ಬಿಗ್ ಬಾಸ್ ಕನ್ನಡ ಸೀಸನ್ 11ರ ಮೊದಲ ವಾರದ ಎಲಿಮಿನೇಷನ್ ನಲ್ಲಿ ಯಮುನಾ ಶ್ರೀನಿಧಿ ಔಟ್ ಆಗುವ ಮೂಲಕ ಅಚ್ಚರಿ ನೀಡಿದ್ದಾರೆ.
ಮೊದಲ ವಾರವೇ ಯಮುನಾ ಎಲಿಮಿನೇಷನ್ ಆಗುತ್ತಾರೆ ಎಂಬುದನ್ನು ಯಾರೂ ಇದನ್ನು ನಿರೀಕ್ಷಿಸಿರಲಿಲ್ಲ. ವಯಸ್ಸು 45 ದಾಟಿದರೂ ಯಮುನಾ ಸ್ಪರ್ಧಿಗಳಿಗೆ ಠಕ್ಕರ್ ಕೊಡುತ್ತಿದ್ದರು. ಅವರು ಎಲಿಮಿನೇಟ್ ಆಗುತ್ತಿದ್ದಂತೆ ಮನೆಯಲ್ಲಿ ಕೆಲವರು ಕಣ್ಣೀರು ಹಾಕಿದ್ದಾರೆ.
ಯಮುನಾ ಅವರು ಜೋರು ಜೋರಾಗಿ ಕೂಗಾಡುತ್ತಿದ್ದರು. ಎಲ್ಲರ ವಿರುದ್ಧ ಏರು ಧ್ವನಿಯಲ್ಲಿ ಮಾತನಾಡುತ್ತಿದ್ದರು. ಉಗ್ರಂ ಮಂಜು ಜೊತೆ ಅನೇಕ ಬಾರಿ ಜಗಳ ಕೂಡ ಮಾಡಿಕೊಂಡಿದ್ದರು. ಬಿಗ್ ಬಾಸ್ ಮನೆಗೆ ಕಾಲಿಟ್ಟ ಕೆಲವೇ ಕ್ಷಣಗಳಲ್ಲಿ ಅವರು ಗೋಲ್ಡ್ ಸುರೇಶ್ ಬಳಿ ವಾದಕ್ಕೆ ಇಳಿದಿದ್ದರು. ಜಗದೀಶ್ ಅವರು ಹಲವು ಬಾರಿ ನಿಯಮಗಳನ್ನು ಮುರಿದಾಗ ನೇರವಾಗಿ ವಿರೋಧಿಸಿದ್ದರು.
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ 17 ಸ್ಪರ್ಧಿಗಳು ಇದ್ದಾರೆ. ಇದರಲ್ಲಿ ಆರಂಭದಿಂದಲೂ ಹೆಚ್ಚು ಗಮನ ಸೆಳೆಯುವ ಪ್ರಯತ್ನ ಮಾಡಿದ್ದು ಯಮುನಾ. ಜೋರಾಗಿ ಮಾತನಾಡಿದರೆ ಕೆಲವರು ಹೈಲೈಟ್ ಆಗೋ ಸಾಧ್ಯತೆ ಇರುತ್ತದೆ. ಅದೇ ರೀತಿ ಕೆಲವರಿಗೆ ಅದು ನೆಗೆಟಿವ್ ಆಗುವ ಸಾಧ್ಯತೆಯೂ ಇರುತ್ತದೆ. ಇಂಥ ಸ್ಪರ್ಧಿಗಳನ್ನು ಜನರು ದ್ವೇಷಿಸಿದ್ದೂ ಇದೆ. ಯಮುನಾ ಶ್ರೀನಿಧಿಗೂ ಇದೇ ರೀತಿ ಆಯಿತೇ ಎನ್ನುವ ಪ್ರಶ್ನೆ ಕಾಡಿದೆ.
ಜಗದೀಶ್, ಯಮುನಾ ಶ್ರೀನಿಧಿ, ಹಂಸಾ, ಭವ್ಯಾ, ಗೌತಮಿ, ಚೈತ್ರಾ ಕುಂದಾಪುರ, ಶಿಶಿರ್, ಮಾನಸಾ ಮತ್ತು ಮೋಕ್ಷಿತಾ ಅವರು ಕಳೆದ ವಾರ ನಾಮಿನೇಟ್ ಆಗಿದ್ದರು.
ಅಶ್ವಿನಿ ನಕ್ಷತ್ರ ಸೀರಿಯಲ್ ಮೂಲಕ ಪರಿಚಿತರಾಗಿದ್ದ ಯಮುನಾ ಆ ನಂತರ ಹಲವು ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ಗುರುತಿಸಿಕೊಂಡಿದ್ದಾರೆ. ಭರತನಾಟ್ಯ ಕಲಾವಿದೆಯಾಗಿಯೂ ಸೈ ಎನಿಸಿಕೊಂಡಿದ್ದಾರೆ. ಯಮುನಾ ಸಾಕಷ್ಟು ಸೀರಿಯಲ್ ಗಳಲ್ಲಿ ಬ್ಯುಸಿಯಾಗಿದ್ದಾರೆ.
Be the first to comment