ರಾಗಿಣಿ ದ್ವಿವೇದಿ ಡ್ರಗ್ಸ್ ಕೇಸ್

ರಾಗಿಣಿ ದ್ವಿವೇದಿ ಡ್ರಗ್ಸ್ ಕೇಸ್ ಖುಲಾಸೆ

ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಅವರ ಮೇಲಿನ ಡ್ರಗ್ಸ್  ಪ್ರಕರಣ ಸಾಕ್ಷ್ಯಾಧಾರ ಕೊರತೆಯಿಂದ ಖುಲಾಸೆಗೊಂಡಿದೆ.

2020 ರಲ್ಲಿ  ಡ್ರಗ್ಸ್   ಪ್ರಕರಣದಲ್ಲಿ ನಟಿ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ವಿರುದ್ಧ ಆರೋಪ ಕೇಳಿಬಂದ  ಹಿನ್ನಲೆಯಲ್ಲಿ ಇಬ್ಬರನ್ನೂ ಬಂಧಿಸಲಾಗಿತ್ತು. ಇಬ್ಬರೂ ನಟಿಯರು ಪರಪ್ಪನ ಅಗ್ರಹಾರದಲ್ಲಿ ಕೆಲವು ದಿನ ಕಳೆದಿದ್ದರು. ಬಳಿಕ ಜಾಮೀನು ಪಡೆದು ಹೊರಬಂದಿದ್ದರು.

ಈ ಪ್ರಕರಣ ರಾಗಿಣಿ ದ್ವಿವೇದಿ ವೃತ್ತಿ ಜೀವನಕ್ಕೂ ಸಾಕಷ್ಟು ಹೊಡೆತ ನೀಡಿತ್ತು. ಕೇಸ್ ಖುಲಾಸೆ ಹಿನ್ನಲೆಯಲ್ಲಿ ರಾಗಿಣಿ  ವೃತ್ತಿ ಜೀವನಕ್ಕೆ ಎದುರಾಗಿದ್ದ ದೊಡ್ಡ ಕಳಂಕ ತೊಳೆದು ಹೋಗಿದೆ.

ಡ್ರಗ್ಸ್ ಮಾಫಿಯಾದೊಂದಿಗೆ ನಂಟು ಹೊಂದಿದ ಆರೋಪ ರಾಗಿಣಿ ಮೇಲೆ ಇತ್ತು. ಪಾರ್ಟಿ ಆಯೋಜಿಸಿ ಡ್ರಗ್ಸ್ ಬಳಕೆಗೂ ಅವರು ಅವಕಾಶ ಮಾಡಿಕೊಟ್ಟಿದ್ದರು ಎನ್ನಲಾಗಿತ್ತು. ಈ ಕಾರಣಕ್ಕೆ  ಅವರ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಆದರೆ ಈ ಬಗ್ಗೆ ಸಾಕ್ಷ್ಯಾಧಾರ ಕೊರತೆಯಿಂದ ಪ್ರಕರಣ ಖುಲಾಸೆಗೊಂಡಿದೆ.

ನಟಿಯ ವಿರುದ್ಧ ಯಾವುದೇ ಸಾಕ್ಷ್ಯಾಧಾರ ಸಿಗದ ಹಿನ್ನಲೆಯಲ್ಲಿ ನಿರಪರಾಧಿ ಎಂದು ಹೈಕೋರ್ಟ್ ಕೇಸ್  ಖುಲಾಸೆಗೊಳಿಸಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!