ಅಮೆರಿಕಕ್ಕೆ ತೆರಳಿ ಶಸ್ತ್ರಚಿಕಿತ್ಸೆ ಮಾಡಿಸಿದ್ದ ನಟ ಶಿವರಾಜ್ ಕುಮಾರ್ ಅವರ ಸರ್ಜರಿ ಯಶಸ್ವಿಯಾಗಿದೆ .
ಡಿಸೆಂಬರ್ 24ರಂದು ಆಪರೇಷನ್ 4-5 ಗಂಟೆಗಳ ಕಾಲ ನಡೆದಿದ್ದು ಅದು ಯಶಸ್ವಿಯಾಗಿದೆ. ಶಿವರಾಜ್ಕುಮಾರ್ ಅವರು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರಾಗಿದ್ದಾರೆ. ಅವರನ್ನು ಐಸಿಯು ವಾರ್ಡ್ ಗೆ ಶಿಫ್ಟ್ ಮಾಡಲಾಗಿದ್ದು, ಆರೋಗ್ಯ ಸ್ಥಿರವಾಗಿದ್ದು ಸುಧಾರಿಸುತ್ತಿದ್ದಾರೆ ಎಂದು ವೈದ್ಯ ಡಾ ಮನೋಹರ್ ಅವರು ತಿಳಿಸಿದ್ದಾರೆ.
ಕ್ಯಾನ್ಸರ್ ತಗುಲಿದ ಮೂತ್ರ ಪಿಂಡವನ್ನ ತೆಗೆದು ಹಾಕಲಾಗಿದೆ. ಶಸ್ತ್ರಚಿಕಿತ್ಸೆ ನಂತರ ಕರುಳನ್ನು ಬಳಸಿ ಕೃತಕ ಮೂತ್ರ ಪಿಂಡವನ್ನ ಅಳವಡಿಸಲಾಗಿದೆ. ಶಿವರಾಜ್ಕುಮಾರ್ ದೈಹಿಕವಾಗಿ ಹಾಗೂ ಮಾನಸಿಕವಾಗಿ ಆರೋಗ್ಯವಾಗಿದ್ದಾರೆ’ ಎಂದು ತಿಳಿಸಿದ್ದಾರೆ.
ಶಿವರಾಜ್ಕುಮಾರ್ ಅವರಿಗೆ ಅಮೆರಿಕದ ಫ್ಲೋರಿಡಾದ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ನಲ್ಲಿ ಸರ್ಜರಿ ಮಾಡಲಾಗಿದೆ. ಡಾ. ಮುರುಗೇಶ್ ನೇತೃತ್ವದಲ್ಲಿ ಈ ಆಪರೇಷನ್ ನಡೆದಿದೆ. ಶಸ್ತ್ರಚಿಕಿತ್ಸೆ ಬಗ್ಗೆ ವೈದ್ಯರು ಮತ್ತು ಶಿವರಾಜ್ ಕುಮಾರ್ ಪತ್ನಿ ಗೀತಾ, ಬಾಮೈದ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.
‘ಅಭಿಮಾನಿಗಳು ಹೇಗೆ ದೇವರೋ ಹಾಗೆ ಡಾಕ್ಟರ್ ಕೂಡ ದೇವರ ರೀತಿ ಬಂದಿದ್ದಾರೆ. ಸದ್ಯ ಶಿವರಾಜ್ಕುಮಾರ್ ಐಸಿಯುನಲ್ಲಿದ್ದಾರೆ. ಎಲ್ಲವೂ ಯಶಸ್ವಿಯಾಗಿದೆ. ಸದ್ಯದಲ್ಲಿ ಶಿವರಾಜ್ಕುಮಾರ್ ನಿಮ್ಮ ಬಳಿ ಮಾತನಾಡುತ್ತಾರೆ’ ಎಂದು ಗೀತಾ ಮಾಹಿತಿ ನೀಡಿದ್ದಾರೆ.
Be the first to comment