ಯೋಗರಾಜ್ ಭಟ್ ನಿರ್ದೇಶನದ ‘ಮನದ ಕಡಲು’ ಸಿನಿಮಾ ಚಿತ್ರಿಕರಣದ ವೇಳೆ ಮೂವತ್ತು ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಮೃತಪಟ್ಟಿರುವ ಪ್ರಕರಣ ಸಂಬಂಧ ಯೋಗರಾಜ್ ಭಟ್ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಲೈಟ್ ಮ್ಯಾನ್ ಮೋಹನ್ ಕುಮಾರ್ ಮೃತ ದುರ್ದೈವಿ. ಬೆಂಗಳೂರು ಗ್ರಾಮಾಂತರದ ನೆಲಮಂಗಲ ಬಳಿಯ ಅಡಕಮಾರನಹಳ್ಳಿಯಲ್ಲಿ ಸೆ. 3ರ ಸಂಜೆ ಶೂಟಿಂಗ್ ಸೆಟ್‌ನಲ್ಲಿ ಲೈಟ್ ಬಿಚ್ಚುವಾಗ ಆಯಾ ತಪ್ಪಿ ಮೋಹನ್ ಕುಮಾರ್ ಕೆಳಗೆ ಬಿದ್ದಿದ್ದರು. ಕೆಳಗೆ ಬಿದ್ದ ರಭಸಕ್ಕೆ ಮೋಹನ್ ಕುಮಾರ್ ತಲೆಗೆ ಗಂಭೀರ ಪೆಟ್ಟಾಗಿ ರಕ್ತಸ್ರಾವವಾಗಿತ್ತು. ಕೂಡಲೇ ಮೋಹನ್ ಕುಮಾರ್‌ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಗೊರಗುಂಟೆಪಾಳ್ಯ ಖಾಸಗಿ ಆಸ್ಪತ್ರೆಯಲ್ಲಿ ಮೋಹನ್ ಕುಮಾರ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ನಿರ್ದೇಶಕ ಯೋಗರಾಜ್ ಭಟ್ ಸೇರಿದಂತೆ ಮ್ಯಾನೇಜರ್ ಸುರೇಶ್, ಅಸಿಸ್ಟೆಂಟ್ ಮ್ಯಾನೇಜರ್ ಮನೋಹರ್, ಅಡಕಮಾರನಹಳ್ಳಿಯ ಕೃಷ್ಣಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ. A4 ಎಂದು ಯೋಗರಾಜ್ ಭಟ್ ವಿರುದ್ಧ ಕೇಸ್ ದಾಖಲಾಗಿದೆ.
ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಎಫ್‌ಐಆರ್ ದಾಖಲಾಗಿದೆ. ಮೃತನ ಸಹೋದರ ಶಿವರಾಜ್ ನೀಡಿದ ದೂರಿನನ್ವಯ ಎಫ್‌ಐಆರ್ ದಾಖಲಾಗಿದೆ.
Be the first to comment