ಕಾಂತಾರ ಚಿತ್ರೀಕರಣ

‘ಅರಣ್ಯ ಭೂಮಿಯಲ್ಲಿ ಕಾಂತಾರ ಚಿತ್ರೀಕರಣ ಮಾಡಿಲ್ಲ’

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸುತ್ತಿರುವ ಕಾಂತಾರಾ1 ಶೂಟಿಂಗ್ ಅರಣ್ಯ ಭೂಮಿಯಲ್ಲಿ  ಮಾಡಿಲ್ಲ. ಕಂದಾಯ ಜಮೀನಿನಲ್ಲಿ ಮಾಡಿದ್ದಾರೆ ಎಂದು ಪ್ರಾಥಮಿಕ ವರದಿ ಬಂದಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದಾರೆ.

ಕಾಂತಾರಾ1  ಶೂಟಿಂಗ್ ವಿವಾದಕ್ಕೆ ಸಂಬಂಧಿಸಿದಂತೆ  ಈಶ್ವರ್ ಖಂಡ್ರೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಅರಣ್ಯ ಭೂಮಿಯಲ್ಲಿ ನಿಯಮ ಉಲ್ಲಂಘನೆಯಾಗಿಲ್ಲ ಎಂಬುದು ಪ್ರಾಥಮಿಕ ವರದಿಯಲ್ಲಿ ತಿಳಿದು ಬಂದಿದೆ. ಸಿನಿಮಾ ಚಿತ್ರೀಕರಣಕ್ಕೆ ನಿಯಮಾವಳಿ ಪ್ರಕಾರ ಅನುಮತಿ ನೀಡಲಾಗಿದೆ ಎಂದು  ಎಂದು ಸಚಿವರು ಹೇಳಿದ್ದಾರೆ.

ಅರಣ್ಯ ಭೂಮಿಯಲ್ಲಿ ನಿಯಮ ಉಲ್ಲಂಘನೆ ಆಗಿಲ್ಲ ಎಂಬುದು ಪ್ರಾಥಮಿಕ ವರದಿ. ಆದರೂ ಸಂಪೂರ್ಣ ವರದಿ ಸಲ್ಲಿಸುವಂತೆ ಸೂಚಿಸಿದ್ದೇನೆ.  ನಿಯಮಗಳ ಪ್ರಕಾರ ಅನುಮತಿ ಕೊಡಲಾಗಿತ್ತು.  ಅದು ಕಂದಾಯ ಭೂಮಿ, ಗೋಮಾಳ ಎನ್ನಲಾಗಿದೆ. ಅರಣ್ಯ ಭೂಮಿಯಲ್ಲಿ ನಿಯಮ ಉಲ್ಲಂಘನೆ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಚಿತ್ರತಂಡ ಷರತ್ತುಗಳನ್ನು ಉಲ್ಲಂಘಿಸಿ ವನ್ಯಜೀವಿಗಳಿಗೆ ಅಥವಾ ಸಸ್ಯಸಂಕುಲಕ್ಕೆ ಹಾನಿ ಮಾಡಿದರೆ ಚಿತ್ರೀಕರಣ ಸ್ಥಗಿತಗೊಳಿಸಲು ಕ್ರಮ ವಹಿಸುವಂತೆ  ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ನಿರ್ದೇಶಕರಿಗೆ  ಸೂಚನೆ ನೀಡಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ ಯಸಳೂರು ಭಾಗದಲ್ಲಿ ಕಾಂತಾರ ಸಿನಿಮಾದ ಶೂಟಿಂಗ್ ಗಾಗಿ ತಾತ್ಕಾಲಿಕವಾಗಿ ಸೆಟ್ ನಿರ್ಮಾಣ ಮಾಡಲು ಜ.3 ರಿಂದ ಜ.15 ರವರೆಗೆ ಅವಕಾಶ ನೀಡಲಾಗಿತ್ತು. ಜೊತೆಗೆ ಜ.15 ರಿಂದ ಜ.25 ರ ವರೆಗೆ ಶೂಟಿಂಗ್‌ಗೆ ಅವಕಾಶ ನೀಡಲಾಗಿದೆ.

ಕಾಂತಾರ ಚಿತ್ರತಂಡ ಚಿತ್ರೀಕರಣದ ವೇಳೆ ಕಾಡಿನಂಚಿನ ಅರಣ್ಯ ಪ್ರದೇಶದ ಬಳಿ  ಸ್ಫೋಟಕ ಬಳಕೆ ಮಾಡಿದ ಬಗ್ಗೆ ಆರೋಪ ಕೇಳಿ ಬಂದಿತ್ತು.

Be the first to comment

Leave a Reply

Your email address will not be published. Required fields are marked *

Translate »
error: Content is protected !!