ಬಾಲಿವುಡ್‌ನಿಂದ ಸಮರ್ಜಿತ್‌ ಗೆ ಬುಲಾವ್‌

‘ಗೌರಿ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ನಿರ್ದೇಶಕ ಇಂದ್ರಜಿತ್‌ ಲಂಕೇಶ್‌ ಪುತ್ರ ಸಮರ್ಜಿತ್‌ ಲಂಕೇಶ್‌ ಬಾಲಿವುಡ್‌ಗೆ ಹೊರಡಲು ಸಜ್ಜಾಗಿದ್ದಾರೆ.

ಬಾಲಿವುಡ್‌ ಕರಣ್‌ ಜೋಹರ್‌ ಧರ್ಮ ಪ್ರೊಡಕ್ಷನ್‌ನಿಂದ ಸರ್ಮಜಿತ್‌ಗೆ ಕರೆ ಬಂದಿದ್ದು ಶೀಘ್ರದಲ್ಲೇ ಹಿಂದಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗುತ್ತಿದೆ.  ಕರಣ್ ಜೊಹರ್ ಸಂಸ್ಥೆ ಜೊತೆ ಮಾತುಕತೆ ನಡೆಸಿರುವ ಸಮರ್ಜಿತ್ ಹಿಂದಿಯಲ್ಲಿ ಸಿನಿಮಾ ಮಾಡುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ಕರಣ್ ಜೋಹರ್‌, ದಕ್ಷಿಣ ಸಿನಿಮಾರಂಗದ ಕಡೆ ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ. ಒಂದು ವೇಳೆ ಕರಣ್ ಸಂಸ್ಥೆ ಸಮರ್ಜಿತ್ ಲಂಕೇಶ್ ಅವರಿಗೆ ಸಿನಿಮಾ ನಿರ್ಮಾಣ ಮಾಡಿದರೆ ಮೊದಲ ಬಾರಿಗೆ  ಕನ್ನಡ ನಟನ ಜೊತೆ ಸಿನಿಮಾ ಮಾಡಿದಂತೆ ಆಗಲಿದೆ.

ಹಿಂದಿ ಸಿನಿಮಾರಂಗ ಮಾತ್ರವಲ್ಲ ಪಕ್ಕದ ತೆಲುಗು ಮತ್ತು ತಮಿಳಿನಿಂದನೂ ಆಫರ್‌ಗಳು ಬರುತ್ತಿದ್ದು ಪರಭಾಷೆಯ ಕಡೆ ಸಮರ್ಜಿತ್ ಗಮನ ಹರಿಸುತ್ತಿದ್ದಾರೆ. ತಮಿಳಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್‌  ಸಮರ್ಜಿತ್‌ಗೆ ಸಿನಿಮಾ ಮಾಡಲು ಮುಂದಾಗಿದೆ ಎನ್ನಲಾಗುತ್ತಿದೆ.

ಈಗಾಗಲೇ ಲೈಕಾ ಸಂಸ್ಥೆ ನಿಖಿಲ್ ಕುಮಾರಸ್ವಾಮಿ ಸಿನಿಮಾ ಮೂಲಕ ಕನ್ನಡಕ್ಕೆ ಕಾಲಿಟ್ಟಿದೆ. ಆ ಸಿನಿಮಾ ಪೂರ್ಣಗೊಳ್ಳುವ ಮೊದಲೇ ಲೈಕಾ,  ಸಮರ್ಜಿತ್‌ಗೆ ಸಿನಿಮಾ ಮಾಡಲು ನಿರ್ಧರಿಸಿದ್ದು ಸಿನಿಮಾ ಮಾತುಕತೆ ಹಂತದಲ್ಲಿದೆ ಎಂಬ ಮಾತು ಕೇಳಿ ಬರುತ್ತಿದೆ.

ದೊಡ್ಡ ಸ್ಟಾರ್ ಆಗಬೇಕು ಎಂದು ಕನಸು ಹೊತ್ತು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಸಮರ್ಜಿತ್ ಲಂಕೇಶ್‌, ಮೊದಲ ಸಿನಿಮಾದಲ್ಲೇ ಕನ್ನಡ ಸಿನಿಮಾಭಿಮಾನಿಗಳ ಹೃದಯ ಗೆದ್ದಿದ್ದಾರೆ. ಸಮರ್ಜಿತ್‌ಗೆ ‘ಗೌರಿ’ ಚಿತ್ರದ ನಟನೆಗಾಗಿ ‘ಲುಮಿಯರ್ ನ್ಯಾಷನಲ್ ಅವಾರ್ಡ್’   ದೊರೆತಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!