ಹಿರಿಯ ನಿರ್ದೇಶಕ ಓಂಪ್ರಕಾಶ್ ರಾವ್ ತಮ್ಮ ನಿರ್ದೇಶನದ 50ನೇ ಚಿತ್ರದ ಘೋಷಣೆ ಮಾಡಿದ್ದಾರೆ. ಯುಗಾದಿ ದಿನದಂದು “ಗೆರಿಲ್ಲಾ WAR” ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ.
“ಮಂಡ್ಯ ಸ್ಟಾರ್” ಲೋಕಿ ಎಂದೇ ಪ್ರಸಿದ್ಧರಾಗಿರುವ ಲೋಕೇಶ್ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ಓಂಪ್ರಕಾಶ್ ರಾವ್ಕ ಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ದೀಪು.ಪಿ.ಆರ್ ಸಂಭಾಷಣೆ ಬರೆಯುತ್ತಿದ್ದಾರೆ. ರವಿಕುಮಾರ್ ಅವರ ಛಾಯಾಗ್ರಹಣ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಲಕ್ಷ್ಮಣ್ ರೆಡ್ಡಿ ಅವರ ಸಂಕಲನವಿದೆ.
ಗಂಗಮ್ಮ ಎಂಟರ್ಪ್ರೈಸಸ್ ಲಾಂಛನದಲ್ಲಿ ರಮೇಶ್ ಅಬ್ಬನಕುಪ್ಪೆ(ಬಿಡದಿ) ಹಾಗೂ ಸ್ನೇಹಿತರು ನಿರ್ಮಿಸುತ್ತಿರುವ ಈ ಚಿತ್ರವನ್ನು ಸಿ.ಮಾದೇಶ್ ಅರ್ಪಿಸುತ್ತಿದ್ದಾರೆ. ಅಚ್ಯುತಕುಮಾರ್, ರಂಗಾಯಣ ರಘು, ಸ್ವಸ್ತಿಕ್ ಶಂಕರ್, ಸುಧಾ ಬೆಳವಾಡಿ, ಚಿತ್ರಾ ಶೆಣೈ, ಪೂಜಾ ಗೌಡ ಮುಂತಾದವರು ತಾರಾಬಳಗದಲ್ಲಿದ್ದಾರೆ. ನಾಯಕಿ ಸೇರಿದಂತೆ ಚಿತ್ರದ ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.
“ಗೆರಿಲ್ಲಾ WAR” ಒಂದು ರೀತಿಯ ಯುದ್ಧವಾಗಿದ್ದು, ಅಲ್ಲಿ ಒಂದು ಸಣ್ಣ ಗುಂಪು ದೊಡ್ಡ ಸಂಖ್ಯೆಯ ಶತ್ರುಗಳೊಂದಿಗೆ ವ್ಯವಹರಿಸುವಾಗ ಅಸಾಂಪ್ರದಾಯಿಕ ತಂತ್ರಗಳನ್ನು ಬಳಸುತ್ತದೆ. ಹಿಂದೆ ಈ ರೀತಿಯ ಯುದ್ಧಗಳು ಆಗಿರುವ ಅನೇಕ ಉದಾಹರಣೆಗಳಿದೆ. ನಮ್ಮದು ಐತಿಹಾಸಿಕ ಚಿತ್ರವಲ್ಲ. ಈ ವಿಷಯವನ್ನಿಟ್ಟುಕೊಂಡು ಈಗಿನ ಸಮಾಜದಲ್ಲಿ ಹೆಣ್ಣುಮಕ್ಕಳು ಎದುರಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ತೋರಿಸುವ ಪ್ರಯತ್ನ ಮಾಡಲಾಗುತ್ತಿದೆ. ಜೂನ್ ನಿಂದ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ಓಂಪ್ರಕಾಶ್ ರಾವ್ ತಿಳಿಸಿದ್ದಾರೆ.
—-

Be the first to comment