ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳೆಲ್ಲರೂ ಇಂದು ಬೆಂಗಳೂರಿನ ಸಿಸಿಎಚ್ 57ರ ಕೋರ್ಟ್‌ಗೆ ಬೇಲ್ ಸಿಕ್ಕ ಬಳಿಕ ಮೊದಲ ಬಾರಿಗೆ ಹಾಜರಾಗಿದ್ದಾರೆ.
ಜಾಮೀನು ನೀಡುವ ಸಮಯದಲ್ಲಿ ಪ್ರತಿ ತಿಂಗಳು ಆರೋಪಿಗಳು ಕೋರ್ಟ್‌ಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಲಾಗಿತ್ತು. ಶುಕ್ರವಾರ ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು ಆಗಲು ದಿನಾಂಕ ನಿಗದಿ ಮಾಡಲಾಗಿತ್ತು. ಇಂದು ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ.
ಪವಿತ್ರಾ ಗೌಡ, ಪ್ರದೋಶ್ ಸೇರಿದಂತೆ ಹಲವು ಆರೋಪಿಗಳು ನ್ಯಾಯಾಲಯಕ್ಕೆ ಮೊದಲೇ ಹಾಜರಾಗಿದ್ದು ದರ್ಶನ್ ಮಾತ್ರ ತಡವಾಗಿ ನ್ಯಾಯಾಲಯಕ್ಕೆ ಆಗಮಿಸಿದರು. ನಟ ಧನ್ವೀರ್ ಹಾಗೂ ವಕೀಲರ ಜೊತೆ ದರ್ಶನ್ ಕಾರಿನಲ್ಲಿ ನ್ಯಾಯಾಲಯಕ್ಕೆ ಆಗಮಿಸಿದರು. ದರ್ಶನ್ ನ್ಯಾಯಾಲಯದ ಬಳಿ ಬಂದಾಗ ಜನ ಮತ್ತು ಮಾಧ್ಯಮಗಳು ಸುತ್ತುವರೆದರು.
ಕೋರ್ಟ್ ಗೆ ಹಾಜರು ಆಗುವಾಗ ದರ್ಶನ್ ಮತ್ತು ಪವಿತ್ರಾಗೌಡ ಮುಖಾಮುಖಿಯಾಗಿದ್ದಾರೆ. ನ್ಯಾಯಾಲಯಕ್ಕೆ ಬಂದ ಬಳಿಕ ದರ್ಶನ್ ಹಾಗೂ ಪವಿತ್ರಾ ಗೌಡ ಪರಸ್ಪರ ಆರೋಗ್ಯ ವಿಚಾರಿಸಿದರು. ದರ್ಶನ್, ಪವಿತ್ರಾ ಅವರ ಬೆನ್ನು ಸವರಿ ಅವರನ್ನು ಸಂತೈಸಿದರು ಎಂದು ಹೇಳಲಾಗಿದೆ.
ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾದ ಬಳಿಕ ಹಾಜರಿ ಪಡೆದುಕೊಂಡ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 25ಕ್ಕೆ ಮುಂದೂಡಿ ಆದೇಶಿಸಿದರು. ಫೆಬ್ರವರಿ 25ಕ್ಕೆ ಮತ್ತೆ ಎಲ್ಲ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಿ ಹಾಕಬೇಕಿದೆ.
—-
Be the first to comment