ಯಾವುದೇ ಸಮಯದಾಯವನ್ನು ಅವಮಾನ ಮಾಡುವ ಮತ್ತು ನೋಯಿಸುವ ಉದ್ದೇಶ ಹೊಂದಿಲ್ಲ ಎಂದು ಲಂಗೋಟಿ ಮ್ಯಾನ್ ಶೀರ್ಷಿಕೆ ಬಗ್ಗೆ ನಿರ್ದೇಶಕಿ ಸಂಜೋತಾ ಭಂಡಾರಿ ಸ್ಪಷ್ಟನೆ ನೀಡಿದ್ದಾರೆ.
ಈ ಸಿನಿಮಾದ ಟೀಸರ್ ಬಿಡುಗಡೆ ಆದಾಗ, ಒಂದು ಸಮುದಾಯದ ಜನ ಲಂಗೋಟಿ ಮ್ಯಾನ್ ಸಿನಿಮಾವನ್ನು ಬ್ಯಾನ್ ಮಾಡಬೇಕು ಎಂದು ಪಟ್ಟು ಹಿಡಿದಿದ್ದರು. ಈ ಬಗ್ಗೆ ಮಾತನಾಡಿರುವ ನಿರ್ದೇಶಕಿ ಸಂಜೋತ ಭಂಡಾರಿ, ‘ಲಂಗೋಟಿ ಮ್ಯಾನ್’ ಚಿತ್ರ ಅನಗತ್ಯ ಕಾರಣಕ್ಕೆ ವಿವಾದಕ್ಕೆ ಎಡೆ ಮಾಡಿ ಕೊಟ್ಟಿದೆ. ಚಿತ್ರ ನೋಡಿದ ಮೇಲೆ ಈ ಶೀರ್ಷಿಕೆ ಸೂಕ್ತ ಅಂತ ಗೊತ್ತಾಗಲಿದೆ. ಯಾವ ಸಮಯದಾಯವನ್ನು ಅವಮಾನ ಮಾಡುವ ಮತ್ತು ನೋಯಿಸುವ ಉದ್ದೇಶ ಇಲ್ಲ. ಸೆಪ್ಟೆಂಬರ್ 20 ರಂದು ಚಿತ್ರ ಬಿಡುಗಡೆಯಾಗಲಿದೆ. ಇದು ಎಲ್ಲರಿಗೂ ಇಷ್ಟವಾಗಲಿದೆ ಎಂದು ಹೇಳಿದ್ದಾರೆ.
ತಾತ ಮೊಮ್ಮಗನ ಸುತ್ತ ನಡೆಯುವ ಕಥೆ ಇದು. ತಾತನಿಗೆ ಮೊಮ್ಮಗ ಲಂಗೋಟಿ ಹಾಕಿಕೊಳ್ಳಬೇಕು ಎಂಬ ಬಯಕೆ. ಮೊಮ್ಮಗನಿಗೆ ಅಂಡರ್ವೇರ್ ಹಾಕಿಕೊಳ್ಳುವ ಆಸೆ. ತಾತಾ ಇರುವವರೆಗೂ ಅಂಡರ್ವೇರ್ ಹಾಕಲು ಬಿಡಲ್ಲ. ಅವರು ಸಾಯುತ್ತಿಲ್ಲ. ನಾನು ಅಂಡರ್ವೇರ್ ಹಾಕಲು ಆಗುತ್ತಿಲ್ಲ ಎಂಬುದು ಮೊಮ್ಮಗನ ಕೊರಗು. ಈ ರೀತಿಯ ಕಥೆಯನ್ನು ಹಾಸ್ಯ ರೂಪದಲ್ಲಿ ತೆರೆಗೆ ತರಲಾಗುತ್ತಿದೆ ಎಂದು ನಟ ಆಕಾಶ್ ರಾಂಬೋ ತಿಳಿಸಿದರು.
“ಲಂಗೋಟಿ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ತಾತನಿಗೆ ಸಂಪ್ರದಾಯ ಆಚಾರ ವಿಚಾರ ಪಾಲಿಸಬೇಕು ಎನ್ನುವ ನಂಬಿಕೆ. ಸಂಪ್ರದಾಯ ಹೇರಿಕೆಯಿಂದ ನಾಯಕ ರೆಬೆಲ್ ಆಗುತ್ತಾನೆ. ಕಥೆ ಆಸಕ್ತಿಕರವಾಗಿದೆ. ಇದೊಂದು ಉತ್ತಮ ಕೌಟುಂಬಿಕ ಚಿತ್ರ ಎಂದು ನಟ ಧರ್ಮೇಂದ್ರ ಹೇಳಿದ್ದಾರೆ.
ಈ ಚಿತ್ರದಲ್ಲಿ ನನ್ನದು ಪೊಲೀಸ್ ಅಧಿಕಾರಿಯ ಪಾತ್ರ. ಚಿತ್ರ ನೋಡದೆ ಯಾರೂ ಅನಗತ್ಯವಾಗಿ ಹೇಳಿಕೆ ನೀಡುವುದು ಸರಿಯಲ್ಲ. ಚಿತ್ರ ನೋಡಿದ ಮೇಲೆ ಚಿತ್ರಕ್ಕೆ ಶೀರ್ಷಿಕೆ ಏಕೆ ಇಟ್ಟಿದ್ದೇವೆ ಎನ್ನುವುದು ತಿಳಿಯಲಿದೆ ಎಂದು ನಟಿ ಸಂಹಿತ ವಿನ್ಯಾ ತಿಳಿಸಿದರು.
ನಟ ಹುಲಿ ಕಾರ್ತಿಕ್ ಮಾತನಾಡಿ, ಚಿತ್ರದಲ್ಲಿ ಪ್ರಮುಖ ಪಾತ್ರ ಸಿಕ್ಕಿದೆ. ಕಾಮಿಡಿಯಾಗಿ ಹಲವು ಗಂಭೀರವಾದ ವಿಷಯವನ್ನು ಚಿತ್ರದ ಮೂಲಕ ಹೇಳಿದ್ದೇವೆ ಎಂದರು.
ತನು ಟಾಕೀಸ್ ಬ್ಯಾನರ್ನಲ್ಲಿ ಈ ಸಿನಿಮಾ ನಿರ್ಮಾಣವಾಗಿದೆ.
Be the first to comment