ಆಡಂಬರ ಇಲ್ಲದೇ ಜನವರಿ 8ಕ್ಕೆ ತಮ್ಮ ಹುಟ್ಟುಹಬ್ಬವನ್ನು ಆಚರಿಸುವಂತೆ ಅಭಿಮಾನಿಗಳಲ್ಲಿ ರಾಕಿಂಗ್ ಸ್ಟಾರ್ ಯಶ್ ಮನವಿ ಮಾಡಿಕೊಂಡಿದ್ದಾರೆ.
ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ಕಾರಣ ತಾವು ಬೆಂಗಳೂರಿನಲ್ಲಿ ಇರುವುದಿಲ್ಲ. ಹೀಗಾಗಿ ನನ್ನ ಹುಟ್ಟುಹಬ್ಬಕ್ಕೆ ನೀವು ತೋರುವ ಅಭಿಮಾನ ಜವಾಬ್ದಾರಿಯುತವಾಗಿ ಇರಲಿ ಎಂಬುದು ನನ್ನ ಪ್ರೀತಿಯ ಮನವಿ. ಹಾಗಾಗಿ ಫ್ಲೆಕ್ಸ್, ಬ್ಯಾನರ್ಗಳ ಯಾವುದೇ ಆಡಂಬರ ಮಾಡದೇ ನನ್ನ ಮನಸ್ಸಿಗೆ ನೋವಾಗುವ ನಡವಳಿಕೆ ತೋರದೇ ನೀವು ಇದ್ದಲ್ಲಿಂದಲೇ ನಿಮ್ಮ ಕುಟುಂಬದವರು ಹೆಮ್ಮೆ ಪಡುವ ಕೆಲಸ ನಿಮ್ಮಿಂದ ಆದರೆ ಅದಕ್ಕಿಂತ ದೊಡ್ಡ ಜನ್ಮದಿನದ ಉಡುಗೊರೆ ನನಗೆ ಮತ್ತೊಂದು ಇಲ್ಲ. ಆದಷ್ಟು ಬೇಗ ನಿಮ್ಮನ್ನೆಲ್ಲಾ ಭೇಟಿ ಆಗುತ್ತೇನೆ. ಎಲ್ಲರಿಗೂ ಹೊಸ ವರ್ಷ ಒಳಿತನ್ನು ತರಲಿ ಎಂದು ಯಶ್ ಪೋಸ್ಟ್ ಮಾಡಿದ್ದಾರೆ.
2024ರಲ್ಲಿ ಯಶ್ ಹುಟ್ಟುಹಬ್ಬದ ಪ್ರಯುಕ್ತ ತಮ್ಮ ನೆಚ್ಚಿನ ನಟನ ಫ್ಲೆಕ್ಸ್ ನಿಲ್ಲಿಸುವಾಗ ಮೂವರು ಅಭಿಮಾನಿಗಳು ಕರೆಂಟ್ ಶಾಕ್ ನಿಂದ ಮೃತಪಟ್ಟಿದ್ದರು. ಆ ರೀತಿಯ ಘಟನೆಗಳು ಮತ್ತೆ ನಡೆಯಬಾರದು ಎಂದು ಯಶ್ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಯಶ್ ಇದೀಗ ಟಾಕ್ಸಿಕ್ ಚಿತ್ರದಲ್ಲಿ ನಟಿಸುತ್ತಿದ್ದಾರೆ.
2025ರ ಜನವರಿ 8ಕ್ಕೆ ಯಶ್ ಅವರು 39ರ ವಸಂತಕ್ಕೆ ಕಾಲಿಡಲಿದ್ದಾರೆ.
Be the first to comment