ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಗೆ ಜಾಮೀನು ಮಂಜೂರಾಗಿದೆ.
ಪ್ರಕರಣದ ಪ್ರಮುಖ ಆರೋಪಿ ಅಲ್ಲು ಅರ್ಜುನ್ ಗೆ ಹೈದರಾಬಾದ್‌ನ ನಾಂಪಲ್ಲಿಯ 2ನೇ ಹೆಚ್ಚುವರಿ ಮೆಟ್ರೊಪಾಲಿಟಿನ್ ಸೆಷನ್ ನ್ಯಾಯಾಲಯ ರೆಗ್ಯುಲರ್ ಜಾಮೀನು ಮಂಜೂರು ಮಾಡಿದೆ. 50,000 ರೂ ಬಾಂಡ್‌ನ ತಲಾ ಇಬ್ಬರ ಶ್ಯೂರಿಟಿಗಳನ್ನು ಒದಗಿಸಬೇಕು. ಅಲ್ಲು ಅರ್ಜುನ್ ಅವರು ಭಾನುವಾರ ತನಿಖಾಧಿಕಾರಿಯ ಮುಂದೆ ಹಾಜರಾಗಬೇಕು ಎಂದು ಜಡ್ಜ್ ಆದೇಶಿಸಿದ್ದಾರೆ.
ಪುಷ್ಪ 2 ಚಿತ್ರ ಪ್ರದರ್ಶನ ವೇಳೆ ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ರೇವತಿ ಎಂಬ ಮಹಿಳೆ ಸಾವನ್ನಪ್ಪಿದ್ದರು. ಆಕೆಯ ಎಂಟು ವರ್ಷದ ಮಗ ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಮೃತ ಮಹಿಳೆಯ ಕುಟುಂಬ ಸದಸ್ಯರು ಚಿತ್ರಮಂದಿರದ ಆಡಳಿತ ಮಂಡಳಿ, ಅಲ್ಲು ಅರ್ಜುನ್ ಹಾಗೂ ಅವರ ಭದ್ರತಾ ತಂಡದ ವಿರುದ್ಧ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ವೇಳೆ ಪೊಲೀಸರು ಮೂವರನ್ನು ಬಂಧಿಸಿದ್ದರು. ಅಲ್ಲು ಅರ್ಜುನ್ ಅವರ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ ಎಂದು ತೆಲಂಗಾಣ ಪೊಲೀಸರು ಆರೋಪಿಸಿದ್ದಾರೆ.
Be the first to comment