ಬಾಲಿವುಡ್ ಚಿತ್ರಗಳಲ್ಲಿ ಭಾರತವನ್ನು ಕೆಟ್ಟದಾಗಿ ತೋರಿಸಲಾಗಿದೆ: ರಿಷಬ್ ಶೆಟ್ಟಿ

ಭಾರತೀಯ ಸಿನಿಮಾಗಳು ಅದರಲ್ಲೂ ವಿಶೇಷವಾಗಿ ಬಾಲಿವುಡ್ ಚಿತ್ರಗಳಲ್ಲಿ ಭಾರತವನ್ನು ಕೆಟ್ಟದಾಗಿ ತೋರಿಸಲಾಗಿದೆ ಎಂದು ನಟ ರಿಷಬ್ ಶೆಟ್ಟಿ ಹೇಳಿದ್ದಾರೆ.

ಬಾಲಿವುಡ್​ನವರು ಸಿನಿಮಾ ಮಾಡುವುದಕ್ಕೂ ದಕ್ಷಿಣ ಭಾರತದವರು ಸಿನಿಮಾ ಮಾಡುವುದಕ್ಕೂ ಸಾಕಷ್ಟು ವ್ಯತ್ಯಾಸ ಇದೆ. ಭಾರತವನ್ನು ಕೆಟ್ಟದಾಗಿ ತೋರಿಸಿ ಇದೇ ಸಿನಿಮಾ ಮಾಡೋ ಆರ್ಟ್ಸ್​ ಎಂದುಕೊಂಡು ಹೊರದೇಶಗಳಿಗೆ ಹೋಗಿ ಅವಾರ್ಡ್​ಗಳನ್ನು ಗೆದ್ದು ಬಂದಿದ್ದನ್ನು ನೋಡಿದ್ದೇನೆ. ನಮ್ಮ ದೇಶ ನಮ್ಮ ಹೆಮ್ಮೆ. ನನ್ನ ರಾಜ್ಯ ನನ್ನ ಹೆಮ್ಮೆ. ನನ್ನ ಭಾಷೆ ನನ್ನ ಹೆಮ್ಮೆ. ನಮ್ಮಲ್ಲಿರೋದನ್ನು ಪಾಸಿಟಿವ್ ನೋಟ್​ನಲ್ಲಿ ತೋರಿಸಬಹುದಲ್ಲ’ ಎಂದಿದ್ದಾರೆ ರಿಷಬ್.

ರಿಷಬ್ ಶೆಟ್ಟಿ ಅವರ ಹೇಳಿಕೆ ವೈರಲ್ ಆಗಿದೆ. ಅನೇಕರು ರಿಷಬ್ ಹೇಳಿಕೆಯನ್ನು ಬೆಂಬಲಿಸಿ  ರಿಷಬ್ ಶೆಟ್ಟಿ ಅವರು ಸರಿಯಾದ ರೀತಿಯಲ್ಲಿ ಮಾತನಾಡಿದ್ದಾರೆ ಎಂದು  ಅಭಿಪ್ರಾಯಪಟ್ಟಿದ್ದಾರೆ.

ರಿಷಬ್ ಅವರಿಗೆ  ‘ಕಾಂತಾರ’ ಸಿನಿಮಾ ನಟನೆಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ  ಸಿಕ್ಕಿದೆ. ಈ ಮೂಲಕ ಅವರ ಜನಪ್ರಿಯತೆ ಹೆಚ್ಚಾಗಿದೆ.  ರಿಷಬ್ ಶೆಟ್ಟಿ ಅವರು ನಟನೆ, ನಿರ್ದೇಶನದ ಜೊತೆಗೆ ನಿರ್ಮಾಣದಲ್ಲೂ ಬ್ಯುಸಿ ಇದ್ದಾರೆ. ಹೊಸ ಹೀರೋಗಳ ಸಿನಿಮಾಗಳನ್ನು ಅವರು ನಿರ್ಮಾಣ ಮಾಡುತ್ತಿದ್ದಾರೆ.

ರಿಷಬ್ ಶೆಟ್ಟಿ ನಿರ್ಮಾಣ  ಹಾಗೂ ಪ್ರಮೋದ್ ಶೆಟ್ಟಿ ನಟನೆಯ ‘ಲಾಫಿಂಗ್ ಬುದ್ಧ’ ಸಿನಿಮಾ ಈ ವಾರ ರಿಲೀಸ್ ಆಗುತ್ತಿದೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!