ವೆಂಕಟೇಶಾಯ ನಮಃ

‘ವೆಂಕಟೇಶಾಯ ನಮಃ’ ಚಿತ್ರದ ಟೀಸರ್ ಬಿಡುಗಡೆ

ಚಂದನವನದ ಕಲಾಕರ್ ನಟ , ನಿರ್ದೇಶಕ ಹರೀಶ್ ರಾಜ್ ಸಾರಥ್ಯದ “ವೆಂಕಟೇಶಾಯ ನಮಃ” ಚಿತ್ರದ ಪತ್ರಿಕಾಗೋಷ್ಠಿಯನ್ನು ರೇಣುಕಾಂಬ ಸ್ಟುಡಿಯೋದಲ್ಲಿ ಆಯೋಜನೆ ಮಾಡಿದ್ದು, ತಮ್ಮ ಚಿತ್ರದ ಕುರಿತು ಮಾಹಿತಿ ನೀಡಲು ಇಡೀ ಚಿತ್ರತಂಡ ಹಾಜರಿದ್ದು, ಪತ್ರಿಕಾಗೋಷ್ಠಿ ಆರಂಭಕ್ಕೂ ಮುನ್ನ ಚಿತ್ರದ ಟೀಸರ್ ಪ್ರದರ್ಶಿಸಲಾಯಿತು.

ಈ ಚಿತ್ರದ ಕುರಿತು ನಟ , ನಿರ್ದೇಶಕ ಹರೀಶ್ ರಾಜ್ ಮಾತನಾಡುತ್ತಾ , ನಮ್ಮ ವೆಂಕಟೇಶಾಯ ನಮಃ ಚಿತ್ರಕ್ಕೆ ಸ್ಪೂರ್ತಿಯೇ ನಾನು ಹಿಂದೆ ಅಭಿನಯಿಸಿದಂತ ಗೋವಿಂದಾಯ ನಮಃ ಚಿತ್ರ ಎನ್ನಬಹುದು. ಹಾಗಾಗಿಯೇ ಮತ್ತೆ ಪ್ಯಾರ್ ಗೆ ಆಗ್ಬಿಟ್ಟೈತೆ… ಅನ್ನೋ ಅಡಿಬರ ಕೂಡ ಬಳಸಿಕೊಂಡಿದ್ದೇವೆ. ಆ ಟ್ಯೂನ್ ಕೂಡ ಮತ್ತೆ ಬಳಸಿಕೊಳ್ಳುವ ಉದ್ದೇಶವಿದೆ. ಅದರ ಪ್ರಯತ್ನ ಕೂಡ ನಡೆಯುತ್ತಿದೆ. ಇದೊಂದು ಲವ್ ಸ್ಟೋರಿ ಚಿತ್ರವಾಗಿದ್ದು , ಹುಡುಗಿ ಕೈ ಕೊಟ್ಟಾಗ ಲೈಫ್ ನ ಚಾಲೆಂಜ್ ಆಗಿ ತಗೊಂಡು ಲವ್ ಮಾಡದೆ, ಹುಡುಗೀರ ಜೊತೆ ಚೆಲ್ಲಾಟವಾಡುತ್ತಾ , ಎಂಜಾಯ್ ಮಾಡಬೇಕೆಂಬ ವೆಂಕಿ ಅಲಿಯಾಸ್ ವೆಂಕಟೇಶನ ಸುತ್ತ ನಡೆಯುವ ಕಥೆಯನ್ನು ಹಾಸ್ಯ ಮಿಶ್ರಣದೊಂದಿಗೆ ಸಂಪೂರ್ಣ ಪ್ಯಾಕೇಜ್ ಮನರಂಜನೆಯ ಚಿತ್ರವಾಗಿ ನೀಡಲು ಮುಂದಾಗಿದ್ದೇನೆ. ಇದರಲ್ಲಿ ನಾನೊಬ್ಬ ಸಾಫ್ಟ್ವೇರ್ ಉದ್ಯೋಗಿ ಪಾತ್ರವನ್ನು ನಿರ್ವಹಿಸಿದ್ದೇನೆ. ನನ್ನ ತಾಯಿಯ ಪಾತ್ರದಲ್ಲಿ ಹಿರಿಯ ನಟಿ ಉಮಾಶ್ರೀ ರವರು ಅಭಿನಯಿಸುತ್ತಿದ್ದಾರೆ. ಈ ಚಿತ್ರದಲ್ಲಿ ಎಂಟು ಜನ ಹೀರೋಯಿನ್ ಗಳು ಅಭಿನಯಿಸುತ್ತಿದ್ದು , ಇಬ್ಬರು ನಾಯಕಿಯರು ಪ್ರಮುಖವಾಗಿ ಕಾಣುತ್ತಾರೆ. ದೊಡ್ಡ ತಾರಾ ಬಳಗವೇ ಹೊಂದಿರುವ ಈ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸುವುದರ ಜೊತೆಗೆ ನಿರ್ದೇಶನದ ಜವಾಬ್ದಾರಿಯನ್ನ ವಹಿಸಿಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮಾಹಿತಿಯನ್ನ ನೀಡುತ್ತೇನೆ ನಿಮ್ಮ ಬೆಂಬಲ ನಮಗಿರಲಿ ಎಂದು ಕೇಳಿಕೊಂಡರು.

ವೆಂಕಟೇಶಾಯ ನಮಃ

ಈ ಚಿತ್ರದ ನಿರ್ಮಾಪಕ ಪಿ. ಜನಾರ್ದನ ಮಾತನಾಡುತ್ತಾ , ನಿರ್ದೇಶಕರು ಈ ಕಾಮಿಡಿ ಸಬ್ಜೆಕ್ಟ್ ಹೇಳಿದ್ರು, ನಮಗೆ ಬಹಳ ಇಷ್ಟವಾಗಿ ಚಿತ್ರವನ್ನ ಆರಂಭಿಸಿದ್ದೇವೆ , ಮೊದಲ ಹಂತ ಚಿತ್ರೀಕರಣ ಮುಗಿದಿದೆ.ನಮಗೆ ಎಲ್ಲರೂ ಸಪೋರ್ಟ್ ಮಾಡಿ ಎಂದು ಹೇಳಿದರೆ.

ಈ ಚಿತ್ರದಲ್ಲಿ ಹಿರಿಯ ನಟ ಅಶೋಕ್ ಮಾತನಾಡುತ್ತಾ ನಟ ನಿರ್ದೇಶಕ ಹರೀಶ್ ರಾಜ್ ನನಗೆ ದಂಡಪಿಂಡಗಳು ಧಾರಾವಾಹಿಯ ಮೂಲಕ ಪರಿಚಯ. ನಟನೆ ಹಾಗೂ ನಿರ್ದೇಶನ ಜವಾಬ್ದಾರಿಯನ್ನು ಒಟ್ಟೊಟ್ಟಿಗೆ ಹೇಗೆ ನಿಭಾಯಿಸುತ್ತಾರೆ ಎಂಬುದೇ ನನಗೆ ಆಶ್ಚರ್ಯ , ನನ್ನ 50ವರ್ಷದ ಈ ಸಿನಿಮಾ ಜರ್ನಿಯಲ್ಲಿ ಇಂದಿಗೂ ನಿರ್ದೇಶನ ಮಾಡುವುದಕ್ಕೆ ಭಯ ಪಡುತ್ತೇನೆ. ಈಗಿನ ಸಿನಿಮಾ ಟ್ರೆಂಡೇ ಬದಲಾಗಿದೆ , ವರ್ಷಕ್ಕೆ 200 ಚಿತ್ರಗಳು ಬಂದರೆ ಬೆರಳೆಣಿಕೆಯ ಚಿತ್ರಗಳು ಮಾತ್ರ ಸಕ್ಸಸ್ ಕಾಣುತ್ತಿದೆ. ನಾನು ಈ ಚಿತ್ರದಲ್ಲಿ ನಾಯಕಿಯ ತಂದೆಯ ಪಾತ್ರವನ್ನು ಮಾಡುತ್ತಿದ್ದೇನೆ , ಕಾಮಿಡಿ ಸಬ್ಜೆಕ್ಟ್ ಜೊತೆ ಮನರಂಜನೆ ಕೂಡ ಸಿಗುತ್ತೆ , ಎಲ್ಲರೂ ನಮ್ಮ ತಂಡಕ್ಕೆ ಸಹಕಾರ , ಬೆಂಬಲ ನೀಡಿ ಎಂದು ಹೇಳಿದರು.

ಮತ್ತೊಬ್ಬ ಹಿರಿಯ ನಟ ಉಮೇಶಣ್ಣ ಮಾತನಾಡುತ್ತಾ ಹಿರಿಯ ಕಲಾವಿದರನ್ನ ಗುರುತಿಸಿ ಅವಕಾಶ ನೀಡುತ್ತಿರುವುದಕ್ಕೆ ತುಂಬಾ ಸಂತೋಷವಾಗುತ್ತದೆ. ನನ್ನದು ಈ ಚಿತ್ರದಲ್ಲಿ ಹುಡುಗಿ ತೋರಿಸುವ ಬ್ರೋಕರ್ ಪಾತ್ರ. ನಿರ್ದೇಶಕರಿಗೆ ನನ್ನ ಎಕ್ಸ್ಪ್ರೆಶನ್ ಮೇಲೆ ನಂಬಿಕೆ ಜಾಸ್ತಿ, ಹಾಗಾಗಿ ಈ ಪಾತ್ರ ಸಿಕ್ಕಿದೆ ಎನ್ನುತ್ತಾ ಒಂದಷ್ಟು ಅನುಭವಗಳನ್ನು ಹಂಚಿಕೊಂಡರು.

ವೆಂಕಟೇಶಾಯ ನಮಃ

ಮತ್ತೊಬ್ಬ ಹಾಸ್ಯ ನಟ ತಬಲಾ ನಾಣಿ ಮಾತನಾಡುತ್ತಾ ನಿರ್ದೇಶಕರು ಮೊದಲು ನನ್ನ ಜೊತೆ ಈ ಕಥೆಯ ಡಿಸ್ಕಶನ್ ಮಾಡಿದ್ರು, ಇದು ಪ್ರಸ್ತುತ ಕಾಲಘಟ್ಟಕ್ಕೆ ಸೂಕ್ತ ಎಂದಿದೆ. ಅದರಂತೆ ಈಗ ಚಿತ್ರೀಕರಣ ಆರಂಭಗೊಂಡಿದೆ. ನನ್ನದು ಚಿತ್ರ ನಿರ್ದೇಶಕನ ಪಾತ್ರ , ಮೊದಲು ಸಣ್ಣ ಪಾತ್ರ ಬೇಡ ಎಂದಿದೆ. ನಂತರ ಪಾತ್ರದ ತೂಕ ಇಷ್ಟವಾಯಿತು. ಇನ್ನು ಚಿತ್ರೀಕರಣದ ಸ್ಥಳದಲ್ಲಿ ನಡೆದ ಇಂಪ್ರೊವೈಸೇಶನ್ ಬಹಳ ಸೊಗಸಾಗಿ ಸಾಗುತ್ತಿದೆ ಎಂದರು. ಇನ್ನು ಚಿತ್ರದಲ್ಲಿ ನಾಯಕಿಯಾರಾಗಿ ಪ್ರಕೃತಿ , ಆರಾಧನಾ , ನಾಯಕಿಯ ತಾಯಿಯಾಗಿ ಚಿತ್ಕಲ ಬಿರಾದರ್ , ರಾಘು ರಾಮನ ಕೊಪ್ಪ , ರೇಣುಕಾ ಸೇರಿದಂತೆ ಚಿತ್ರತಂಡದವರು ತಮ್ಮ ತಮ್ಮ ಪಾತ್ರದ ಕುರಿತು ಮಾಹಿತಿಯನ್ನು ಹಂಚಿಕೊಂಡರು.

ಶ್ರೀ ಲಕ್ಷ್ಮಿ ಜನಾರ್ದನ ಮೂವೀಸ್ ಮೂಲಕ ನಿರ್ಮಾಣವಾಗುತ್ತಿರುವ ಈ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು , ಎರಡನೇ ಹಂತದ ಚಿತ್ರೀಕರಣವನ್ನು ಇದೇ ತಿಂಗಳು 20 ರಿಂದ ಆರಂಭ ಮಾಡಲು ನಿರ್ಧರಿಸಿದ್ದು, ಸುಮಾರು 45 ದಿನಗಳ ಕಾಲ ಚಿತ್ರೀಕರಣ ಮಾಡುವ ಪ್ಲಾನ್ ಚಿತ್ರತಂಡ ಹಾಕಿಕೊಂಡಿದೆ. ಈ ಚಿತ್ರಕ್ಕೆ ಶಿವಶಂಕರ್ ಛಾಯಾಗ್ರಾಹಣ , ಪ್ರವೀಣ್ ಶ್ರೀನಿವಾಸ್ ಮೂರ್ತಿ ಸಂಗೀತ , ಪ್ರಮೋದ್ ಮರುವಂತೆ , ಚೇತನ್ ಕುಮಾರ್ ಸಾಹಿತ್ಯ , ಜೀವನ್ ಪ್ರಕಾಶ್ ಸಂಕಲನ , ವಿನಯ್. ಜಿ. ಆಲೂರ್ ಡಿ.ಐ, ಸಂತೋಷ್. ಸಿ.ಎಂ ಸಹ ನಿರ್ದೇಶನ , ಶ್ರೀನಿವಾಸ್ ವಸ್ತ್ರಲಂಕಾರವಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!