ಕಲಾವಿದೆಯರ ಮೇಲೆ ದೌರ್ಜನ್ಯ: ಸೆ.16ರಂದು ವಾಣಿಜ್ಯ ಮಂಡಳಿಯಲ್ಲಿ ಸಭೆ

ಕನ್ನಡ ಚಿತ್ರರಂಗದಲ್ಲಿ ಕಲಾವಿದೆಯರ ಮೇಲೆ ದೌರ್ಜನ್ಯದ ವಿಚಾರ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಸೆಪ್ಟಂಬರ್ 16 ರಂದು ವಾಣಿಜ್ಯ ಮಂಡಳಿಯಲ್ಲಿ ಸಭೆ ನಡೆಸಲು ತೀರ್ಮಾನಿಸಲಾಗಿದೆ.

ಸೆಪ್ಟಂಬರ್ 16ರ ಸೋಮವಾರದಂದು ವಾಣಿಜ್ಯ ಮಂಡಳಿಯಲ್ಲಿ ಸಭೆ ನಡೆಸಲು ನಿರ್ಧರಿಸಿದ್ದು ಬೆಳಗ್ಗೆ 11.30ಕ್ಕೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ನೇತೃತ್ವದಲ್ಲಿ ಸಭೆ ನಡೆಯಲಿದೆ.

ಚಿತ್ರರಂಗದ ಕಲಾವಿದೆಯರ ಜೊತೆ ಅಧ್ಯಕ್ಷೆ ಮಾತುಕತೆ ಆಡಲಿದ್ದು, ಕಲಾವಿದೆಯರು ಎದುರಿಸುತ್ತಿರುವ ಸಮಸ್ಯೆ, ಸೌಲಭ್ಯ, ಭದ್ರತೆಗಳು ಕುರಿತು ಮಾತುಕತೆ ನಡೆಸಿ ರಿಪೋರ್ಟನ್ನ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಲ್ಲಿಸಲಿರುವ ಆಯೋಗ ನಂತರ ರಾಜ್ಯದಲ್ಲೂ ಸಮಿತಿ ರಚನೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ.

ಕನ್ನಡ ಚಲನಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಕಿರುಕುಳ ಸೇರಿದಂತೆ ಸಮಸ್ಯೆಗಳನ್ನು ಅಧ್ಯಯನ ಮಾಡಿ ವರದಿ ಮಾಡಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯನ್ನು ರಚಿಸುವಂತೆ ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ (ಫೈರ್) ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿದೆ.

ಲಯಾಳಂ ಚಿತ್ರರಂಗದ  ಕಾಮಕಾಂಡದ ಬಗ್ಗೆ ನ್ಯಾಯಮೂರ್ತಿ ಹೇಮಾ ಕಮಿಟಿ ವರದಿ ಮಾಡಿತ್ತು.ಕೆಲವು ನಟಿಯರು ಮಾಲಿವುಡ್‌ನ ನಟರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದರು. ಇದೇ ರೀತಿ ಕಮಿಟಿ ರಚನೆಯಾಗಬೇಕು ಎಂದು ಬೇರೆ ಚಿತ್ರರಂಗಗಳು ಪಟ್ಟು ಹಿಡಿದಿವೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!