ನಿರ್ಮಾಪಕಗೆ ಐಟಿ ಶಾಕ್

ಖ್ಯಾತ ನಿರ್ಮಾಪಕಗೆ ಐಟಿ ಶಾಕ್

ಇತ್ತೀಚೆಗೆ ಬಿಡುಗಡೆ  ಆದ ಗೇಮ್ ಚೇಂಜರ್ ಸೇರಿದಂತೆ ಹಲವು ಸಿನಿಮಾಗಳ  ಖ್ಯಾತ ನಿರ್ಮಾಪಕ ದಿಲ್ ರಾಜು ಅವರಿಗೆ  ಬೆಳಗ್ಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.

450 ಕೋಟಿ ರೂಪಾಯಿ ಬಜೆಟ್​ನಲ್ಲಿ ನಿರ್ಮಾಣ ಮಾಡಿದ  ‘ಗೇಮ್ ಚೇಂಜರ್’ ಸಿನಿಮಾ ನಷ್ಟ ಅನುಭವಿಸುತ್ತಿರುವಾಗಲೇ ತೆರಿಗೆ ಇಲಾಖೆ ತಂಡದವರು ದಿಲ್ ರಾಜು ಮನೆ, ಕಚೇರಿ ಹಾಗೂ ಅವರ ಕುಟುಂಬದ ಮೇಲೆ ದಾಳಿ ನಡೆಸಿದ್ದಾರೆ.  ಈ ವೇಳೆ ಹಲವು ಮಹತ್ವದ ದಾಖಲೆಗಳನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ದಿಲ್ ರಾಜು ಜೊತೆ ‘ಪುಷ್ಪ 2’ ಚಿತ್ರ ನಿರ್ಮಾಣ ಸಂಸ್ಥೆ ಮೇಲೂ ಐಟಿ ಅಧಿಕಾರಿಗಳು  ದಾಳಿ ಮಾಡಿದ್ದಾರೆ. ಮೈತ್ರಿ ಮೂವಿ ಮೇಕರ್ಸ್​ ನವೀನ್​, ಸಿಇಒ ಚರ್ರಿ ಕಚೇರಿ ಹಾಗೂ ಆಪ್ತರ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳಿಂದ ದಾಖಲೆ ಪರಿಶೀಲನೆ ಆಗಿದೆ. ವೆಂಕಟೇಶ್ವರ ಪ್ರೊಡಕ್ಷನ್ ಸಂಸ್ಥೆಯಲ್ಲೂ ಐಟಿ ತಂಡ  ದಾಖಲೆ ಪರಿಶೀಲನೆ ಮಾಡಿದೆ.

ಸಂಕ್ರಾಂತಿ ವೇಳೆ ದಿಲ್ ರಾಜು ನಿರ್ಮಾಣದ ‘ಗೇಮ್ ಚೇಂಜರ್’ ಹಾಗೂ ‘ಸಂಕ್ರಾಂತಿಕಿ ವಸ್ತುನ್ನಾಮ್’ ಚಿತ್ರಗಳು ರಿಲೀಸ್ ಆಗಿವೆ. ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ‘ಗೇಮ್ ಚೇಂಜರ್’ ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದೆ.  ‘ಸಂಕ್ರಾಂತಿಕಿ ವಸ್ತುನಾಮ್’ ಚಿತ್ರ ಸೂಪರ್ ಡೂಪರ್ ಹಿಟ್ ಎನಿಸಿಕೊಂಡಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!