ಶರಣರ ಶಕ್ತಿ

‘ಶರಣರ ಶಕ್ತಿ’ ಚಿತ್ರ ನಿರ್ಬಂಧಕ್ಕೆ ಮನವಿ

‘ಶರಣರ ಶಕ್ತಿ’ ಚಲನಚಿತ್ರವನ್ನು ನಿರ್ಬಂಧಿಸಬೇಕು ಎಂದು  ಶರಣ ಸಂಸ್ಕೃತಿ ರಕ್ಷಣಾ ವೇದಿಕೆ ಹಾಗೂ ಬಸವ ಪರ ಸಂಘಟನೆಗಳ ಪದಾಧಿಕಾರಿಗಳು ವಿಜಯಪುರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ.

ನಿರ್ದೇಶಕ ದಿಲೀಪ್ ಶರ್ಮಾ, ನಿರ್ಮಾಪಕಿ ಆರಾಧನಾ ಕುಲಕರ್ಣಿಯವರು ನಿರ್ಮಿಸಿರುವ ಚಲನಚಿತ್ರ ‘ಶರಣರ ಶಕ್ತಿ’  ಬಸವಾದಿ ಶರಣರ ತತ್ವಗಳಿಗೆ ಸಂಪೂರ್ಣ ವಿರುದ್ಧವಾಗಿದೆ.   ಕೂಡಲೇ ಸರ್ಕಾರ, ಚಲನಚಿತ್ರ ವಾಣಿಜ್ಯ ಮಂಡಳಿ, ಸೆನ್ಸಾರ್ ಮಂಡಳಿಗಳು ಮಧ್ಯಪ್ರವೇಶಿಸಿ ಮರು ಸೆನ್ಸಾರ್ ಮಾಡಬೇಕು.  ಅಲ್ಲಿಯವರೆಗೆ ಆ ಚಿತ್ರವನ್ನು ಯಾವುದೇ ಮಾಧ್ಯಮಕ್ಕೆ ಬಿಡುಗಡೆ ಮಾಡಬಾರದು ಎಂದು ಆಗ್ರಹಿಸಿದ್ದಾರೆ.

ಅಕ್ಕ ನಾಗಮ್ಮನವರಿಗೆ ಅವಹೇಳನ ಮಾಡಿರುವ ಚಿತ್ರ ತಂಡದ ಮೇಲೆ ಕ್ರಿಮಿನಲ್ ಮೊಕದಮೆ ದಾಖಲಿಸಿ ಕ್ರಮ ಕೈಗೊಳ್ಳಬೇಕು. ಚಲನಚಿತ್ರವನ್ನು ನಿರ್ಬಂಧಿಸಬೇಕು. ಈ ರೀತಿ ಬಸವಾದಿ ಶರಣರ ತತ್ವದ ಮೇಲಿನ ದಾಳಿ  ಹೆಚ್ಚಾಗುತ್ತಿದ್ದು ವೈದಿಕ ಸಂಘಟನೆಗಳ ಕೈವಾಡ ಎದ್ದು ಕಾಣುತ್ತಿದೆ. ನ್ಯಾಯ ಸಿಗುವವರೆಗೂ ಲಿಂಗಾಯತ ಸಮುದಾಯ ಹೋರಾಟ ನಿಲ್ಲಿಸುವುದಿಲ್ಲ  ಎಂದು ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ಇಂಗಳೇಶ್ವರದ ವಚನ ಶಿಲಾಮಂಟಪದ ಚನ್ನಬಸವ ಸ್ವಾಮೀಜಿ, ರಾಷ್ಟ್ರೀಯ ಬಸವಸೇನಾ ಜಿಲ್ಲಾ ಘಟಕದ ಅಧ್ಯಕ್ಷ ಡಾ.ರವಿಕುಮಾರ ಬಿರಾದಾರ, ಬಸವಪರ ಸಂಘಟನೆಗಳ ಪಧಾಧಿಕಾರಿಗಳಾದ ಸಂಗನಗೌಡ ಚಿಕ್ಕೊಂಡ, ಮಹಾಂತೇಶ ಮಡಿಕೇಶ್ವರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Be the first to comment

Leave a Reply

Your email address will not be published. Required fields are marked *

Translate »
error: Content is protected !!