ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರದ ಚಿತ್ರೀಕರಣ ಮುಂಬೈನಲ್ಲಿ ನಡೆಯುತ್ತಿದ್ದು, ನಟಿ ನಯನತಾರಾ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.
ನಯನತಾರಾ ಅವಳಿ ಮಕ್ಕಳೊಂದಿಗೆ ಮುಂಬೈ ವಿಮಾನ ನಿಲ್ದಾಣದಲ್ಲಿ ಸ್ವೆಟ್ಪ್ಯಾಂಟ್ ಮತ್ತು ಸ್ವೆಟ್ಶರ್ಟ್ ಒಳಗೊಂಡ ಕಪ್ಪು ಬಣ್ಣದ ಕೋ-ಆರ್ಡ್ ಸೆಟ್ ಧರಿಸಿ ಕಾಣಿಸಿಕೊಂಡಿರೆ. ಚಿತ್ರತಂಡ ಮುಂಬೈ, ಗೋವಾ ಮತ್ತು ಬೆಂಗಳೂರಿನ ಸುತ್ತಮುತ್ತ ಚಿತ್ರೀಕರಣ ನಡೆಸುತ್ತಿದೆ.
ಕೆಲವು ದಿನಗಳ ಹಿಂದೆ ಚಿತ್ರದ ನಾಯಕ ರಾಕಿಂಗ್ ಸ್ಟಾರ್ ಯಶ್ ಚಿತ್ರೀಕರಣ ಪ್ರಾರಂಭಿಸಲು ಮುಂಬೈಗೆ ಬಂದಿದ್ದಾರೆ. ಕಿಯಾರಾ ಅಡ್ವಾಣಿ ಮತ್ತು ತಾರಾ ಸುತಾರಿಯಾ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಕೈಲ್ ಪಾಲ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ಗೀತು ಮೋಹನ್ದಾಸ್ ನಿರ್ದೇಶನ ಮತ್ತು ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಅಡಿಯಲ್ಲಿ ವೆಂಕಟ್ ಕೆ ನಾರಾಯಣ ಮತ್ತು ಯಶ್ ನಿರ್ಮಿಸಿರುವ ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ‘ ಚಿತ್ರ 2026ರ ಮಾರ್ಚ್ 19 ರಂದು ಬಿಡುಗಡೆಗೆ ಎದುರು ನೋಡುತ್ತಿದೆ. ಈ ಚಿತ್ರಕ್ಕೆ ರಾಜೀವ್ ರವಿ ಅವರ ಛಾಯಾಗ್ರಹಣವಿದೆ.
—-

Be the first to comment