ಕನ್ನಡದ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ಗ್ರ್ಯಾಂಡ್ ಫಿನಾಲೆ ಹಂತಕ್ಕೆ ಹನುಮಂತ ನೇರವಾಗಿ ಎಂಟ್ರಿ ಪಡೆದಿದ್ದಾರೆ.
ಫಿನಾಲೆ ಟಿಕೆಟ್ ಪಡೆಯಲು ಬಿಗ್ ಬಾಸ್ ಒಂದು ಟಾಸ್ಕ್ ನೀಡಿದ್ದರು. ಯಾರು ಅತಿ ಕಡಿಮೆ ಸಮಯ ತೆಗೆದುಕೊಂಡು ಈ ಟಾಸ್ಕ್ ನಿಭಾಯಿಸುತ್ತಾರೋ ಅವರಿಗೆ ಫಿನಾಲೆಗೆ ಎಂಟ್ರಿ ಸಿಗಲಿದೆ ಎಂದು ಘೋಷಿಸಲಾಗಿತ್ತು. ಮನೆಯಲ್ಲಿ ಇರುವ ಇನ್ನುಳಿದ 8 ಘಟಾನುಘಟಿ ಸ್ಪರ್ಧಿಗಳನ್ನೂ ಮೀರಿಸಿ ಹನುಮಂತ ಈ ಸಾಧನೆ ಮಾಡಿದ್ದಾರೆ.
ಟಿಕೆಟ್ ಟು ಫಿನಾಲೆ ಟಾಸ್ಕ್ ತುಂಬಾ ಟಫ್ ಆಗಿತ್ತು. ರಜತ್, ಭವ್ಯಾ, ತ್ರಿವಿಕ್ರಂ ಹಾಗೂ ಹನುಮಂತ ಅವರಲ್ಲಿ ಯಾರು ಕಡಿಮೆ ಸಮಯದಲ್ಲಿ ಮುಗಿಸುತ್ತಾರೋ ಅವರು ಗೆಲ್ಲುತ್ತಾರೆ ಎಂದು ಬಿಗ್ ಬಾಸ್ ಹೇಳಿದ್ದರು. ಈ ಟಾಸ್ಕ್‌ನ್ನು ಎಲ್ಲರೂ ಸಖತ್ ಆಗಿ ಆಡಿದ್ದು ಆದರೆ ಒಬ್ಬ ಸ್ಪರ್ಧಿ ಎಲ್ಲರಿಗಿಂತ ಕಡಿಮೆ ಸಮಯದಲ್ಲಿ ಮುಗಿಸಿ ಫಿನಾಲೆ ಟಿಕೆಟ್ ಗೆದ್ದಿದ್ದಾರೆ.
ಟಾಸ್ಕ್‌ನ್ನು ಎಲ್ಲರಿಗಿಂತಲೂ ಕಡಿಮೆ ಸಮಯದಲ್ಲಿ ಹನುಮಂತ ಅವರು ಕೇವಲ 2 ನಿಮಿಷ 27 ಸೆಕೆಂಡ್ ತೆಗೆದುಕೊಂಡು ಪೂರ್ಣಗೊಳಿಸಿ ಟಿಕೆಟ್ ಟು ಫಿನಾಲೆಗೆ ಆಯ್ಕೆಯಾದರು. ಭವ್ಯಾ ಗೌಡ ಅವರು 3 ನಿಮಿಷ 22 ಸೆಕೆಂಡ್, ರಜತ್ ಅವರು 3 ನಿಮಿಷ 49 ಸೆಕೆಂಡ್, ತ್ರಿವಿಕ್ರಮ್ ಅವರು 2 ನಿಮಿಷ 30 ಸೆಕೆಂಡ್ ಸಮಯ ಪಡೆದುಕೊಂಡರು.
ಸದ್ಯ ಬಿಗ್ಬಾಸ್ ಮನೆಯಲ್ಲಿ 9 ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಹನುಮಂತ ಬಿಗ್ ಬಾಸ್ ಮನೆಯಲ್ಲಿ ಆರಂಭದಿಂದಲೂ ಸೈಲೆಂಟ್ ಆಗಿ ಸದ್ದು ಮಾಡುತ್ತಿದ್ದಾರೆ. ಈ ಸೀಸನ್ನ ಕೊನೆಯ ಕ್ಯಾಪ್ಟನ್ ಆಗಿ ಅವರು ಆಯ್ಕೆ ಆಗಿದ್ದಾರೆ. ಅವರನ್ನು ಅಲ್ಟಿಮೇಟ್ ಕ್ಯಾಪ್ಟನ್ ಎಂದು ಘೋಷಿಸಲಾಗಿದೆ.
—–
Be the first to comment