ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿ ನಟಿ ರನ್ಯಾ ರಾವ್ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಪ್ರಕರಣದ ಗಂಭೀರತೆ ಮತ್ತು ನಟಿಯ ಖ್ಯಾತಿಯನ್ನು ಪರಿಗಣಿಸಿ ಬೆಂಗಳೂರಿನ 64 ನೇ CCH ಸೆಷನ್ಸ್ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ರನ್ಯಾ ರಾವ್ ಪ್ರಕರಣದಲ್ಲಿ ಅಂತರರಾಷ್ಟ್ರೀಯ ಸಂಪರ್ಕಗಳಿವೆ. ಕಸ್ಟಮ್ಸ್ ನಿಯಮಗಳನ್ನು ಉಲ್ಲಂಘಿಸಲಾಗಿದೆ. ರನ್ಯಾ ರಾವ್ಗೆ ಜಾಮೀನು ನೀಡುವುದರಿಂದ ಸಾಕ್ಷ್ಯ ನಾಶ ಮತ್ತು ತನಿಖೆಗೆ ಅಡ್ಡಿಯಾಗುವ ಸಾಧ್ಯತೆ ಇದೆ ಎಂದು ನ್ಯಾಯಾಲಯ ಹೇಳಿದೆ.
ಜಾಮೀನು ನೀಡಿದರೆ ರನ್ಯಾ ರಾವ್ ಅವರು ದೇಶ ಬಿಟ್ಟು ಹೋಗುವ ಸಾಧ್ಯತೆ ಇದೆ. ಪ್ರಕರಣದಲ್ಲಿ ಪ್ರಭಾವಿ ವ್ಯಕ್ತಿಗಳು ಭಾಗಿಯಾಗಿರುವ ಸಾಧ್ಯತೆ ಇದ್ದು, ತನಿಖೆಯನ್ನು ಬೇರೆಡೆಗೆ ತಿರುಗಿಸುವ ಸಾಧ್ಯತೆ ಇದೆ ಎಂದು ನ್ಯಾಯಾಲಯ, ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅವರನ್ನು ಮಾರ್ಚ್ 3 ರಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಆರ್ಐ ಅಧಿಕಾರಿಗಳು ಬಂಧಿಸಿದ್ದರು. ರನ್ಯಾ ರಾವ್ 14 ಕೆಜಿಗಿಂತ ಹೆಚ್ಚು ತೂಕದ ಚಿನ್ನವನ್ನು ಕಳ್ಳಸಾಗಣೆ ಮಾಡುವಾಗ ಸಿಕ್ಕಿಬಿದ್ದಿದ್ದರು.
ರನ್ಯಾ ರಾವ್ ಅವರ ಹಿಂದೆ ಕೆಲ ಸಚಿವರು ಮತ್ತು ಶಾಸಕರು ಇದ್ದಾರೆ ಎಂದು ಚರ್ಚೆಯಾಗುತ್ತಿದೆ. ರನ್ಯಾ ರಾವ್ ಅವರು ಉನ್ನತ ಸರ್ಕಾರಿ ಅಧಿಕಾರಿಗಳಿಗೆ ನೀಡಲಾದ ವಿಶೇಷ ಅಧಿಕಾರವನ್ನು ಬಳಸಿಕೊಂಡು ಅಕ್ರಮವಾಗಿ ಚಿನ್ನವನ್ನು ಸಾಗಿಸುತ್ತಿದ್ದರು ಎಂದು ಬಹಿರಂಗವಾಗಿದೆ.
—–

Be the first to comment