ಮೇ 9ಕ್ಕೆ ‘ಸೂತ್ರಧಾರಿ’ ಬಿಡುಗಡೆ

ಕಿರಣ್ ಕುಮಾರ್ ಚೊಚ್ಚಲ ನಿರ್ದೇಶನದ, ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ “ಸೂತ್ರಧಾರಿ” ಚಿತ್ರ ಮೇ 9 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

ನವರಸನ್ ನಿರ್ಮಾಣದ “ಸೂತ್ರಧಾರಿ” ಚಿತ್ರದ ನಿರ್ಮಾಪಕರಾದ ಚೇತನ್ ಗೌಡ, ಮುನೇಗೌಡ ಹಾಗೂ ರಾಜೇಶ್ ಅವರು ಚಿತ್ರ ಬಿಡುಗಡೆ ದಿನಾಂಕ ಅನಾವರಣ ಮಾಡಿದ್ದಾರೆ.

ನಿರ್ಮಾಪಕ ನವರಸನ್, ‘ಮೇ 9 ರಂದು ನಮ್ಮ ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.  ಎಲ್ಲರ ಸಹಕಾರದಿಂದ ಚಿತ್ರ ಉತ್ತಮವಾಗಿ ಮೂಡಿ ಬಂದಿದೆ.  ಚಿತ್ರದಲ್ಲಿ ನೀವು ಚಂದನ್ ಶೆಟ್ಟಿ ಅವರನ್ನು ವಿಭಿನ್ನ ಪಾತ್ರದಲ್ಲಿ ನೋಡಬಹುದು’ ಎಂದು ತಿಳಿಸಿದ್ದಾರೆ.

‘ನಾಯಕನಾಗಿ ಇದು ಮೊದಲ ಸಿನಿಮಾ. ನನ್ನ ಪಾತ್ರ ಬಹಳ ಚೆನ್ನಾಗಿದೆ. ಈ ಚಿತ್ರದಲ್ಲಿ ನಟಿಸಿದ ನಂತರ ನನ್ನ ಜೀವನದಲ್ಲಿ ಸಾಕಷ್ಟು ಬದಲಾವಣೆ ಆಗಿದೆ.  ನಾನು ಬಹಳ ದಿನಗಳಿಂದ ಕಾಯುತ್ತಿದ್ದ “ಸೂತ್ರಧಾರಿ”  ಮೇ 9 ರಂದು ಬಿಡುಗಡೆಯಾಗಲಿದೆ.   ಚಿತ್ರದ ಹಾಡುಗಳು ಅಧಿಕ ಮಿಲಿಯನ್ ವೀಕ್ಷಣೆಯಾಗಿ ಟ್ರೆಂಡಿಂಗ್ ನಲ್ಲಿದೆ.  ಈ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ’ ಎಂದು  ನಾಯಕ ಚಂದನ್ ಶೆಟ್ಟಿ ಹೇಳಿದ್ದಾರೆ.

ಚಿತ್ರದಲ್ಲಿ ಸಂಜನಾ ಆನಂದ್, ಅಪೂರ್ವ,  ಗಣೇಶ್ ನಾರಾಯಣ್, ಪ್ರಶಾಂತ್ ನಟನ, ಮೀರಾಶ್ರೀ, ಸುಶ್ಮಿತಾ, ಪಲ್ಲವಿ ಮುಂತಾದವರು ನಟಿಸಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!