ಬಿಡುಗಡೆ ಹೊಸ್ತಿಲಿನಲ್ಲಿರುವ ಎಲ್ಲೋ ಜೋಗಪ್ಪ ನಿನ್ನರಮನೆ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಚೊಚ್ಚಲ ನಿರ್ದೇಶನದಲ್ಲಿ ನಿರ್ದೇಶಕ ಹಯವದನ ಹೊಸತನದ ಕಥೆಯನ್ನು ಪ್ರೇಕ್ಷಕರ ಮುಂದೆ ಹರವಿಡೋದಿಕ್ಕೆ ಹೊರಟ್ಟಿದ್ದಾರೆ. ಎರಡು ನಿಮಿಷ 49 ಸೆಕೆಂಡ್ ಇರುವ ಎಲ್ಲೋ ಜೋಗಪ್ಪ ನಿನ್ನರಮನೆ ಟ್ರೇಲರ್ ಪ್ರಾಮಿಸಿಂಗ್ ಆಗಿದೆ. ಸುಂದರ ಪಯಣದ ಕಥೆ ಜೊತೆಗೆ ಆಕ್ಷನ್, ಎಮೋಷನ್, ಲವ್, ಕಾಮಿಡಿ ಅಂಶಗಳನ್ನು ಬ್ಲೆಂಡ್ ಮಾಡಿ ಟ್ರೇಲರ್ ಕಟ್ಟಿಕೊಡಲಾಗಿದೆ.
ಕಂಬ್ಳಿಹುಳ ಸಿನಿಮಾ ನಾಯಕ ಅಂಜನ್ ನಾಗೇಂದ್ರ ಹೀರೋ ಆಗಿ ನಟಿಸಿದ್ದು, ಯುವ ನಟಿ ವೆನ್ಯ ರೈ ನಾಯಕಿ ಸಾಥ್ ಕೊಟ್ಟಿದ್ದಾರೆ. ‘ಕೆಟಿಎಂ’, ‘ಮೂನ್ ವಾಕ್’ ಹಾಗೂ ಮಲಯಾಳಂನ’ಮನಸ್ಮಿತ’ ಅನ್ನೋ ಸಿನಿಮಾದ ನಟಿ ಸಂಜನಾ ದಾಸ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬಿರಾದರ್, ಶರತ್ ಲೋಹಿತಾಶ್ವ, ದಾನಪ್ಪ, ಸ್ವಾತಿ, ದಿನೇಶ್ ಮಂಗಳೂರು, ಲಕ್ಷ್ಮೀ ನಾಡಗೌಡ ಮುಂತಾದವರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ.
ಎಲ್ಲೋ ಜೋಗಪ್ಪ ನಿನ್ನರಮನೆ ಜರ್ನಿಯ ಕಥಾನಕ. ಜೊತೆಗೆ ಅಪ್ಪನ ಮಗನ ಬಾಂಧವ್ಯದ ಎಳೆಯೂ ಚಿತ್ರದಲ್ಲಿದೆ. ಬೆಂಗಳೂರಿನಿಂದ ಶುರುವಾದ ಪ್ರಯಾಣ ಹಿಮಾಲಯದವರೆಗೆ ಸಾಗುತ್ತದೆ. ಭಾವನಾತ್ಮಕವಾದ ಈ ಸಿನಿಮಾ ಯುವ ಜನರಿಗೆ ಹೆಚ್ಚು ಮನರಂಜನೆ ನೀಡುತ್ತದೆ. ಹಲವು ರಾಜ್ಯಗಳ ಅನೇಕ ಲೊಕೇಷನ್ಗಳಲ್ಲಿ ಈ ಸಿನಿಮಾದ ಶೂಟಿಂಗ್ ಮಾಡಲಾಗಿದೆ. ಸೂಪರ್ ಹಿಟ್ ಸೀರಿಯಲ್ ಗಳಾದ ಅಗ್ನಿಸಾಕ್ಷಿ, ನಾಗಿಣಿ, ಕಮಲಿ ನಿರ್ದೇಶಸಿರುವ ಹಯವದನ ಅವರು ಚೊಚ್ಚಲ ಬಾರಿಗೆ ಆಕ್ಷನ್ ಕಟ್ ಹೇಳಿರುವ ಎಲ್ಲೋ ಜೋಗಪ್ಪ ನಿನ್ನರಮನೆ ಸಿನಿಮಾಗೆ ಶಿವ ಪ್ರಸಾದ್ ಸಂಗೀತ, ನಟರಾಜ್ ಮದ್ದಾಲ ಛಾಯಾಗ್ರಹಣ, ರವಿಚಂದ್ರನ್ ಸಂಕಲನ ಒದಗಿಸಿದ್ದಾರೆ. ಪ್ರಮೋದ್ ಮರವಂತೆ ಮತ್ತು ರವೀಂದ್ರ ಮುದ್ದಿ ಸಾಹಿತ್ಯ ಬರೆದಿದ್ದಾರೆ. ಭಜರಂಗಿ ಮೋಹನ್ ನೃತ್ಯ ನಿರ್ದೇಶನ ಮಾಡಿದ್ದಾರೆ. ನರಸಿಂಹ ಸಾಹಸ ನಿರ್ದೇಶನ ಈ ಸಿನಿಮಾಗಿದೆ.
‘ಪೆಂಡೋರಾಸ್ ಬಾಕ್ಸ್ ಪ್ರೊಡಕ್ಷನ್’ ಮತ್ತು ‘ಕೃಷ್ಣಛಾಯಾ ಚಿತ್ರ’ ಬ್ಯಾನರ್ ಮೂಲಕ ಪವನ್ ಸಿಮಿಕೇರಿ ಹಾಗೂ ಸಿಂಧು ಹಯವದನ ಅವರು ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಟ್ರೇಲರ್ ಮೂಲಕ ಪ್ರೇಕ್ಷಕರಿಗೆ ಆಮಂತ್ರಣ ಕೊಟ್ಟಿರುವ ಚಿತ್ರತಂಡ ಇದೇ ತಿಂಗಳ 21ಕ್ಕೆ ಎಲ್ಲೋ ಜೋಗಪ್ಪ ನಿನ್ನರಮನೆ ಸಿನಿಮಾವನ್ನು ಥಿಯೇಟರ್ ಗೆ ತರಲಿದೆ.

Be the first to comment