‘ಟಾಕ್ಸಿಕ್’ ಬಿಡುಗಡೆ ತಡವಾಗುವ ಸಾಧ್ಯತೆ

 ಸೂಪರ್‌ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಮುಂದಿನ ವರ್ಷ ಬೇಸಿಗೆಯಲ್ಲಿ ಬಿಡುಗಡೆಯಾಗುವುದಿಲ್ಲ ಎಂದು  ಚರ್ಚೆ ನಡೆಯುತ್ತಿದೆ.

ಚಿತ್ರದಲ್ಲಿ ಖ್ಯಾತ ತಾರೆಯರು ಅಭಿನಯಿಸಲಿದ್ದು ಅವರ ದಿನಾಂಕಗಳನ್ನು ಪಡೆಯುವುದು ದೊಡ್ಡ ಸವಾಲಾಗಿದೆ. ಈ ಕಾರಣಕ್ಕಾಗಿ ಬಿಡುಗಡೆ ದಿನಾಂಕವನ್ನು ಮುಂದೂಡಲು ಚಿತ್ರತಂಡ ನಿರ್ಧರಿಸಿದೆ. ಚಿತ್ರದಲ್ಲಿ ಸಾಕಷ್ಟು ವಿಶುವಲ್ ಎಫೆಕ್ಟ್ ಇರಲಿದೆ ಎಂದೂ ಹೇಳಲಾಗಿದೆ.

ಪ್ಯಾನ್ ಇಂಡಿಯಾ ಮತ್ತು ದೊಡ್ಡ ಬಜೆಟ್ ಚಿತ್ರ ‘ಟಾಕ್ಸಿಕ್’ನಲ್ಲಿ, ನಯನತಾರಾ, ಯಶ್ ಅವರ ಸಹೋದರಿಯ ಪಾತ್ರವನ್ನು ನಿರ್ವಹಿಸಲಿದ್ದಾರೆ. ಹುಮಾ ಖುರೇಷಿ ನೆಗೆಟಿವ್ ಪಾತ್ರವನ್ನು ನಿರ್ವಹಿಸಲಿದ್ದಾರೆ. ಡ್ರಗ್ ಮಾಫಿಯಾ ಹಿನ್ನೆಲೆಯ ಈ ಚಿತ್ರದಲ್ಲಿ ಯಶ್ ಗ್ಯಾಂಗ್ ಸ್ಟರ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಡಿಸೆಂಬರ್ 2023ರಲ್ಲಿ ಯಶ್ ಪ್ರೋಮೋವನ್ನು ಹಂಚಿಕೊಳ್ಳುವ ಮೂಲಕ ಚಿತ್ರವನ್ನು ಘೋಷಿಸಿದ್ದರು.

‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ನ್ನು ಗೀತು ಮೋಹನ್‌ದಾಸ್ ನಿರ್ದೇಶಿಸಿದ್ದು ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಸಹ-ನಿರ್ಮಾಣ ಮಾಡಿದ್ದಾರೆ. ಇದು ಯಶ್ ಅವರ 19ನೇ ಚಿತ್ರ.  ಟಾಕ್ಸಿಕ್ ಚಿತ್ರವನ್ನು 2025ರ ಏಪ್ರಿಲ್ 10ರಂದು ಜಗತ್ತಿನಾದ್ಯಂತ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಆದರೆ ಈಗ ಈ ಚಿತ್ರದ ಬಿಡುಗಡೆ ತಡವಾಗುವ ಸಾಧ್ಯತೆ ಇದೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!