್ನಡ ಸಿನಿಮಾಗಳ ಉಳಿವಿಗಾಗಿ ಕೆಆರ್ ಜಿ ಸಂಸ್ಥೆ ಈ ನಿರ್ಣಯ ಕೈಗೊಂಡಿದೆ.

ಆಗಸ್ಟ್ 15ರಂದು  ಕನ್ನಡ ಸಿನಿಮಾಗಳ ಜೊತೆಗೆ ಪರಭಾಷಾ ಸೇರಿ 10ರಿಂದ 15  ಸಿನಿಮಾ ಬಿಡುಗಡೆಯಾಗುತ್ತಿವೆ. ಹೀಗಾಗಿ ಕೆಆರ್ ಜಿ ನಿರ್ಮಾಣ ಸಂಸ್ಥೆ ಆಗಸ್ಟ್ 15ರ ಬದಲಿಗೆ ಆಗಸ್ಟ್ 23ಕ್ಕೆ ʻಪೌಡರ್ʼ  ಸಿನಿಮಾವನ್ನು ತೆರೆಗೆ ತರಲಿದೆ.

ಕನ್ನಡ ಚಿತ್ರರಂಗದ ಸ್ಥಿತಿ ಶೋಚನೀಯವಾಗಿದೆ. ಒಂದೇ ದಿನ ಸಾಕಷ್ಟು ಸಿನಿಮಾಗಳು ಬಿಡುಗಡೆಯಾದರೆ ಬಾಕ್ಸಾಫೀಸ್  ಕಲೆಕ್ಷನ್ ಮೇಲೆ  ಹೊಡೆತ ಬೀಳಲಿದೆ. ಬಾಕ್ಸಾಫೀಸ್ ವಾರ್ ಬೇಡ ಎಂದು ಕೆಆರ್ ಜಿ ಸಂಸ್ಥಾಪಕ  ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ಪೌಡರ್ ಸಿನಿಮಾ ರಿಲೀಸ್ ದಿನಾಂಕವನ್ನು ಮುಂಡೂಡಿದ್ದಾರೆ.

ಜನಾರ್ದನ್ ಚಿಕ್ಕಣ್ಣ ನಿರ್ದೇಶನದ “ಪೌಡರ್” ಚಿತ್ರದಲ್ಲಿ ದಿಗಂತ್ ಮಂಚಾಲೆ, ಧನ್ಯ ರಾಮ್ ಕುಮಾರ್, ಅನಿರುದ್ಧ್ ಆಚಾರ್ಯ, ಶರ್ಮಿಳಾ ಮಾಂಡ್ರೆ, ರಂಗಾಯಣ ರಘು, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಕಾರ್ತಿಕ್ ಗೌಡ, ಯೋಗಿ ಜಿ ರಾಜ್ ಮತ್ತು ವಿಜಯ್ ಸುಬ್ರಹ್ಮಣ್ಯಂ ಕೆ.ಆರ್.ಜಿ.ಸ್ಟೂಡಿಯೋಸ್‌ ಬ್ಯಾನರ್  ಹಾಗೂ ಅರುನಭ್ ಕುಮಾರ್ ಟಿ.ವಿ.ಎಫ್.ಮೋಷನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಿಸಿದ್ದಾರೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!