ರಜತ್ ಮತ್ತೆ ಅರೆಸ್ಟ್!

ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ನ್ನು ಬಸವೇಶ್ವರನಗರ ಪೊಲೀಸರು ಮತ್ತೆ ಬಂಧಿಸಿದ್ದಾರೆ.

ರೀಲ್ಸ್‌ಗೆ ಬಳಸಿದ್ದ ಮಚ್ಚು ಸಿಗದ ಹಿನ್ನೆಲೆ 2 ಬಾರಿ ನೋಟಿಸ್ ನೀಡಿದ್ದರು. ಆದರೆ ಪೊಲೀಸ್ ವಿಚಾರಣೆಗೆ ಗೈರಾಗಿದ್ದಕ್ಕೆ ಅಸಮಾಧಾನಗೊಂಡಿದ್ದ ಕೋರ್ಟ್ ಎನ್‌ಬಿಡಬ್ಲ್ಯೂ ಜಾರಿ ಮಾಡಿತ್ತು. ಪೊಲೀಸರ ವಿಚಾರಣೆ ವೇಳೆ ಹಾಜರಾಗುವಂತೆ ಸೂಚಿಸಿ ನ್ಯಾಯಾಲಯ ಷರತ್ತು ವಿಧಿಸಿ ಜಾಮೀನು ನೀಡಿತ್ತು.

ವಿಚಾರಣೆಗೆ ಹಾಜರಾಗಿದ್ದ ವೇಳೆ ರಜತ್‌ ನ್ನು ಪೊಲೀಸರು ಬಂಧಿಸಿದ್ದಾರೆ. ರಜತ್ ಬಂಧನದ ಬೆನ್ನಲ್ಲೇ ವಿನಯ್ ಗೌಡ ಬಂಧನಕ್ಕೆ ಪೊಲೀಸರು ತೆರಳಿದ್ದಾರೆ.

ಕಳೆದ ಮಾರ್ಚ್ 20ರಂದು ನಾಗರಬಾವಿಯ ಅಕ್ಷಯ ಸ್ಟುಡಿಯೋ ಬಳಿ ಮಾರಕಾಸ್ತ್ರ ಹಿಡಿದು ಸುಮಾರು 18 ಸೆಕೆಂಡ್‌ಗಳ ರೀಲ್ಸ್ ವಿಡಿಯೋ ಮಾಡಿದ್ದರು.  ಇದನ್ನು ಬುಜ್ಜಿ ಹೆಸರಿನಲ್ಲಿ ಇನ್‌ಸ್ಟಾಗ್ರಾಂ ಖಾತೆಗೆ ರಜತ್ ಅಪ್‌ಲೋಡ್ ಮಾಡಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆ ಬಸವೇಶ್ವನಗರ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ವಿಚಾರಣೆಗೊಳಪಡಿಸಿದ್ದರು.

ವಿಡಿಯೋದಲ್ಲಿ ನಕಲಿ ಮಚ್ಚು ಉಪಯೋಗಿಸಲಾಗಿದೆ ಎಂದು ಹೇಳಿ ಫೈಬರ್ ನಿಂದ ತಯಾರಿಸಿದ ಮಚ್ಚನ್ನು ಆರೋಪಿಗಳು ಪೊಲೀಸರಿಗೆ ನೀಡಿದ್ದರು. ಆದರೆ ತನಿಖೆ ವೇಳೆ ವಿಡಿಯೋದಲ್ಲಿ ಬಳಕೆಯಾಗಿರುವ ಮಚ್ಚಿಗೂ ಆರೋಪಿಗಳು ನೀಡಿದ್ದ ಮಚ್ಚಿಗೂ ತಾಳೆಯಾಗದ ಹಿನ್ನೆಲೆ ಪೊಲೀಸರು ಆರೋಪಿಗಳನ್ನು  ರೀಲ್ಸ್​ನಲ್ಲಿ ಬಳಕೆಯಾಗಿರುವ ಮಚ್ಚು ತೋರಿಸುವಂತೆ ಸ್ಥಳ ಮಹಜರು ಮಾಡಿದ್ದರು.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!