‘ಎಮರ್ಜೆನ್ಸಿ’: ಸೆನ್ಸಾರ್ ಮಂಡಳಿ ಬದಲಾವಣೆಗೆ ಒಪ್ಪಿಗೆ

ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ ಸಿನಿಮಾದ ನಿರ್ಮಾಣ ಸಂಸ್ಥೆ, ಪರಿಷ್ಕರಣಾ ಸಮಿತಿ ಸೂಚಿಸಿದ ಬದಲಾವಣೆಗಳನ್ನು ಮಾಡಲು  ಒಪ್ಪಿಗೆ ಸೂಚಿಸಿದೆ.

ಸೋಮವಾರ ಎಮರ್ಜೆನ್ಸಿ ತಂಡ ಕೋರ್ಟ್​ಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಅಕ್ಟೋಬರ್ 3 ರಂದು ಮುಂದಿನ ವಿಚಾರಣೆ ನಡೆಯಲಿದೆ.

ಸೆನ್ಸಾರ್ ಮಂಡಳಿ  ‘ಎಮರ್ಜೆನ್ಸಿ’ ನೋಡಿ  ಅದನ್ನು ಪರಿಷ್ಕರಣಾ ಸಮಿತಿಗೆ ವರ್ಗಾಯಿಸಿತ್ತು. ಅವರು ಸಿನಿಮಾಗೆ ಸೆನ್ಸಾರ್ ಪ್ರಮಾಣಪತ್ರ ನೀಡಲು ನಿರಕಾರಿಸಿದ್ದರು. ಜೊತೆಗೆ ಒಂದಷ್ಟು ಬದಲಾವಣೆ ಮಾಡಲು ಸೂಚನೆ ನೀಡಿದ್ದರು. ಆದರೆ ಇದಕ್ಕೆ ತಂಡ ಸಿದ್ಧ ಇರಲಿಲ್ಲ. ಕೊನೆಗೆ ಈ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈಗಾಗಲೇ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ ಸೆನ್ಸಾರ್ ಪ್ರಮಾಣಪತ್ರ ಸಿಗದ ಕಾರಣ ಸಿನಿಮಾ ರಿಲೀಸ್ ದಿನಾಂಕ ವಿಳಂಬವಾಗಿದೆ.  ‘ಎಮರ್ಜೆನ್ಸಿ’ ಸಿನಿಮಾ ಬಗ್ಗೆ  ಸಿಖ್ ಸಮುದಾಯದವರು ಅಪಸ್ವರ ತೆಗೆದಿದ್ದಾರೆ. ಚಿತ್ರದಲ್ಲಿ ಸಿಖ್ ಸಮುದಾಯದ  ಗೌರವ ಹಾಳು ಮಾಡುವ ಕೆಲಸ ಮಾಡಲಾಗಿದೆ ಎಂದು ಸಿಖ್ ಸಮುದಾಯದವರು ಆಕ್ರೋಶ ವ್ಯಕ್ತಪಡಿಸಿದ್ದರು.

ಅಂದಿನ ಪ್ರಧಾನಿ ಇಂದಿರಾ ಗಾಂಧಿ 1975ರಲ್ಲಿ ಹೇರಿದ್ದ ತುರ್ತು ಪರಿಸ್ಥಿತಿಗೆ ಸಂಬಂಧಿಸಿದಂತೆ ಸಿನಿಮಾ ಇದೆ. ಕಂಗನಾ  ಈ ಚಿತ್ರ ನಿರ್ದೇಶನ ಮಾಡಿದ್ದು ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅನುಪಮ್ ಖೇರ್, ಮಿಲಿಂದ್ ಸೋಮನ್, ಶ್ರೇಯಸ್ ತಲ್ಪಡೆ ಮೊದಲಾದವರು ಚಿತ್ರದಲ್ಲಿ ನಟಿಸಿದ್ದಾರೆ.

ಅಕ್ಟೋಬರ್ 3ರಂದು ವಿಚಾರಣೆ  ನಂತರ  ‘ಎಮರ್ಜೆನ್ಸಿ’ ಚಿತ್ರದ ಹೊಸ ಬಿಡುಗಡೆಯ ದಿನಾಂಕವನ್ನು ಘೋಷಿಸುವ ಸಾಧ್ಯತೆ ಇದೆ.  ಚಿತ್ರ ಕಳೆದ ಸೆಪ್ಟೆಂಬರ್ 6ರಂದು ಬಿಡುಗಡೆಯಾಗಬೇಕಿತ್ತು.

Be the first to comment

Leave a Reply

Your email address will not be published. Required fields are marked *

Translate »
error: Content is protected !!