ರುದ್ರಾಭಿಷೇಕಂ

ಕರಾವಳಿ ಸುತ್ತಮುತ್ತ ‘ರುದ್ರಾಭಿಷೇಕಂ’ ಹಾಡುಗಳ ಚಿತ್ರೀಕರಣ

ವೀರಭದ್ರ ದೇವರ ಇತಿಹಾಸವನ್ನು ಹಿನ್ನೆಲೆಯಾಗಿಟ್ಟುಕೊಂಡು ಕಮರ್ಷಿಯಲ್ ಕಥೆಯೊಂದನ್ನು ನಿರ್ದೇಶಕ ವಸಂತ್ ಕುಮಾರ್ ಅವರು ರುದ್ರಾಭಿಷೇಕಂ ಚಿತ್ರದ ಮೂಲಕ ಹೇಳಹೊರಟಿದ್ದಾರೆ.

ನಟ ವಿಜಯ ರಾಘವೇಂದ್ರ ತಂದೆ, ಮಗನಾಗಿ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದಲ್ಲಿ ಮೊದಲ ಬಾರಿಗೆ ಒಬ್ಬ ವೀರಗಾಸೆ ಕಲಾವಿದನ ಪಾತ್ರಕ್ಕೂ ಸಹ ಅವರು ಬಣ್ಣ ಹಚ್ಚಿದ್ದಾರೆ.

ನಮ್ಮ ನಾಡಿನ ಸಾಂಸ್ಕೃತಿಕ ಹಿನ್ನೆಲೆ, ಇತಿಹಾಸ, ಅದರ ವೈಭವವನ್ನು ನಿರ್ದೇಶಕ ವಸಂತ್ ಕುಮಾರ್ ಅವರು ಈ ಚಿತ್ರದ ಮೂಲಕ ಹೇಳಹೊರಟಿದ್ದು, ಈಗಾಗಲೇ ದೇವನಹಳ್ಳಿ ಸುತ್ತಮುತ್ತ ಮೊದಲ ಹಂತದ ಚಿತ್ರೀಕರಣ ಮುಗಿಸಿ ಇತ್ತೀಚೆಗೆ ಕರಾವಳಿ ಭಾಗದಲ್ಲಿ ಎರಡು ಹಾಡುಗಳನ್ನೂ ಸಹ ಶೂಟ್‌ ಮಾಡಿಕೊಂಡು ಬಂದಿದ್ದಾರೆ. ಗೋಕರ್ಣ, ಹೊನ್ನಾವರ, ಕುಮಟಾ, ಅಬ್ಬಕ್ಕ ಫೋರ್ಟ್ ಅಲ್ಲದೆ ಅಘನಾಶಿನಿ ಹಿನ್ನೀರಿನ, ಈವರೆಗೆ ಯಾರೂ ಶೂಟ್ ಮಾಡದಂಥ ಲೊಕೇಶನ್ ನಲ್ಲಿ ಹಾಡುಗಳನ್ನು ಚಿತ್ರೀಕರಿಸಿದ್ದಾರೆ. ಉಳಿದ ಎರಡು ಹಾಡು, ಫೈಟ್ ಹಾಗೂ ಮಾತಿನಭಾಗದ ಚಿತ್ರೀಕರಣವನ್ನು ದೇವನಹಳ್ಳಿ, ವಿಜಯಪುರದ ಸುತ್ತಮುತ್ತ ನಡೆಸಲಾಗುವುದು ಎಂದು ನಿರ್ದೇಶಕ ವಸಂತ್ ಕುಮಾರ್ ತಿಳಿಸಿದ್ದಾರೆ.

ರುದ್ರಾಭಿಷೇಕಂ

ಬಿಗ್ ಬಾಸ್ ಖ್ಯಾತಿಯ ಪ್ರಿಯಾಂಕ ತಿಮ್ಮೇಶ್ ಚಿತ್ರದ ನಾಯಕಿಯಾಗಿ ನಟಿಸುತ್ತಿದ್ದಾರೆ. ನಿರ್ದೇಶಕ ವಸಂತ್ ಕುಮಾರ್ ಅವರು ಒಬ್ಬ ತತ್ವಜ್ಞಾನಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತಂದೆ, ಮಗ ಎರಡೂ ಪಾತ್ರಗಳ ಜತೆ ಇಡೀ ಚಿತ್ರದಲ್ಲಿ ಬರುವಂಥ ಪಾತ್ರ. ನಮ್ಮ ನಾಡಿನ ಜನಪದ ಹಿನ್ನೆಲೆ ಇಟ್ಟುಕೊಂಡು, ನೂರಾರು ವರ್ಷಗಳ ಇತಿಹಾಸ ಇರುವ ಒಂದು ಕಲೆಯನ್ನು ಈ ಚಿತ್ರದ ಮೂಲಕ ಹೇಳಲಾಗಿದೆ.ಈ ಕಥೆಯ ಮೂಲ ಹಂದರ ವೀರಭದ್ರ ದೇವರು. ಆತ ಹೇಗೆ ಬಂದ, ಆತ ಬರಲು ಕಾರಣವೇನು ಎಂಬುದನ್ನು ರುದ್ರಾಭಿಷೇಕಂ ಚಿತ್ರದಲ್ಲಿ ಹೇಳಲಾಗಿದೆ.

ನಿರ್ದೇಶಕರ ಸ್ನೇಹಿತರಾದ ಜಯರಾಮಣ್ಣ, ಶಿವರಾಮ್, ಚಿದಾನಂದ್, ಹಡಪದ, ರಮೇಶ್, ಮಂಜುನಾಥ್, ಮುನಿಕೃಷ್ಣಪ್ಪ, ರವಿ, ಅಶ್ವಥ್, ಆನಂದ್ ಸೇರಿ ಫ್ಯಾನ್ ಇಂಡಿಯಾ ಕ್ರಿಯೇಶನ್ಸ್ ಬ್ಯಾನರ್ ಮೂಲಕ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ರುದ್ರಾಭಿಷೇಕಂ ಚಿತ್ರದಲ್ಲಿ ಬಲ ರಾಜವಾಡಿ ಅವರು ಊರ ಗೌಡನಾಗಿ ಕಾಣಿಸಿಕೊಂಡಿದ್ದಾರೆ. ಹಿರಿಯ ಸಂಗೀತ ನಿರ್ದೇಶಕ ವಿ. ಮನೋಹರ್ ಅವರ ಸಂಗೀತ ಸಂಯೋಜನೆ, ಮುತ್ತುರಾಜ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

ರುದ್ರಾಭಿಷೇಕಂ

Be the first to comment

Leave a Reply

Your email address will not be published. Required fields are marked *

Translate »
error: Content is protected !!