ಶ್ರೀನಿಧಿ ಶೆಟ್ಟಿ

1992 ಅಕ್ಟೋಬರ್ 21ರಂದು ಮಂಗಳೂರಿನಲ್ಲಿ ಜನಿಸಿದ ಶ್ರೀನಿಧಿ ಶೆಟ್ಟಿ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಮತ್ತು ರೂಪದರ್ಶಿ. ಬೆಂಗಳೂರಿನ ಜೈನ ವಿದ್ಯಾಲಯದಿಂದ ಎಲೆಕ್ಟ್ರಿಕಲ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರುವ ಇವರು 2016 ರಲ್ಲಿ ಜರುಗಿದ ಮಿಸ್ ದಿವಾ ಸ್ಪರ್ಧೆಯ ವಿಜೇತೆ.ಕೆಲಕಾಲ ಬೆಂಗಳೂರಿನ ಖ್ಯಾತ ಸಾಫ್ಟವೇರ್ ಕಂಪನಿ `ಆಕ್ಸೆಂಚರ್’ ನ ಉದ್ಯೋಗಿಯಾಗಿದ್ದರು.ಈ ಸಮಯದಲ್ಲಿ ಹಲವಾರು ಡಿಸೈನರ್‌ಗಳ ಜೊತೆಗೆ ಮಾಡೆಲ್ ಆಗಿ ಕೆಲಸ ಮಾಡಿದ್ದಾರೆ.

ಹಲವಾರು ಸೌಂದರ್ಯ ಸ್ಫರ್ಧೆಗಳಲ್ಲಿ ಭಾಗವಹಿಸಿರುವ ಇವರು ಮಿಸ್ ಕರ್ನಾಟಕ ಮತ್ತು ಮಿಸ್ ಬ್ಯೂಟಿಫುಲ್ ಸ್ಮೈಲ್ ಸ್ಪರ್ಧೆಯ ವಿಜೇತೆ. ದುಬೈ, ಪ್ರಾನ್ಸ್,ಜಪಾನ್,ಸಿಂಗಾಪುರ್,ಥೈಲಾಂಡ್,ಪೊಲ್ಯಾಂಡ್ ದೇಶಗಳ ಸೌಂದರ್ಯ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!