ಬಿಗ್ ಸ್ಕ್ರೀನ್ ಗೆ ನವೀನ್ ಸಜ್ಜು ಎಂಟ್ರಿ

ಗಾಯಕ ನವೀನ್ ಸಜ್ಜು ಬಿಗ್ ಸ್ಕ್ರೀನ್ ಗೆ ಎಂಟ್ರಿ ಕೊಟ್ಟಿದ್ದಾರೆ. ನವೀನ್ ನಟನೆಯ ಹೊಸ ಸಿನಿಮಾಗೆ ‘ಲೋ ನವೀನ’ ಎಂದು ಟೈಟಲ್ ಇಡಲಾಗಿದೆ.

ಸ್ಯಾಂಡಲ್‌ ವುಡ್‌, ಕಿರುತೆರೆಯ 100 ಜನ ನಟ- ನಟಿಯರು  ತಮ್ಮ ಸೋಷಿಯಲ್‍ ಮೀಡಿಯಾದ ಖಾತೆಗಳ ಮೂಲಕ ‘ಲೋ ನವೀನ’ ಚಿತ್ರದ ಪೋಸ್ಟರ್‍ ಬಿಡುಗಡೆ ಮಾಡುವ ಮೂಲಕ ನವೀನ್ ಸಜ್ಜು ಚೊಚ್ಚಲ ಸಿನಿಮಾಗೆ ಶುಭ ಕೋರಿದ್ದಾರೆ.

‘ಲೋ ನವೀನ’ ಹಳ್ಳಿ ಸೊಗಡಿನ ಚಿತ್ರವಾಗಿದೆ. ನವೀನ್ ಸಜ್ಜು ಅವರೇ ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಧನುರ್ದಾರಿ ಪವನ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರಕ್ಕೆ ಮೂರು ಜನ ಸಿನಿಮಾಟೋಗ್ರಾಫರ್ ಗಳಿದ್ದಾರೆ.

ನವೀನ್ ಸಜ್ಜು ಸ್ಟುಡಿಯೋ ಬ್ಯಾನರ್ ಅಡಿ ತಯಾರಾರಗುತ್ತಿರುವ ಸಿನಿಮಾಗೆ ಅನಿವಾಸಿ ಭಾರತೀಯರಾದ ವರ್ಜೀನಿಯಾ ನಿವಾಸಿ ಕೀರ್ತಿ ಸ್ವಾಮಿ ಬಂಡವಾಳ ಹೂಡಿದ್ದಾರೆ. ‘ಬಿಗ್ ಬಾಸ್’ ಖ್ಯಾತಿಯ ಅಕ್ಷತಾ ಪಾಂಡವಪುರ ಹಾಗೂ ಪ್ರಸನ್ನ ಸಾಗರ ಅವರ ವಸ್ತ್ರವಿನ್ಯಾಸ ಚಿತ್ರಕ್ಕಿದೆ.

ಮೈಸೂರು, ಮಂಡ್ಯ, ಬೆಂಗಳೂರು ಸುತ್ತಮುತ್ತ ಚಿತ್ರೀಕರಣಕ್ಕೆ ಯೋಜನೆ ಹಾಕಿಕೊಂಡಿದ್ದು, ಸಹ ನಟರು, ತಂತ್ರಜ್ಞರ ಪಟ್ಟಿ ಅಂತಿಮಗೊಂಡಿದೆ. ಚಿತ್ರದ ನಾಯಕಿಯಾಗಿ ಹೊಸಬರನ್ನು ಚಿತ್ರತಂಡ ಹುಡುಕಾಟ ನಡೆಸುತ್ತಿದೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!