‘ಪುಷ್ಪ 2’ ತಂಡದ ವತಿಯಿಂದ 2 ಕೋಟಿ ರೂಪಾಯಿ

ಪುಷ್ಪ 2 ಸಿನಿಮಾದ ಪ್ರೀಮಿಯರ್ ವೇಳೆ ನಡೆದ ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟಿದ್ದು, ಪುಷ್ಪ 2’ ಚಿತ್ರತಂಡ  ಸಂತ್ರಸ್ತ ಕುಟುಂಬಕ್ಕೆ ಎರಡು ಕೋಟಿ ರೂಪಾಯಿ ನೀಡಲು ಮುಂದಾಗಿದೆ.

ಅಲ್ಲು ಅರ್ಜುನ್  ತಂದೆ ಅಲ್ಲು ಅರವಿಂದ್, ಕಾಲ್ತುಳಿತ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಬಾಲಕನನ್ನು ಭೇಟಿಯಾಗಲು ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ಮಾತನಾಡಿದ ಅಲ್ಲು ಅರವಿಂದ್, ‘ನಾನು ವೈದ್ಯರ ಬಳಿ ಮಾತನಾಡಿದೆ. ಆ ಬಾಲಕನ ಆರೋಗ್ಯ ಸುಧಾರಿಸುತ್ತಿದೆ. ಇದು ಖುಷಿಯ ವಿಷಯ. ಆ ಬಾಲಕನಿಗೆ ಆತನ ಕುಟುಂಬಕ್ಕೆ2 ಕೋಟಿ ರೂಪಾಯಿ ಹಣ ನೀಡುವ ನಿರ್ಧಾರ ಮಾಡಿದ್ದೇವೆ’ ಎಂದಿದ್ದಾರೆ.

‘ಅಲ್ಲು ಅರ್ಜುನ್ 1 ಕೋಟಿ ರೂಪಾಯಿ ನೆರವು ನೀಡಲಿದ್ದಾರೆ. ‘ಪುಷ್ಪ 2’ ಸಿನಿಮಾದ ನಿರ್ಮಾಪಕರಾದ ಮೈತ್ರಿ ಮೂವಿ ಮೇಕರ್ಸ್​  50 ಲಕ್ಷ ರೂಪಾಯಿ ಹಣ ನೀಡಲಿದ್ದಾರೆ.  ನಿರ್ದೇಶಕ ಸುಕುಮಾರ್ ಅವರು 50 ಲಕ್ಷ ರೂಪಾಯಿ ನೀಡಲಿದ್ದಾರೆ.  ಒಟ್ಟಿಗೆ 2 ಕೋಟಿ ರೂಪಾಯಿ ಹಣವನ್ನು ಬಾಲಕ ಹಾಗೂ ಅವರ ಕುಟುಂಬದ ಬೆಂಬಲಕ್ಕಾಗಿ ನೀಡುತ್ತಿದ್ದೇವೆ’ ಎಂದು ಅಲ್ಲು ಅರವಿಂದ್ ಹೇಳಿದ್ದಾರೆ.

ಈ ಹಿಂದೆ ನಟ ಅಲ್ಲು ಅರ್ಜುನ್ ಸಂತ್ರಸ್ತ ಕುಟುಂಬಕ್ಕೆ 25 ಲಕ್ಷ ರೂಪಾಯಿ ಘೋಷಣೆ ಮಾಡಿದ್ದರು.   ಆಸ್ಪತ್ರೆಯಲ್ಲಿರುವ ಬಾಲಕನ ಸಂಪೂರ್ಣ ಚಿಕಿತ್ಸೆ ಖರ್ಚು ಭರಿಸುವುದಾಗಿ ಹೇಳಿದ್ದರು. ಆದರೆ ಆ ಬಳಿಕ  ಜನರ ಪ್ರತಿಕ್ರಿಯೆ, ಸರ್ಕಾರ ಮತ್ತು ಪೊಲೀಸರು ನಡೆದುಕೊಂಡ ರೀತಿ ಎಲ್ಲದರ ಬಳಿಕ  ಸಂತ್ರಸ್ತ ಕುಟುಂಬಕ್ಕೆ 2 ಕೋಟಿ ರೂಪಾಯಿ ನೀಡಲು ಮುಂದಾಗಿದ್ದಾರೆ.

ಡಿಸೆಂಬರ್ 4 ರಂದು ಅಲ್ಲು ಅರ್ಜುನ್ ತಮ್ಮ ಕುಟುಂಬದೊಂದಿಗೆ ಸಂಧ್ಯಾ ಚಿತ್ರಮಂದಿರಕ್ಕೆ ‘ಪುಷ್ಪ 2’ ಸಿನಿಮಾ ವೀಕ್ಷಿಸಲು ತೆರಳಿದ್ದರು. ಈ ವೇಳೆ ನಡೆದ ನೂಕಾಟದಲ್ಲಿ ಮಹಿಳೆ  ಸಾವನ್ನಪ್ಪಿದ್ದು, ಅವರ ಪುತ್ರ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಲ್ಲು ಅರ್ಜುನ್ ಅನ್ನು ಬಂಧಿಸಿದ್ದರು.

 

Be the first to comment

Leave a Reply

Your email address will not be published. Required fields are marked *

Translate »
error: Content is protected !!