ಸರ್ಕಾರದ ಅನುಮತಿ ಕಡ್ಡಾಯ

ಅರಣ್ಯದಲ್ಲಿ ಶೂಟ್ ಮಾಡಲು ಸರ್ಕಾರದ ಅನುಮತಿ ಕಡ್ಡಾಯ!

ಯಾವುದೇ ಅರಣ್ಯ ಪ್ರದೇಶದಲ್ಲಿ ಸಿನಿಮಾ, ಸಾಕ್ಷ್ಯಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.

ಅರಣ್ಯದಲ್ಲಿ ಶೂಟ್ ಮಾಡಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅನುಮತಿ ಕಡ್ಡಾಯ ಎಂದು ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಚಿತ್ರತಂಡದ ಕೋರಿಕೆಗೆ ಅನುಗುಣವಾಗಿ ಸಾಧಕ, ಬಾಧಕಗಳನ್ನು ಪರಿಶೀಲಿಸಿ ಅಧಿಕಾರಿಗಳು ಅನುಮತಿ ನೀಡಬೇಕು ಎಂದು ಅರಣ್ಯ ಸಚಿವರು ಹೇಳಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್, ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ನಟನೆಯ ಕಾಂತಾರ 2 ಸಿನಿಮಾದ ಬಗ್ಗೆ ಮೇಲೆ ಅರಣ್ಯ ನಾಶ ಆರೋಪ ಕೇಳಿ ಬಂದಿತ್ತು. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ರಾಜ್ಯ ಸರ್ಕಾರ ಮಹತ್ವದ ಆದೇಶ  ಹೊರಡಿಸಿದೆ.

ಶೂಟಿಂಗ್ ವ್ಯಾಪ್ತಿಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ನಿಗದಿತ ಶುಲ್ಕ ಕಟ್ಟಿಸಿಕೊಂಡು ಅನುಮತಿ ನೀಡುತ್ತಿದ್ದಾರೆ.   ಸ್ಥಳೀಯ ಮಟ್ಟದಲ್ಲೂ ಅಧಿಕಾರಿಗಳು ಅನುಮತಿ ನೀಡುತ್ತಿದ್ದಾರೆ. ಇದರಿಂದ ಅರಣ್ಯ ಪ್ರದೇಶದ ಗೌಪ್ಯ ಮಾಹಿತಿ ಹೊರ ಜಗತ್ತಿಗೆ ಲಭಿಸುವ ಸಂಭವ ಇದೆ. ಇದು ಪರಿಸರ ಹಾಗೂ ಜೀವ ವೈವಿಧ್ಯಕ್ಕೂ ಧಕ್ಕೆ ತರುತ್ತದೆ. ಅರಣ್ಯ ವನ್ಯ ಜೀವಿ ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉತ್ತಮ ಪರಿಸರ, ಪ್ರಕೃತಿ ಹಸ್ತಾಂತರಿಸಬೇಕು. ರಾಜ್ಯದ ಯಾವುದೇ ಅರಣ್ಯ ಪ್ರದೇಶದಲ್ಲಿ ಯಾವುದೇ ಬಗೆಯ ಚಿತ್ರೀಕರಣಕ್ಕೆ ಕಡ್ಡಾಯವಾಗಿ ಸರ್ಕಾರದ ವತಿಯಿಂದ ಅನುಮತಿ ಪಡೆಯವುದು ಕಡ್ಡಾಯವಾಗಿದೆ ಎಂದು ಅರಣ್ಯ ಸಚಿವರು ಹೇಳಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!