ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಉತ್ತಮ ಕಲೆಕ್ಷನ್ ಮುಂದುವರೆಸಿದೆ.
ಕ್ರಿಸ್ಮಸ್ ರಜೆಯ ದಿನವಾದ ಬುಧವಾರದಂದು ‘ಮ್ಯಾಕ್ಸ್’ ಸಿನಿಮಾ ಬಿಡುಗಡೆ ಆಗಿದ್ದು ಮೊದಲ ದಿನ 8.50 ಕೋಟಿ ರೂಪಾಯಿ ಹಣ ಗಳಿಸಿತ್ತು. ಗುರುವಾರ ವಾರದ ದಿನವಾಗಿದ್ದರೂ 4 ಕೊಟಿಗೂ ಹೆಚ್ಚು ಹಣ ಗಳಿಸುವ ಮೂಲಕ ಉತ್ತಮ ಕಲೆಕ್ಷನ್ ಮುಂದುವರೆಸಿದೆ.
ಮೊದಲ ದಿನಕ್ಕೆ ಹೋಲಿಸಿದರೆ ಬೆಂಗಳೂರು ಸೇರಿದಂತೆ ಕೆಲವು ನಗರಗಳಲ್ಲಿ ಶೋಗಳ ಸಂಖ್ಯೆ ಕಡಿಮೆ ಆಗಿರುವುದು ಕಲೆಕ್ಷನ್ ತುಸು ತಗ್ಗಲು ಕಾರಣವಾಗಿದೆ. ಬಾಕ್ಸ್ ಆಫೀಸ್ನಲ್ಲಿ ‘ಪುಷ್ಪ 2’, ‘ವಿಡುದಲೈ 2’ ಸಿನಿಮಾಗಳ ಅಬ್ಬರ ಇನ್ನೂ ತಗ್ಗಿಲ್ಲ. ಅದರ ನಡುವೆಯೂ ‘ಮ್ಯಾಕ್ಸ್’ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ.
‘ಮ್ಯಾಕ್ಸ್’ ಸಿನಿಮಾ ಒಂದೇ ರಾತ್ರಿಯಲ್ಲಿ ನಡೆಯುವ ಕತೆ ಹೊಂದಿದ್ದು, ಆಕ್ಷನ್ ಮತ್ತು ಥ್ರಿಲ್ಲರ್ ಕತೆಯನ್ನು ಸಿನಿಮಾ ಒಳಗೊಂಡಿದೆ. ಸಿನಿಮಾದಲ್ಲಿ ಭರ್ಜರಿ ಆಕ್ಷನ್ ದೃಶ್ಯಗಳಿದ್ದು, ತಮಿಳಿನ ವಿಜಯ್ ಕಾರ್ತಿಕೇಯ ನಿರ್ದೇಶನ ಮಾಡಿದ್ದಾರೆ. ತಮಿಳಿನ ಜನಪ್ರಿಯ ನಿರ್ಮಾಪಕ ಕಲೈಪುಲಿ ಎಸ್ ಧನು, ಸುದೀಪ್ ಸಹ ನಿರ್ಮಾಣ ಮಾಡಿದ್ದಾರೆ. ಅಜನೀಶ್ ಲೋಕನಾಥ್ ಸಿನಿಮಾಕ್ಕೆ ಸಂಗೀತ ನೀಡಿದ್ದಾರೆ.
Be the first to comment