ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ (77) ಅವರು ವಯೋಸಹಜ ಕಾಯಿಲೆಯಿಂದ ಇಂದು (ಜನವರಿ 15) ಬೆಳಿಗ್ಗೆ ನಿಧನ ಹೊಂದಿದ್ದಾರೆ.
ಸರಿಗಮ ವಿಜಿ ಅವರು ನಿಧನರಾಗಿರುವ ವಿಚಾರವನ್ನು ಪುತ್ರ ರೋಹಿತ್ ತಿಳಿಸಿದ್ದಾರೆ. ವಿಜಿ ಅವರಿಗೆ ಶ್ವಾಸಕೋಶದ ಸಮಸ್ಯೆ ಎದುರಾಗಿತ್ತು. ಕಳೆದ 4 ದಿನಗಳಿಂದ ಯಶವಂತಪುರದ ಬಳಿಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಇಂದು ಮಧ್ಯಾಹ್ನ 1 ಗಂಟಗೆ ಅಸ್ಪತ್ರೆಯಿಂದ ಮಹಾಲಕ್ಷ್ಮಿಪುರಂ ನಲ್ಲಿರುವ ನಿವಾಸಕ್ಕೆ ಮೃತದೇಹ ತರಲಾಗುವುದು. ಮಧ್ಯಾಹ್ನ ಒಂದು ಗಂಟೆಯಿಂದ ನಾಳೆ 10 ಗಂಟೆವರೆಗೂ ಅಂತಿಮ ದರ್ಶನ ನಡೆಯಲಿದೆ. ನಾಳೆ ಬೆಳಗ್ಗೆ 10 ಗಂಟೆ ನಂತರ ಚಾಮರಾಜಪೇಟೆ ಸ್ಮಶಾನದಲ್ಲಿ ಅಂತ್ಯಕ್ರಿಯೆಯಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.
1980ರಲ್ಲಿ ಗೀತಪ್ರಿಯಾ ನಿರ್ದೇಶನದ ‘ಬೆಳವಳದ ಮಡಿಲಲ್ಲಿ’ ಚಿತ್ರಕ್ಕೆ ಸಣ್ಣ ಪಾತ್ರದಲ್ಲಿ ನಟಿಸುವುದರ ಮೂಲಕ ಸರಿಗಮ ವಿಜಿ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟರು. ಅವರು 269 ಚಿತ್ರಗಳಲ್ಲಿ ನಟಿಸಿದ್ದಾರೆ. 80 ಚಿತ್ರಗಳಿಗೆ ಸಹಾಯಕ ನಿರ್ದೇಶನ ಮಾಡಿದ್ದಾರೆ. ಸಿನಿಮಾ ಬಳಿಕ ಸೀರಿಯಲ್ ನಿರ್ದೇಶನ ಮಾಡಿದ್ದಾರೆ. ವಿಜಿ ಹೆಚ್ಚಾಗಿ ನಟ ಟೈಗರ್ ಪ್ರಭಾಕರ್ ಅವರ ಚಿತ್ರಗಳಲ್ಲೇ ಕಾಣಿಸಿಕೊಂಡಿದ್ದಾರೆ. ತಮ್ಮ ಕಾಮಿಡಿ ಮೂಲಕ ಜನರನ್ನು ನಗಿಸಿದ್ದಾರೆ.
—–
Be the first to comment