ಧಾರಾವಾಹಿ ನಟಿ ವೈಷ್ಣವಿ ಗೌಡ ಅವರು ಅಕಾಯ್ ಎನ್ನುವವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಅಗ್ನಿ ಸಾಕ್ಷಿ ಹಾಗೂ ಸೀತಾರಾಮ ಧಾರಾವಾಹಿ ನಟಿ ವೈಷ್ಣವಿ ಗೌಡ ಮತ್ತು ಅಕಾಯ್ ನಿಶ್ಚಿತಾರ್ಥದ ಹಲವಾರು ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಕುಟುಂಬಸ್ಥರ ಸಮ್ಮುಖದಲ್ಲಿ ವೈಷ್ಣವಿ ಗೌಡ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಬೆಳಿಗ್ಗೆ ವೈಷ್ಣವಿ ಗೌಡ ಅವರು ಸಾಂಪ್ರದಾಯಿಕವಾಗಿ ಎಂಗೇಜ್ ಆಗಿದ್ದಾರೆ.
ವೈಷ್ಣವಿ ಗೌಡ ಅವರು ‘ಬಿಗ್ ಬಾಸ್’ನಲ್ಲಿ ಸ್ಪರ್ಧಿಸಿದ್ದ ಸಂದರ್ಭದಲ್ಲಿ ಮದುವೆ ಬಗ್ಗೆ ಇರುವ ಕನಸುಗಳ ಬಗ್ಗೆ ಹೇಳಿಕೊಂಡಿದ್ದರು. ಮದುವೆನ ಹೀಗೆ ಆಗ್ತೀನಿ, ಹಾಗೆ ಆಗ್ತೀನಿ ಎಂದೆಲ್ಲ ವಿವರಿಸಿದ್ದರು. ಅವರಿಗೆ ಮದುವೆ ಆಫರ್ಗಳು ಬಂದರೂ ಅದನ್ನು ಒಪ್ಪಿಲ್ಲ ಎಂದಿದ್ದರು. ಈಗ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ.
ಅಕಾಯ್ ಅವರು ಬೇರೆ ರಾಜ್ಯದವರು. ಏರ್‌ಫೋರ್ಸ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಅಕಾಯ್ ಅವರಿಂದಲೇ ವೈಷ್ಣವಿ ಈ ಬಾರಿ ಬೆಂಗಳೂರಿನಲ್ಲಿ ನಡೆದಿದ್ದ ಏರ್‌ಶೋ ವೀಕ್ಷಣೆ ಮಾಡಿದ್ದರು. ಇದನ್ನೇ ಅವರು ಪರೋಕ್ಷವಾಗಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು
“ಥ್ಯಾಂಕ್ಯು ಎ. ನಿಮ್ಮಿಂದಲೇ ಏರ್‌ಶೋ ನೋಡೋದು ಸಾಧ್ಯ ಆಯ್ತು.ಇದೊಂದು ಅದ್ಭುತ ಅನುಭವ” ಎಂದು ಹೇಳಿದ್ದರು.
—-

Be the first to comment