ಸ್ಪಾರ್ಕ್ ಸಿನಿಮಾದ ಪೋಸ್ಟರ್ ವಿವಾದ ತಣ್ಣಗಾಗಿದ್ದು, ಚಿತ್ರದ ನಿರ್ದೇಶಕ ಮಹಾಂತೇಶ್ ಹಂದ್ರಾಳ್ , ರಮೇಶ್ ಇಂದಿರಾ ಬಳಿ ಕ್ಷಮೆ ಯಾಚಿಸಿದ್ದಾರೆ.
ಪ್ರೇಮ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾದ ಪೋಸ್ಟರ್ ನಲ್ಲಿ ರಾಜಕಾರಣಿಯ ಚಿತ್ರವನ್ನು ಸಿಗಾರಿನಿಂದ ಬೆಂಕಿ ನೀಡುವ ಚಿತ್ರವಿತ್ತು. ಆ ರಾಜಕಾರಣಿಯ ಚಿತ್ರ ಖ್ಯಾತ ಕಲಾವಿದ ಕಂ ನಿರ್ದೇಶಕ ರಮೇಶ್ ಇಂದಿರಾ ಅವರದ್ದು. ಪೋಸ್ಟರ್ ರಮೇಶ್ ಇಂದಿರಾ ಅವರ ಚಿತ್ರ ‘ಭೀಮಾ’ ಸಿನಿಮಾದ್ದಾಗಿತ್ತು. ಪೋಸ್ಟರ್ ನೋಡಿದ ನಟಿ, ನಿರ್ಮಾಪಕಿ ಶ್ರುತಿ ನಾಯ್ಡು ಚಿತ್ರತಂಡ ಹಾಗೂ ಪ್ರೇಮ್ ವಿರುದ್ಧ ಬೇಸರ ವ್ಯಕ್ತಪಡಿಸಿ ಕಾನೂನು ಹೋರಾಟದ ಎಚ್ಚರಿಕೆ ನೀಡಿದ್ದರು.
”ನಿಮ್ಮಿಂದ ಪರ್ಮಿಷನ್ ತೆಗೆದುಕೊಂಡು ಮಾಡಬೇಕಿತ್ತು. ಮ್ಯಾನೇಜರ್ ಹೇಳಿದ್ದಾರೆಂದು ಫೋಟೋ ಬಳಸಲಾಗಿದೆ. ಆದರೆ ಅದು ಮಿಸ್ ಕಮ್ಯೂನಿಕೇಷನ್ ಆಗಿದೆ ಕ್ಷಮಿಸಿ” ಎಂದು ನಿರ್ದೇಶಕ ಮಹಾಂತೇಶ್ ಹಂದ್ರಾಳ್ ಕೇಳಿಕೊಂಡಿದ್ದಾರೆ.
”ಹೊಸ ನಿರ್ದೇಶಕರಿಗೆ ಒಳ್ಳೆದಾಗಲಿ. ತೊಂದರೆ ಇಲ್ಲ. ಮೊದಲು ನೀವು ಒಮ್ಮೆ ತಿಳಿಸಬೇಕಿತ್ತು. ಆದರೆ ಅದು ನಡೆದು ಹೋಗಿದೆ. ಮುಂದೆ ಈ ರೀತಿ ತಪ್ಪು ಆಗದಂತೆ ನೋಡಿಕೊಳ್ಳಿ” ಎಂದು ರಮೇಶ್ ಇಂದಿರಾ ಹೇಳಿದ್ದಾರೆ.
ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಸ್ಪಾರ್ಕ್ ಸಿನಿಮಾದಲ್ಲಿ ಉಪೇಂದ್ರ ಅಣ್ಣನ ಮಗ ನಿರಂಜನ್ ಸುಧೀಂದ್ರ ಪತ್ರಕರ್ತನ ರೋಲ್ ಪ್ಲೇ ಮಾಡುತ್ತಿದ್ದಾರೆ. ರಚನಾ ಇಂದರ್ ನಾಯಕಿಯಾಗಿ ಸಾಥ್ ಕೊಡುತ್ತಿದ್ದಾರೆ. ಡಾ.ಗರಿಮಾ ಅವಿನಾಶ್ ವಸಿಷ್ಠ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಅಶ್ವಿನ್ ಕೆನಡಿ ಛಾಯಾಗ್ರಹಣ, ಸಚಿನ್ ಬಸ್ರೂರ್ ಸಂಗೀತ ನಿರ್ದೇಶನ, ಮಧು ಸಂಕಲನ ಚಿತ್ರಕ್ಕಿದೆ.
—-

Be the first to comment