ಮಿಥುನ್ ಚಕ್ರವರ್ತಿ

‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಸ್ವೀಕರಿಸಿದ ಮಿಥುನ್ ಚಕ್ರವರ್ತಿ

ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ 2022ನೇ ಸಾಲಿನ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರತಿಷ್ಠಿತ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಭಾರತೀಯ ಚಿತ್ರರಂಗಕ್ಕೆ ಮಿಥುನ್ ಚಕ್ರವರ್ತಿ ನೀಡಿರುವ ಜೀವಮಾನದ ಕೊಡುಗೆಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಮಿಥುನ್ ಚಕ್ರವರ್ತಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿ ಸ್ವೀಕಾರ ಮಾಡಿದರು.

ಮಿಥುನ್ ಚಕ್ರವರ್ತಿ 1976ರಲ್ಲಿ ಮೃಗಯಾ ಸಿನಿಮಾದ ಮೂಲಕ ಸಿನಿಪಯಣ ಆರಂಭಿಸಿದರು. ಚೊಚ್ಚಲ ಚಿತ್ರದಲ್ಲೇ ಅಭಿನಯದಿಂದ ಗಮನ ಸೆಳೆದ ನಟ, ಉತ್ತಮ ನಟ ಪ್ರಶಸ್ತಿ ಪಡೆದರು. ಡಿಸ್ಕೋ ಡ್ಯಾನ್ಸರ್, ಕಸಂ ಪೈದಾ ಕರ್ನೆ ವಾಲೆ ಕಿ, ಕಮ್ಯಾಂಡೋ, ಓ ಮೈ ಗಾಡ್ ಸೇರಿದಂತೆ ಹಲವು ಹಿಟ್ ಚಿತ್ರಗಳಲ್ಲಿ ಮಿಥುನ್ ಚಕ್ರವರ್ತಿ ಬಣ್ಣ ಹಚ್ಚಿದ್ದಾರೆ.

ಮಿಥುನ್ ಚಕ್ರವರ್ತಿ ಹಿಂದಿ ಮಾತ್ರವಲ್ಲದೇ ಬೆಂಗಾಳಿ ಚಿತ್ರಗಳಲ್ಲೂ ನಟಿಸಿದ್ದಾರೆ. ಇವರು ಪ್ರಮುಖ ಪಾತ್ರಗಳನ್ನು ಅಭಿನಯಿಸಿದ್ದ 19 ಸಿನಿಮಾಗಳು 1989ರಲ್ಲಿ ಒಂದೇ ವರ್ಷದ ತೆರೆಕಂಡಿದ್ದವು. ಒಂದೇ ವರ್ಷ ಇಷ್ಟೊಂದು ಸಿನಿಮಾ ಬಿಡುಗಡೆಗೊಳಿಸಿದ ಕೀರ್ತಿ ಮಿಥುನ್ ಚಕ್ರವರ್ತಿಗೆ ಸಲ್ಲುತ್ತದೆ.

ಸಿನಿಮಾ ಮಾತ್ರವಲ್ಲದೇ ರಾಜಕೀಯದಲ್ಲೂ 74ರ ಹರೆಯದ  ಮಿಥುನ್ ಚಕ್ರವರ್ತಿ ಗುರುತಿಸಿಕೊಂಡಿದ್ದಾರೆ. 2014ರಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಮೂಲಕ ರಾಜ್ಯಸಭಾ ಸದಸ್ಯರಾಗಿ ಸಂಸತ್ ಪ್ರವೇಶ ಪಡೆದರು. 2 ವರ್ಷಗಳ ನಂತರ ರಾಜೀನಾಮೆ ಸಲ್ಲಿಸಿದ್ದರು. 2021ರಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಮುನ್ನ ಬಿಜೆಪಿ ಸೇರಿದ್ದರು. ಇದೇ ವರ್ಷ ಏಪ್ರಿಲ್​ನಲ್ಲಿ  ‘ಪದ್ಮಭೂಷಣ’ ಗೌರವಕ್ಕೆ ಪಾತ್ರರಾದರು.

Be the first to comment

Leave a Reply

Your email address will not be published. Required fields are marked *

Translate »
error: Content is protected !!