‘ರಾನಿ’ಗೆ ಯು/ಎ ಪ್ರಮಾಣಪತ್ರ

ಕಿರಣ್‌ರಾಜ್‌ ನಟನೆಯ ‘ರಾನಿ’  ಚಿತ್ರಕ್ಕೆ ಸೆನ್ಸಾರ್‌ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ.

ಗುರುತೇಜ್ ಶೆಟ್ಟಿ ಈ ಚಿತ್ರಕ್ಕೆ ಆಕ್ಷನ್‌ ಕಟ್‌ ಹೇಳಿದ್ದಾರೆ. ಚಿತ್ರ ಸ್ಟಾರ್ ಕ್ರಿಯೇಷನ್ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣವಾಗಿದ್ದು, ರವಿಶಂಕರ್, ಮೈಕೋ ನಾಗರಾಜ್, ಉಗ್ರಂ ರವಿ, ಉಗ್ರಂ ಮಂಜು, ಬಿ.ಸುರೇಶ, ಮಂಡ್ಯ ರಮೇಶ್, ಸುಜಯ್ ಶಾಸ್ತ್ರಿ, ಸೂರ್ಯ ಕುಂದಾಪುರ, ಧರ್ಮಣ್ಣ ಕಡೂರು, ಗಿರೀಶ್ ಹೀಗೆ ದೊಡ್ಡ ಕಲಾವಿದರ ದಂಡೇ ಚಿತ್ರದಲ್ಲಿದೆ.

ಕಿರಣ್‌ರಾಜ್‌ ‘ಕನ್ನಡತಿ’ ಧಾರಾವಾಹಿ ಬಳಿಕ ‘ರಾನಿ’ ಪ್ರಾಜೆಕ್ಟ್‌ ಕೈಗೆತ್ತಿಕೊಂಡಿದ್ದಾರೆ. ಸಮೀಕ್ಷಾ, ಅಪೂರ್ವ, ರಾದ್ಯಾ  ಚಿತ್ರದ ನಾಯಕಿಯರು.

‘ಇದೊಂದು ಗ್ಯಾಂಗ್‌ಸ್ಟರ್ ಸಿನಿಮಾ. ಆದರೂ ಕುಟುಂಬ ಸಮೇತ ನೋಡುವಂತಹ ಭಾವನಾತ್ಮಕ ವಿಷಯಗಳೂ ಚಿತ್ರದಲ್ಲಿವೆ’ ಎಂದಿದ್ದಾರೆ ಗುರುತೇಜ್ ಶೆಟ್ಟಿ.

ರಾಘವೇಂದ್ರ ಬಿ.ಕೋಲಾರ್ ಛಾಯಾ ಗ್ರಹಣ, ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಸಚಿನ್ ಬಸ್ರೂರ್ ಹಿನ್ನಲೆ ಸಂಗೀತ ನೀಡಿದ್ದಾರೆ. ಸಿನಿಮಾ ಆಗಸ್ಟ್‌ 30ರಂದು ತೆರೆಕಾಣುತ್ತಿದೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!